Home ದಾವಣಗೆರೆ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಅಣ್ಣನ ಗೆಲುವಿಗಾಗಿ ತಂಗಿಯ ಪಾದಯಾತ್ರೆ: ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಪರ ಡಾ. ಶ್ರೇಷ್ಠ ಮತಯಾಚನೆ
ದಾವಣಗೆರೆಬೆಂಗಳೂರು

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಅಣ್ಣನ ಗೆಲುವಿಗಾಗಿ ತಂಗಿಯ ಪಾದಯಾತ್ರೆ: ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಪರ ಡಾ. ಶ್ರೇಷ್ಠ ಮತಯಾಚನೆ

Share
ದಾವಣಗೆರೆ
Share

ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರ ಪರವಾಗಿ ಅವರ ಸಹೋದರಿ ಡಾ. ಶ್ರೇಷ್ಠ ಶಾಮನೂರು ಅವರು ಇಂದು ಬಿರುಸಿನ ಪ್ರಚಾರ ನಡೆಸಿದರು.

ಕ್ಷೇತ್ರದ ವಿವಿಧ ವಾರ್ಡ್‌ಗಳಲ್ಲಿ ಕಾಲ್ನಡಿಗೆಯ ಮೂಲಕ ಮನೆಮನೆಗೆ ಭೇಟಿ ನೀಡಿದ ಡಾ. ಶ್ರೇಷ್ಠ, ಸ್ಥಳೀಯ ನಿವಾಸಿಗಳೊಂದಿಗೆ ಕುಂದುಕೊರತೆಗಳನ್ನು ಚರ್ಚಿಸಿದರು. ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ ಮತ್ತು ಶಾಮನೂರು ಕುಟುಂಬದ ಜನಪರ ಸೇವೆಯನ್ನು ಮುಂದುವರಿಸಲು ಹಸ್ತದ ಗುರುತಿಗೆ ಮತ ನೀಡುವಂತೆ ಅವರು ಮನವಿ ಮಾಡಿದರು.

“ನನ್ನ ಅಣ್ಣ ಸಮರ್ಥ್ ಅವರು ಯುವಕರ ದನಿಯಾಗಿ, ಕ್ಷೇತ್ರದ ಅಭಿವೃದ್ಧಿಗೆ ಹೊಸ ಆಯಾಮ ನೀಡಲಿದ್ದಾರೆ. ಬ್ಯಾಲೆಟ್ ಪೇಪರ್‌ನ ಕ್ರಮ ಸಂಖ್ಯೆ 3 ರಲ್ಲಿರುವ ಹಸ್ತದ ಗುರುತಿಗೆ ಮತ ಚಲಾಯಿಸುವ ಮೂಲಕ ಅವರನ್ನು ಭಾರಿ ಬಹುಮತದಿಂದ ಗೆಲ್ಲಿಸಬೇಕು,” ಎಂದು ಅವರು ಮತದಾರರಲ್ಲಿ ವಿನಂತಿಸಿಕೊಂಡರು.

ಪ್ರಚಾರದ ವೇಳೆ ಕಾಂಗ್ರೆಸ್‌ನ ಮಹಿಳಾ ಕಾರ್ಯಕರ್ತರು ಮತ್ತು ಸ್ಥಳೀಯ ಮುಖಂಡರು ಡಾ. ಶ್ರೇಷ್ಠ ಅವರಿಗೆ ಸಾಥ್ ನೀಡಿದರು.

Share

Leave a comment

Leave a Reply

Your email address will not be published. Required fields are marked *