Home ದಾವಣಗೆರೆ ಬರದ ಸಂಕಷ್ಟದ ಕಾರಣಕ್ಕೆ ನನ್ನ ಜನ್ಮದಿನದ ಆಚರಣೆ ಬೇಡ: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಮನವಿ 
ದಾವಣಗೆರೆನವದೆಹಲಿಬೆಂಗಳೂರು

ಬರದ ಸಂಕಷ್ಟದ ಕಾರಣಕ್ಕೆ ನನ್ನ ಜನ್ಮದಿನದ ಆಚರಣೆ ಬೇಡ: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಮನವಿ 

Share
ಎಸ್.ಎಸ್. ಮಲ್ಲಿಕಾರ್ಜುನ್
Share
ದಾವಣಗೆರೆ: ರಾಜ್ಯ ಮತ್ತು ಜಿಲ್ಲೆಯಲ್ಲಿ ಸಮರ್ಪಕ ಮಳೆಯಾಗದೆ ಬರ ಪರಿಸ್ಥಿತಿ ಉಂಟಾಗಿದ್ದು, ರೈತರು ಹಾಗೂ ಸಾರ್ವಜನಿಕರು ಸಂಕಷ್ಟ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟಂಬರ್‌ 22ರಂದು ತಮ್ಮ ಜನ್ಮದಿನವನ್ನು ಅದ್ದೂರಿಯಾಗಿ ಆಚರಿಸದಂತೆ ಅಭಿಮಾನಿಗಳು, ಕಾರ್ಯಕರ್ತರು, ಸ್ನೇಹಿತರು ಹಾಗೂ ಹಿತೈಷಿಗಳಿಗೆ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಮನವಿ ಮಾಡಿದ್ದಾರೆ.
ರಾಜ್ಯ ಮತ್ತು ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ನನ್ನ ಜನ್ಮದಿನವನ್ನು ಸಂಭ್ರಮದಿಂದ ಆಚರಿಸುವುದು ಸೂಕ್ತವಲ್ಲ ಎಂಬುದು ನನ್ನ ಭಾವನೆ ಎಂದು ಅವರು ತಿಳಿಸಿದ್ದಾರೆ.ʼ
ಜನ್ಮದಿನದ ಅಂಗವಾಗಿ ಕೇಕ್ ಕತ್ತರಿಸುವುದು, ಬ್ಯಾನರ್‌ಗಳನ್ನು ಹಾಕುವುದು, ಅದ್ದೂರಿ ಕಾರ್ಯಕ್ರಮಗಳನ್ನು ಆಯೋಜಿಸುವುದು ಹಾಗೂ ಇತರೆ ಸಂಭ್ರಮಾಚರಣೆಗಳನ್ನು ನಡೆಸಬಾರದು ಎಂದು ಅವರು ಕೋರಿದ್ದಾರೆ.
ಅಭಿಮಾನಿಗಳು, ಕಾರ್ಯಕರ್ತರು, ಸ್ನೇಹಿತರು ಹಾಗೂ ಹಿತೈಷಿಗಳ ಪ್ರೀತಿ ಮತ್ತು ಶುಭಾಶಯಗಳೇ ನನಗೆ ಅತ್ಯಂತ ಅಮೂಲ್ಯ. ಅನಗತ್ಯ ಸಂಭ್ರಮಾಚರಣೆಯ ಬದಲು ಸಂಕಷ್ಟದಲ್ಲಿರುವ ರೈತರ ಪರಿಸ್ಥಿತಿಗೆ ಸ್ಪಂದಿಸಬೇಕು ಎಂದು ಮನವಿ ಮಾಡಿದ್ದಾರೆ.
ರೈತರ ಸಂಕಷ್ಟಕ್ಕೆ ಸ್ಪಂದಿಸೋಣ ಎಂಬ ಸಂದೇಶದೊಂದಿಗೆ ಸರಳತೆ ಹಾಗೂ ಸಾಮಾಜಿಕ ಕಾಳಜಿಗೆ ಆದ್ಯತೆ ನೀಡುವಂತೆ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ರಾಜ್ಯದ ಜನತೆ ಮತ್ತು ದಾವಣಗೆರೆ ಜಿಲ್ಲೆಯ ಜನತೆಯಲ್ಲಿ ಕೋರಿದ್ದಾರೆ.
Share

Leave a comment

Leave a Reply

Your email address will not be published. Required fields are marked *