Home ದಾವಣಗೆರೆ ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ದೊಡ್ಡ ಅಂತರದ ಗೆಲುವು: ಡಿಸಿಎಂ ಡಿ.ಕೆ. ಶಿವಕುಮಾರ್
ದಾವಣಗೆರೆಬೆಂಗಳೂರು

ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ದೊಡ್ಡ ಅಂತರದ ಗೆಲುವು: ಡಿಸಿಎಂ ಡಿ.ಕೆ. ಶಿವಕುಮಾರ್

Share
ದಾವಣಗೆರೆ
Share

ದಾವಣಗೆರೆ: “ದಿವಂಗತ ಶಾಮನೂರು ಶಿವಶಂಕರಪ್ಪನವರು ಮಾಡಿರುವ ಸೇವೆ, ಕೊಟ್ಟಿರುವ ಕೊಡುಗೆಗಳನ್ನು ಈ ಭಾಗದ ಜನ ಸ್ಮರಿಸುತ್ತಿದ್ದಾರೆ. ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ ಅವರು ದೊಡ್ಡ ಅಂತರದ ಗೆಲುವು ಸಾಧಿಸಲಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಶ್ವಾಸ ವ್ಯಕ್ತಪಡಿಸಿದರು.

ದಾವಣೆಗೆರೆಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು.

ಎರಡು ಕ್ಷೇತ್ರಗಳಲ್ಲಿನ ಉಪಚುನಾವಣೆ ಪ್ರಚಾರದ ಬಗ್ಗೆ ಕೇಳಿದಾಗ, “ನಮ್ಮ ಮುಖ್ಯಮಂತ್ರಿಗಳು ಈಗಾಗಲೇ ಉಪಚುನಾವಣೆ ಕ್ಷೇತ್ರಗಳಲ್ಲಿ ಪ್ರಚಾರ ಆರಂಭಿಸಿದ್ದಾರೆ. ನಮ್ಮ ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ ಪಕ್ಷ ಯಾರಿಗೆ ಎಲ್ಲಿ ಪ್ರಚಾರ ಮಾಡಲು ಜವಾಬ್ದಾರಿ ನಿಡಿದೆಯೋ ಆಯಾ ನಾಯಕರು ಅಲ್ಲಿ ಪ್ರಚಾರನಿರತರಾಗಿದ್ದಾರೆ. ನಾನು ಅಸ್ಸಾಂನಲ್ಲಿ ಎರಡು ದಿನ ಪ್ರಚಾರ ಮುಗಿಸಿ ಇಲ್ಲಿಗೆ ಬಂದಿದ್ದೇನೆ. ಇಂದು ದಾವಣಗೆರೆ, ನಾಳೆ ಬಾಗಲಕೋಟೆಯಲ್ಲಿ ಪ್ರಚಾರ ಮಾಡುತ್ತೇವೆ. ನಂತರ ಮತ್ತೆ ದಾವಣಗೆರೆ ಹಾಗೂ ಬಾಗಲಕೋಟೆಯಲ್ಲಿ ಪ್ರಚಾರ ಮಾಡುತ್ತೇವೆ. ಈ ಮಧ್ಯೆ ಎರಡು ದಿನ ಕೇರಳಕ್ಕೆ ಹಾಗೂ ಒಂದು ದಿನ ಅಸ್ಸಾಂಗೆ ಹೋಗಿ ಪ್ರಚಾರ ಮಾಡುತ್ತೇನೆ” ಎಂದು ಹೇಳಿದರು.

Share

Leave a comment

Leave a Reply

Your email address will not be published. Required fields are marked *