SUDDIKSHANA KANNADA NEWS/ DAVANAGERE/ DATE:24-01-2024
ದಾವಣಗೆರೆ: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪೋಸ್ಟ್ ಗಳಿಗೆ ಸಂಬಂಧಿಸಿದಂತೆ ಎರಡು ಪ್ರಕರಣ ದಾಖಲಾಗಿದ್ದು, ವಶಕ್ಕೂ ಪಡೆಯಲಾಗಿದೆ.
ಜನವರಿ 23ರಂದು ವಾಟ್ಸಪ್ ಗ್ರೂಪ್ ನಲ್ಲಿ ವ್ಯಕ್ತಿಯೊಬ್ಬ ರಾಮಮಂದಿರ ಉದ್ಘಾಟನೆ ಸಮಯದಲ್ಲಿ ರಜಾ ಕೊಡುವ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರಿತಂತೆ ಅವಹೇಳನವಾಗಿ ಮಾತನಾಡಿ
ವಾಯ್ಸ್ ಮೆಸೇಜ್ ಅನ್ನು ವಾಟ್ಸ್ ಆಫ್ ಗ್ರೂಪ್ ನಲ್ಲಿ ಹಾಕಿದ್ದ. ಈ ವಾಯ್ಸ್ ಮೆಸೇಜ್ ವಾಟ್ಸ್ ಆಫ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಈ ವಾಯ್ಸ್ ಮೆಸೇಜ್ ಮಾಡಿದವರ ಮೊಬೈಲ್ ನಂಬರ್ ಮಾಹಿತಿ ಸಂಗ್ರಹಿಸಲಾಯಿತು.
ವಾಟ್ಸ್ ಆಫ್ ಗ್ರೂಪ್ ನಲ್ಲಿ ವಾಯ್ಸ್ ಮೆಸೇಜ್ ಅನ್ನು ಶೇರ್ ಮಾಡಿದ್ದ ವ್ಯಕ್ತಿಯನ್ನು ಕೆಟಿಜೆ ನಗರ ಪೊಲೀಸರು ಪತ್ತೆ ಮಾಡಿ ವಶಕ್ಕೆ ಪಡೆದಿದ್ದು, ಆರೋಪಿಯು ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯವರಿಗೆ ಅವಾಚ್ಯ
ಶಬ್ದಗಳಿಂದ ಬೈದಾಡಿ ಸಮುದಾಯಗಳ ನಡುವೆ ದ್ವೇಷದ ಭಾವನೆಗಳನ್ನು ಉಂಟುಮಾಡುವ ವಾಯ್ಸ್ ಮೆಸೇಜ್ಜು ಮಾಡಿ ತನ್ನ ವಾಟ್ಸ್ ಆಫ್ ಗ್ರೂಪ್ ಮುಖಾಂತರ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದ. ಈ
ಆರೋಪಿತನ ವಿರುದ್ದ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ವಶಕ್ಕೆ ಪಡೆಯಲಾಗಿದ್ದು, ತನಿಖೆ ಮುಂದುವರಿಸಲಾಯಿತು.
ಮತ್ತೊಂದು ಪ್ರಕರಣ ಜನವರಿ 23ರಂದು ದಾವಣಗೆರೆಯ ನಿಟುವಳ್ಳಿಯ ಯುವಕನೊಬ್ಬ ಪವಿತ್ರ ಮದೀನಾದ ಮಸೀದಿಯ ಚಿತ್ರವನ್ನು ಬಳಸಿ ವಿಡಿಯೋ ಮಾಡಿ ಅದನ್ನು ತನ್ನ ಹಾಗೂ ತನ್ನ ಗೆಳಯರ ಮೊಬೈಲ್ ಗಳ
ಮುಖಾಂತರ ಹರಿದಾಡಿದೆ. ಈ ವಿಡಿಯೋ ಮುಸ್ಲಿಂ ಸಮಾಜದ ಭಾವನೆಗಳಿಗೆ ಧಕ್ಕೆ ತರುವಂತೆ ಚಿತ್ರಿಕರಿಸಿದ್ದಾರೆ. ಇದರಿಂದ ಸಾಮಾಜ ಹಾಗೂ ನಗರದಲ್ಲಿ ಅಶಾಂತಿ ಕದಡುವ ಸಾಧ್ಯತೆ ಇದ್ದು, ಕೋಮುಭಾವನೆಗೆ ಧಕ್ಕೆ ತರಲು ಪ್ರಯತ್ನಿಸುತ್ತಿರುವ ಇಂತಹ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ದಾದಾಪೀರ್ ಅವರು ನೀಡಿದ ದೂರಿನ ಮೇರೆಗೆ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ಸಂಬಂಧ ವ್ಯಕಿಯೊಬ್ಬನನ್ನು ವಶಕ್ಕೆ ಪಡೆಯಲಾಗಿದೆ.
ಸಾರ್ವಜನಿಕರ ಗಮನಕ್ಕೆ:
ದಾವಣಗೆರೆ ಜಿಲ್ಲೆಯ ಸಾರ್ವಜನಿಕರ ಗಮನಕ್ಕೆ ತರಬಯಸುವುದೇನೆನಂದರೆ, ವಾಟ್ಸ್ಆಪ್, ಫೇಸ್ಬುಕ್, ಇನ್ಸ್ಟಾಗ್ರಾಮ್, ಟ್ವಿಟ್ಟರ್ ಹಾಗೂ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ರೀತಿಯ ಪ್ರಚೋದನಕಾರಿ, ವ್ಯಕ್ತಿ ನಿಂದನೆ, ಧಾರ್ಮಿಕ ನಿಂದನೆ, ದ್ವೇಷ ಭಾಷಣ, ದೇಶ ವಿರೋಧಿ ಪೋಸ್ಟ್ ಗಳು ಸೇರಿದಂತೆ ಇತ್ಯಾದಿ ಆಕ್ಷೇಪಾರ್ಹ ಪೋಸ್ಟ್ ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕುವುದು ಮತ್ತು ಶೇರ್ ಮಾಡುವುದು ಕಾನೂನು ಬಾಹಿರ. ಇಂಥ ಪೋಸ್ಟ್ ಗಳನ್ನು ಮಾಡುವಂತಹ ವ್ಯಕ್ತಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಸಾಮಾಜಿಕ ಜಾಲಾತಾಣಗಳ ಬಳಕೆಯಲ್ಲಿರಲಿ ಎಚ್ಚರ ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅವರು ಎಚ್ಚರಿಕೆ ನೀಡಿದ್ದಾರೆ.