Home ದಾವಣಗೆರೆ BIG BREAKING: ದಾವಣಗೆರೆ ಕಾಂಗ್ರೆಸ್ ಬಂಡಾಯ ಶಮನಗೊಳಿಸಿದ ಸಿಎಂ ಸಿದ್ದರಾಮಯ್ಯ: ಸಾದಿಕ್ ಪೈಲ್ವಾನ್ ಜೊತೆಗಿನ ಸಂಧಾನ ಸಕ್ಸಸ್!
ದಾವಣಗೆರೆಬೆಂಗಳೂರು

BIG BREAKING: ದಾವಣಗೆರೆ ಕಾಂಗ್ರೆಸ್ ಬಂಡಾಯ ಶಮನಗೊಳಿಸಿದ ಸಿಎಂ ಸಿದ್ದರಾಮಯ್ಯ: ಸಾದಿಕ್ ಪೈಲ್ವಾನ್ ಜೊತೆಗಿನ ಸಂಧಾನ ಸಕ್ಸಸ್!

Share
ದಾವಣಗೆರೆ
Share

ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಸಾದಿಕ್ ಪೈಲ್ವಾನ್ ಮನವೊಲಿಸುವಲ್ಲಿ ಸಿಎಂ ಸಿದ್ದರಾಮಯ್ಯ ಅವರು ಯಶಸ್ವಿಯಾಗಿದ್ದಾರೆ.

ಸಿಎಂ ಸಿದ್ದರಾಮಯ್ಯರು ತಮ್ಮ ಕಚೇರಿಗೆ ಕರೆಯಿಸಿಕೊಂಡು ಸಾದಿಕ್ ಪೈಲ್ವಾನ್ ಅಸಮಾಧಾನ ಶಮನಗೊಳಿಸುವಲ್ಲಿ ಸಕ್ಸಸ್ ಆಗಿದ್ದು, ಈ ಮೂಲಕ ಪ್ರಬಲ ಪೈಪೋಟಿ ನೀಡುವುದಾಗಿ ಘೋಷಿಸಿದ್ದರೂ ಅಂತಿಮವಾಗಿ ಸಿಎಂ ಮತ್ತು ಡಿಸಿಎಂ ಡಿ. ಕೆ. ಶಿವಕುಮಾರ್ ಅವರ ಸಂಧಾನ ಯತ್ನ ಫಲಕೊಟ್ಟಿದೆ.

ಕಾಂಗ್ಲೆಸ್ ನಾಯಕರಾದ ಸಲೀಂ ಅಹ್ಮದ್, ರಿಜ್ವಾಲ್ ಅರ್ಷದ್ ಸಂಧಾನ ಯತ್ನ ವಿಫಲವಾಗಿತ್ತು. ನಿನ್ನೆ ಮಧ್ಯಾಹ್ನ 3 ಗಂಟೆಗೆ ನಾಮಪತ್ರ ವಾಪಸ್ ಪಡೆಯಲು ಕೊನೆ ಅವಕಾಶ ಇತ್ತು. ಬೆಳಿಗ್ಗೆಯಿಂದಲೂ ಸಾದಿಕ್ ಪೈಲ್ವಾನ್ ಮನೆಗೆ ತಮ್ಮ ಅಯೂಬ್ ಪೈಲ್ವಾನ್, ಮಹಾನಗರ ಪಾಲಿಕೆ ಮಾಜಿ ಮೇಯರ್, ಮಾಜಿ ಸದಸ್ಯರು, ಕಾಂಗ್ರೆಸ್ ಮುಖಂಡರು ಭೇಟಿ ನೀಡಿ ನಾಮಪತ್ರ ವಾಪಸ್ ಪಡೆಯುವಂತೆ ಮನವೊಲಿಸಲು ಯತ್ನಿಸಿದರಾದರೂ ಸಫಲವಾಗಿರಲಿಲ್ಲ.

ನಾಮಪತ್ರ ವಾಪಸ್ ಪಡೆಯದ ಪಕ್ಷೇತರ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರ ಪರ ಮುಸ್ಲಿಂ ಯುವಕರು ಘೋಷಣೆಗಳನ್ನು ಹಾಕಿದ್ದರು. ಈ ಬಾರಿ ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದರು. ಆದರೆ ಬೆಂಗಳೂರಿಗೆ ಹೋಗುತ್ತಿದ್ದಂತೆ ಎಲ್ಲವೂ ಉಲ್ಟಾ ಪಲ್ಟಾ ಆಗಿದೆ.

ಈ ಮೂಲಕ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಎದುರಾಗಿದ್ದ ದೊಡ್ಡ ಮಟ್ಟದ ವಿಘ್ನ ನಿವಾರಣೆಯಾದಂತಾಗಿದೆ.

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡದಿದ್ದಕ್ಕೆ ಅಸಮಾಧಾನಗೊಂಡು ಸಾದಿಕ್ ಪೈಲ್ವಾನ್ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಕಾಂಗ್ರೆಸ್ ನಾಯಕರಾದ ಸಲೀಂ ಅಹ್ಮದ್ ಮತ್ತು ರಿಜ್ವಾನ್ ಅರ್ಷದ್ ಅವರ ಮೊದಲ ಹಂತದ ಸಂಧಾನ ವಿಫಲವಾಗಿತ್ತು. ಆದರೆ, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಖುದ್ದಾಗಿ ಸಾದಿಕ್ ಪೈಲ್ವಾನ್ ಅವರನ್ನು ಬೆಂಗಳೂರಿಗೆ ಕರೆಸಿಕೊಂಡು ಮಾತುಕತೆ ನಡೆಸಿದ ನಂತರ, ಸಾದಿಕ್ ತಮ್ಮ ಹಠ ಬಿಟ್ಟು ಪಕ್ಷದ ಅಧಿಕೃತ ಅಭ್ಯರ್ಥಿ ಸಮರ್ಥ್ ಶಾಮನೂರು ಅವರಿಗೆ ಬೆಂಬಲ ಸೂಚಿಸಲು ಒಪ್ಪಿದ್ದಾರೆ.

Share

Leave a comment

Leave a Reply

Your email address will not be published. Required fields are marked *