ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

Davanagere: ಎಸ್ ಎಸ್ – ಬೊಮ್ಮಾಯಿ ಭೇಟಿ ಬಳಿಕ ರಾಜ್ಯ ರಾಜಕಾರಣದಲ್ಲಿ ಸಂಚಲನ: ಚರ್ಚೆ ಬಗ್ಗೆ ಏನಂದ್ರು ನಾಯಕರು…?

On: June 14, 2023 12:34 PM
Follow Us:
SS- BOMMAI MEET
---Advertisement---

SUDDIKSHANA KANNADA NEWS/ DAVANAGERE/ DATE:14-06-2023

 

ದಾವಣಗೆರೆ: ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರನ್ನು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ (Basavaraj Bommai) ಅವರು ನಗರದ ಹೊರವಲಯದಲ್ಲಿನ ರೆಸಾರ್ಟ್ ವೊಂದರಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡುವಂತೆ ಮಾಡಿದೆ.

SS-BOMMAI VISIT

ಸುಮಾರು 25 ನಿಮಿಷಗಳ ಕಾಲದವರೆಗೆ ಕಾಂಗ್ರೆಸ್ ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹಾಗೂ ಬೊಮ್ಮಾಯಿ ಅವರು ಮಂಗಳವಾರ ರಾತ್ರಿ 7.30ರಿಂದ ಸುದೀರ್ಘ ಚರ್ಚೆ ನಡೆಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಶಿಗ್ಗಾಂವಿಯಿಂದ ಬೆಂಗಳೂರಿಗೆ ತೆರಳುವ ಮಾರ್ಗ ಮಧ್ಯೆ ಬಸವರಾಜ್ ಬೊಮ್ಮಾಯಿ ಅವರು ಶಾಮನೂರು ಶಿವಶಂಕರಪ್ಪರನ್ನು ಭೇಟಿ ಮಾಡಿದ್ದಾರೆ. ಜೂ. 16ರಂದು ಶಾಮನೂರು ಶಿವಶಂಕರಪ್ಪರ ಜನುಮದಿನ ಇದ್ದು, ಶುಭ ಕೋರಲು ಭೇಟಿ ಮಾಡಿದ್ದರು ಎಂದು ಮೂಲಗಳು ತಿಳಿಸಿವೆ. ಆದರೂ ಭೇಟಿ ಸಮಯದಲ್ಲಿ ರಾಜಕೀಯಕ್ಕೆ ಸಂಬಂಧಿಸಿದ ವಿಷಯಗಳು ಬಗ್ಗೆ ಸಮಾಲೋಚನೆ ನಡೆದಿರುವ ಕುರಿತಂತೆ ತಳ್ಳಿ ಹಾಕುವಂತಿಲ್ಲ. ಒಟ್ಟಾರೆ, ಈಗಿನ ರಾಜ್ಯ ರಾಜಕಾರಣದಲ್ಲಿ ಇಬ್ಬರ ಭೇಟಿ ವದಂತಿಗಳಿಗೂ ಕಾರಣವಾಗಿದೆ.

ರಾಜಕಾರಣ ಬೆರೆಸುವುದು ಸರಿಯಲ್ಲ:

ಶಾಮನೂರು ಶಿವಶಂಕರಪ್ಪ ಅವರು ನಮ್ಮ ಹಿರಿಯರು ಮತ್ತು ದೂರದ ಸಂಬಂಧಿಯೂ ಹೌದು ಹಲವಾರು ಬಾರಿ ನಾವು ಅವರು ನಮ್ಮ ಮನೆಯಲ್ಲಿ ಭೇಟಿ ಆಗಿದ್ದೇವೆ. ಇದರಲ್ಲಿ ರಾಜಕಾರಣ ಬೆರೆಸುವುದು ಸೂಕ್ತವಲ್ಲ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ನಾನು ಶಿಗ್ಗಾಂವಿಯಿಂದ ಬೆಂಗಳೂರಿಗೆ ಬರುವಾಗ ರಾತ್ರಿ‌ ಊಟ ಮಾಡಲು ಹೊಟೆಲ್ ಗೆ ಹೋದಾಗ ಅವರು ತಮ್ಮ ಮೊಮ್ಮಕ್ಕಳ ಬಗ್ಗೆ ಹೊಸ ಸಂಬಂಧದ ಕುರಿತು ಚರ್ಚೆ ಮಾಡಲು ಸೇರಿದ್ದರು. ಆ ಸಂದರ್ಭದಲ್ಲಿ ಅವರ ಜೊತೆಗೆ ಹತ್ತು ನಿಮಿಷ ಉಭಯ ಕುಶಲೊಪರಿ ಮಾತನಾಡಿದ್ದು ಯಾವುದೇ ರಾಜಕೀಯ ವಿಷಯ ಪ್ರಸ್ತಾಪ ಆಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸ್ನೇಹ ಸಂಬಂಧಗಳೇ ಬೇರೆ, ರಾಜಕೀಯ ಸಂಬಂಧವೇ ಬೇರೆ. ನಾನು ನನ್ನ ರಾಜಕೀಯ ನಿಲುವಿನಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.

ಎಸ್. ಎಸ್. ಏನಂದ್ರು..?

ಇನ್ನು ಭೇಟಿ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಾಮನೂರು ಶಿವಶಂಕರಪ್ಪ ಅವರು, ನಾವು ಬೊಮ್ಮಾಯಿ ಕುಟುಂಬದವರು ಬೀಗರು. ತುಂಬಾ ದಿನಗಳ ಬಳಿಕ ಭೇಟಿಯಾಗಿದ್ದೆವು. ರಾಜಕೀಯದ ಬಗ್ಗೆ ಯಾವುದೇ ಚರ್ಚೆ ನಡೆಸಿಲ್ಲ ಎಂದು ಶಾಮನೂರು ಶಿವಶಂಕರಪ್ಪ ಅವರು ತಿಳಿಸಿದರು.

ರಾಜಕೀಯ ಹೊಂದಾಣಿಕೆ ಮಾಡಿಕೊಳ್ಳುವುದಿದ್ದರೆ, ಚುನಾವಣೆಗೆ ಮುನ್ನ ಮಾಡಿಕೊಳ್ಳುತ್ತಿದ್ದೆವು. ಈಗ ಆ ಬಗ್ಗೆ ಮಾತನಾಡುವುದು ಅಪ್ರಸ್ತುತ. ಹಾಗಾಗಿ, ಹೆಚ್ಚಿಗೆ ಮಾತನಾಡೋಲ್ಲ. ಇದನ್ನು ಬೆಳೆಸಿಕೊಂಡು ಹೋಗುವುದು ಬೇಡ
ಎಂದು ಸ್ಪಷ್ಟನೆ ನೀಡಿದರು.

Davanagere: Ss-Bommai visit, Davanagere Latest news, Davanagere political news, Davanagere Ss- Bommai Discussion, Davanagere news, 

ದಾವಣಗೆರೆಯಲ್ಲಿ ಎಸ್ ಎಸ್ – ಬೊಮ್ಮಾಯಿ ಭೇಟಿ, ದಾವಣಗೆರೆಯಲ್ಲಿ ಏನಂದ್ರು ಎಸ್ ಎಸ್, ದಾವಣಗೆರೆ ಸುದ್ದಿ, ದಾವಣಗೆರೆಯಲ್ಲಿ ರಾಜಕೀಯ ನಾಯಕರ ಭೇಟಿ 

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment