Home ದಕ್ಷಿಣ ಕ್ಷೇತ್ರದ ಗ್ರಾಮಗಳಲ್ಲಿ ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಅಬ್ಬರದ ಪ್ರಚಾರ: ಪುತ್ರ ಸಮರ್ಥ್ ಪರ ಮತಯಾಚನೆ.
Homeದಾವಣಗೆರೆಬೆಂಗಳೂರು

ದಕ್ಷಿಣ ಕ್ಷೇತ್ರದ ಗ್ರಾಮಗಳಲ್ಲಿ ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಅಬ್ಬರದ ಪ್ರಚಾರ: ಪುತ್ರ ಸಮರ್ಥ್ ಪರ ಮತಯಾಚನೆ.

Share
ಪ್ರಭಾ ಮಲ್ಲಿಕಾರ್ಜುನ್
Share

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆನೆಕೊಂಡದಲ್ಲಿ ಶ್ರೀ ಬಸವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಸ್ವಾಮಿಯ ಆಶೀರ್ವಾದ ಪಡೆದು ಬಳಿಕ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಿದರು.

ನಂತರ ನಾಗಮ್ಮ ಕೇಶವಮೂರ್ತಿ ಬಡಾವಣೆ, ನಾಗನೂರು, ಹದಡಿ, ಏಳನೇಕಲ್ಲು ಗ್ರಾಮಗಳಲ್ಲಿ ಮನೆಮನೆಗೆ ತೆರಳಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸುವಂತೆ ಮನವಿ ಮಾಡಿದರು.

ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ ಅವರ ಕ್ರಮ ಸಂಖ್ಯೆ – 3 ಕ್ಕೆ ಮತ ನೀಡಿ ಗೆಲ್ಲಿಸಿ ಎಂದು ಜನರಲ್ಲಿ ಮನವಿ ಮಾಡಿದರು. ಈ ವೇಳೆ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳಿಂದ ಕುಟುಂಬಗಳು ‘ ಸಶಕ್ತವಾಗಿವೆ. ಕಾಂಗ್ರೆಸ್ ನಿಂದ ಮಾತ್ರ ಅಭಿವೃದ್ಧಿ ಸಾಧ್ಯ. ಈ ಬಾರಿ ನಿಮ್ಮ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ ಅವರ ಕ್ರಮ ಸಂಖ್ಯೆ – 3 ಕ್ಕೆ ಮತ ಹಾಕಿ ಗೆಲ್ಲಿಸಲು ಜನರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರುಗಳು,ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *