Home ದಾವಣಗೆರೆ ದಾವಣಗೆರೆ ದಕ್ಷಿಣ ಉಪಚುನಾವಣೆ: ಬಿ. ಎಸ್. ಯಡಿಯೂರಪ್ಪ ಜೊತೆ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ
ದಾವಣಗೆರೆಬೆಂಗಳೂರು

ದಾವಣಗೆರೆ ದಕ್ಷಿಣ ಉಪಚುನಾವಣೆ: ಬಿ. ಎಸ್. ಯಡಿಯೂರಪ್ಪ ಜೊತೆ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ

Share
ದಾವಣಗೆರೆ
Share

ದಾವಣಗೆರೆ: ನಗರದ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ರಂಗೇರಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರು ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಸೇರಿದಂತೆ ನಾಯಕರ ಜೊತೆ ನಾಮಪತ್ರ ಸಲ್ಲಿಸಿದರು.

ಬೆಳಿಗ್ಗೆಯೇ ಬಂದು ನಾಮಪತ್ರ ಸಲ್ಲಿಸಿದ್ದ ಶ್ರೀನಿವಾಸ್ ದಾಸಕರಿಯಪ್ಪ ಅವರು, ಯಡಿಯೂರಪ್ಪ, ಹೆಚ್. ಎಸ್. ಶಿವಶಂಕರ್, ಮಾಜಿ ಸಂಸದ ಡಾ. ಜಿ. ಎಂ. ಸಿದ್ದೇಶ್ವರ, ಮಾಜಿ ಸಚಿವ ಎಂ. ಪಿ. ರೇಣುಕಾಚಾರ್ಯ, ಮಾಜಿ ಶಾಸಕ ಹೆಚ್. ಎಸ್. ಶಿವಶಂಕರ್
ಜೊತೆ ದಾವಣಗೆರೆ ಮಹಾನಗರ ಪಾಲಿಕೆಗೆ ಆಗಮಿಸಿ, ಚುನಾವಣಾಧಿಕಾರಿ ಸಂತೋಷ್ ಕುಮಾರ್ ಅವರಿಗೆ ಉಮೇದುವಾರಿಕೆ ಸಲ್ಲಿಸಿದರು.

ಬೃಹತ್ ಶೋಭಯಾತ್ರೆ:

ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ದುಗ್ಗಮ್ಮ ದೇವಸ್ಥಾನದಿಂದ ಬೃಹತ್ ಶೋಭಾ ಯಾತ್ರೆಯು ಆರಂಭವಾಯಿತು. ಯಡಿಯೂರಪ್ಪ, ಜಿ. ಎಂ. ಸಿದ್ದೇಶ್ವರ, ಎಂ. ಪಿ. ರೇಣುಕಾಚಾರ್ಯ, ಹೆಚ್. ಎಸ್. ಶಿವಶಂಕರ್, ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ವಿನಯ್ ಕುಮಾರ್ ಸೇರಿದಂತೆ ಹಲವು ನಾಯಕರು ಪಾಲ್ಗೊಂಡರು.

ದುಗ್ಗಮ್ಮ ದೇವಸ್ಥಾನ, ಎಸ್.ಕೆ.ಪಿ ರಸ್ತೆ, ಗಣಪತಿ ದೇವಸ್ಥಾನ, ಚೌಕಿಪೇಟೆ, ಬಕ್ಕೇಶ್ವರ ದೇವಸ್ಥಾನ, ಎಂ.ಜಿ. ರಸ್ತೆ, ಬೆಳ್ಳುಳ್ಳಿ ಗಲ್ಲಿ, ಕಾಯಿಪೇಟೆ ಬಸವೇಶ್ವರ ದೇವಸ್ಥಾನ, ವಸಂತ ರಸ್ತೆ, ಬಸವನಗರ ಪೊಲೀಸ್ ಠಾಣೆ, ರೈಲ್ವೆ ಅಂಡರ್ ಪಾಸ್, ಪಿ.ಬಿ. ರಸ್ತೆ ಮುಖಾಂತರ ಮಹಾನಗರ ಪಾಲಿಕೆಯವರೆಗೆ ಶೋಭಯಾತ್ರೆ ನಡೆಯಿತು.

ಈ ಬೃಹತ್ ಶೋಭಾ ಯಾತ್ರೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ್, ಶಾಸಕ ಬಿ.ಪಿ. ಹರೀಶ್, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, ಜಿಲ್ಲಾಧ್ಯಕ್ಷ ರಾಜಶೇಖರ್ ನಾಗಪ್ಪ, ಯಶವಂತ್ ರಾವ್ ಜಾದವ್, ಬಿ.ಜಿ. ಅಜಯ್ ಕುಮಾರ್ ಸೇರಿದಂತೆ ರಾಜ್ಯದ ಅನೇಕ ಪ್ರಮುಖ ನಾಯಕರು ಪಾಲ್ಗೊಂಡಿದ್ದರು.

Share

Leave a comment

Leave a Reply

Your email address will not be published. Required fields are marked *