Site icon Kannada News-suddikshana

ಹೆಲ್ಮೆಟ್ ಧರಿಸದೇ ಬೈಕ್ ಚಾಲನೆ ಮಾಡಿದವರಿಗೆ ಎಸ್ಪಿ ಕೊಟ್ಟರು ಶಾಕ್!

SUDDIKSHANA KANNADA NEWS/ DAVANAGERE/ DATE:21-02-2025

ದಾವಣಗೆರೆ: ನಗರದಲ್ಲಿ ಸಂಚರಿಸಿ ದ್ವಿಚಕ್ರ ವಾಹನ ಸವಾರರಿಗೆ ಉತ್ತಮ ಗುಣಮಟ್ಟದ ಹೆಲ್ಮೆಟ್ ಧರಿಸುವ ಹಾಗೂ ಸಂಚಾರ ನಿಯಮಗಳ ಪಾಲನೆ ಮಾಡುವ ಬಗ್ಗೆ ಎಸ್ಪಿ ಉಮಾ ಪ್ರಶಾಂತ್ ಅವರು ಜಾಗೃತಿ ಮೂಡಿಸಿದರು.

ಉತ್ತಮ ಗುಣ ಮಟ್ಟದ ಹೆಲ್ಮೆಟ್ ಧರಿಸುವುದರಿಂದ ಅಪಘಾತ ಸಂಭವಿಸಿದ ಸಂದರ್ಭ ದಲ್ಲಿ ಜೀವ ರಕ್ಷಣೆ ಸಾಧ್ಯ ಎಂದು ತಿಳಿಸಿದರು. ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ವಾಹನ ಸಂಚಾರ ನಿಯಂತ್ರಣ ಪರಿಶೀಲಿಸಿ, ಸುಗಮ ಸಂಚಾರಕ್ಕೆ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು. ವಾಹನ ಸವಾರರಿಗೆ ಸಂಚಾರ ನಿಯಮಗಳ ಪಾಲನೆ ಉಲ್ಲಂಘಿಸದಂತೆ ಎಚ್ಚರಿಕೆ ನೀಡಿದರು.

ಹೆಲ್ಮೆಟ್ ಧರಿಸದೇ ಹಾಗೂ ಉತ್ತಮ ಗುಣಮಟ್ಟದ ಹೆಲ್ಮೆಟ್ ಧರಿಸದೇ ಇರುವ ದ್ವಿಚಕ್ರ ವಾಹನ ಸವಾರರ ವಾಹನಗಳನ್ನು ತಡೆದು ಠಾಣೆಗೆ ತೆಗೆದುಕೊಂಡು ಹೋಗಿದ್ದು, ನಂತರ ಬೈಕ್ ಸವಾರರು ಹೆಲ್ಮೆಟ್ ತಂದು ತೋರಿಸಿದ ಮೇಲೆ ಎಚ್ಚರಿಕೆ ನೀಡಿ ಕಳುಹಿಸಲಾಯಿತು.

ಈ ಸಂದರ್ಭದಲ್ಲಿ ನಗರ ಡಿವೈಎಸ್ಪಿ ಶರಣಬಸವೇಶ್ವರ ಬಿ ರವರು ಸಂಚಾರ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

Exit mobile version