ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ದಾವಣಗೆರೆ (Davanagere) ಯ ಬಸವರಾಜಪೇಟೆ ಗಣೇಶ ಗದ್ದಲ ವಿಚಾರ, ಎರಡೂ ಕಡೆ ಪರಿಶೀಲಿಸಿ ಕಾನೂನು ಕ್ರಮ, ಲಾಠಿ ಚಾರ್ಜ್ ಆಗಿಲ್ಲ: ಎಸ್ಪಿ ಉಮಾ ಪ್ರಶಾಂತ್ ಸ್ಪಷ್ಟನೆ

On: October 13, 2023 9:31 AM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:13-10-2023

ದಾವಣಗೆರೆ (Davanagere) ನಗರದ ಬಸವರಾಜ ಪೇಟೆಯ ಗಣಪತಿಯ ಮೆರವಣಿಗೆಯ ವೇಳೆ ಯಾವುದೇ ಲಾಠಿ ಚಾರ್ಜ್ ಆಗಿಲ್ಲ. ಎರಡೂ ಕಡೆಯವರು ಆರೋಪ- ಪ್ರತ್ಯಾರೋಪ ಮಾಡಿದ್ದು, ಕಾನೂನು ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ದಾವಣಗೆರೆ (Davanagere) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದರು.

READ ALSO THIS STORY:

ಹಿಂದೂ ಮಹಾಗಣಪತಿ ವಿಸರ್ಜನೆಗೆ ಲಕ್ಷಾಂತರ ಜನರು: ದಾವಣಗೆರೆ (Davanagere) ಜಿಲ್ಲಾ ಪೊಲೀಸ್ ಇಲಾಖೆ ಕೊಟ್ಟಿರುವ ಕಟ್ಟುನಿಟ್ಟಿನ ಸೂಚನೆಗಳೇನು… ಎಚ್ಚರಿಕೆಗಳೇನು..?

ನಗರದ ಬಡಾವಣೆ ಪೊಲೀಸ್ ಠಾಣೆಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬಸವರಾಜಪೇಟೆಯ ಗಣೇಶ ಮೂರ್ತಿ ಮೆರವಣಿಗೆ ವೇಳೆ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಅನ್ಯ ಕೋಮಿನವರು ಮೆರವಣಿಗೆ ನಿಲ್ಲಿಸಿದರು ಎಂಬ ಆರೋಪವನ್ನು ಹಿಂದೂ ಸಂಘಟನೆಗಳು ಹಾಗೂ ಬಿಜೆಪಿ ಮುಖಂಡರು ಮಾಡಿದ್ದಾರೆ. ಪೊಲೀಸರು ಕಾನೂನು ಕ್ರಮ ತೆಗೆದುಕೊಂಡಿದ್ದಾರೆ. ಅವರು ಕೊಟ್ಟ ಮಾಹಿತಿ ಇತ್ತು. ಈಗ ಬಸವರಾಜಪೇಟೆಯಲ್ಲಿನ ನಿವಾಸಿಗಳ ಜೊತೆ ಮಾತನಾಡಿದ್ದೇನೆ. ಹಿಂದೂ ಸಂಘಟನೆಗಳ ಅಹವಾಲು ಕೇಳಿದ್ದೇನೆ. ಎರಡೂ ಕಡೆ ಪರಿಶೀಲಿಸಿ ಕ್ರಮ ಜರುಗಿಸಲಾಗುವುದು ಎಂದು ಭರವಸೆ ನೀಡಿದರು.

ಮೆರವಣಿಗೆ ಹೋಗುವ ವೇಳೆ ಮಾತಿನ ಚಕಮಕಿ ನಡೆದಿದೆ. ಪೊಲೀಸರು ಕೂಡಲೇ ಪರಿಸ್ಥಿತಿ ತಹಬದಿಗೆ ತಂದಿದ್ದಾರೆ. ಎರಡೂ ಕಡೆಯವರ ವಾದ – ಪ್ರತಿವಾದ ಆಲಿಸಿದ್ದು, ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು. ಅಲ್ಲಿನ ವಿಡಿಯೋ ತುಣುಕುಗಳು, ಸಿಸಿಟಿವಿ ಆಧರಿಸಿ ಕ್ರಮ ಜರುಗಿಸುತ್ತೇವೆ ಎಂದು ಭರವಸೆ ನೀಡಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದು, ಯಾವುದೋ ಒತ್ತಡಕ್ಕೆ ಮಣಿದು ಕಾರ್ಯನಿರ್ವಹಿಸುವುದಿಲ್ಲ. ಕಾನೂನು ಪ್ರಕಾರವೇ ಕೆಲಸ ಮಾಡುತ್ತೇವೆ. ಕಾನೂನು ಮತ್ತು ಸುವ್ಯವಸ್ಥೆ ನಮಗೆ ಮುಖ್ಯ. ಈ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸುತ್ತೇವೆ. ಯಾವುದೋ ಒಂದು ಸಮುದಾಯದ ಅಥವಾ ಧರ್ಮದ ಕೆಲಸ ಮಾಡುತ್ತಿಲ್ಲ. ಇಂಥ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಎಸ್ಪಿ ಸ್ಪಷ್ಟನೆ ನೀಡಿದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment