Home ದಾವಣಗೆರೆ ಉಗ್ರರ ಜೊತೆ ಸಂಪರ್ಕ ಹೊಂದಿದ್ದ ದಾವಣಗೆರೆ ಯುವಕನ ಹಿಂದೆ ಯಾರಿದ್ದಾರೆಂಬ ತನಿಖೆ ನಡೆಸಿ, ಅಕ್ರಮ ವಲಸಿಗರ ಗಡೀಪಾರು ಮಾಡಿ: ರಾಜನಹಳ್ಳಿ ಶಿವಕುಮಾರ್ ಆಗ್ರಹ
ದಾವಣಗೆರೆಕ್ರೈಂ ನ್ಯೂಸ್ನವದೆಹಲಿಬೆಂಗಳೂರು

ಉಗ್ರರ ಜೊತೆ ಸಂಪರ್ಕ ಹೊಂದಿದ್ದ ದಾವಣಗೆರೆ ಯುವಕನ ಹಿಂದೆ ಯಾರಿದ್ದಾರೆಂಬ ತನಿಖೆ ನಡೆಸಿ, ಅಕ್ರಮ ವಲಸಿಗರ ಗಡೀಪಾರು ಮಾಡಿ: ರಾಜನಹಳ್ಳಿ ಶಿವಕುಮಾರ್ ಆಗ್ರಹ

Share
ದಾವಣಗೆರೆ
Share

ದಾವಣಗೆರೆ: ಪಾಕಿಸ್ತಾನ ಉಗ್ರರ ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಬಂಧಿತನಾಗಿರುವ ದಾವಣಗೆರೆಯ ಜಮೀರ್ ಖಾನ್ ನಂತೆ ಇತರರೂ ದಾವಣಗೆರೆಯಲ್ಲಿ ದೇಶದ್ರೋಹಿ ಚಟುವಟಿಕೆಗಳಲ್ಲಿ ತೊಡಗಿರುವ ಅನುಮಾನ ಇದ್ದು, ಈ ಕುರಿತಂತೆ ಸಮಗ್ರ ತನಿಖೆ ನಡೆಸಬೇಕು. ಇಲ್ಲಿ ನೆಲಿಸಿರುವ ಅಕ್ರಮ ಬಾಂಗ್ಲಾ ವಲಸಿಗರು ನೆಲೆಸಿದ್ದು, ಈ ಬಗ್ಗೆಯೂ ಕ್ರಮ ಜರುಗಿಸಬೇಕು ಎಂದು ಬಿಜೆಪಿ ಮುಖಂಡರೂ ಆದ ದೂಡಾ ಮಾಜಿ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್ ಆಗ್ರಹಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ದೇಶದ್ರೋಹಿಗಳ ಸಂಖ್ಯೆ ಹೆಚ್ಚಾಗಿದೆ. ಪಾಕಿಸ್ತಾನ ಪರ ಜೈಕಾರ ಹಾಕುವುದು, ತೆರೆಮರೆಯಲ್ಲೇ ಪಾಕಿಸ್ತಾನದ ಉಗ್ರರ ಜೊತೆ ಸಂಪರ್ಕ ಇಟ್ಟುಕೊಳ್ಳುವುದು, ಶತ್ರುರಾಷ್ಟ್ರದ ಬಗ್ಗೆ ಪ್ರೀತಿ ತೋರಿಸುವಂಥ ಅನೇಕ ಪ್ರಕರಣಗಳು ಈಗಾಗಲೇ ಬೆಳಕಿಗೆ ಬಂದಿವೆ. ಈಗ ದಾವಣಗೆರೆ, ತುಮಕೂರಿನಲ್ಲೂ ಭಯೋತ್ಪಾದಕ ಸಂಘಟನೆಗಳ ಜೊತೆ ಗುರುತಿಸಿಕೊಳ್ಳುವಂಥ ದೇಶದ್ರೋಹಿಗಳು ಸಿಕ್ಕಿದ್ದು, ಈ ಬಗ್ಗೆ ಎನ್ ಐಎ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.

ದಾವಣಗೆರೆಯ ರೈಲ್ವೆ ನಿಲ್ದಾಣದಲ್ಲಿ ಜಮೀರ್ ಖಾನ್ ಬಂಧಿಸಿರುವ ವಿಡಿಯೋ ವೈರಲ್ ಆಗಿದೆ. ಭಾರತದಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಸಂಚು ರೂಪಿಸುವ ಮುನ್ನವೇ ಶಂಕಿತ ಭಯೋತ್ಪಾದಕರ ಬಂಧನವಾಗಿದೆ. ದಾವಣಗೆರೆಯ ಬಿಡಿ ಲೇಔಟ್ ನ 22 ವರ್ಷದ ಜಮೀರ್ ಖಾನ್, ತುಮಕೂರಿನ ಅಲ್ಲಾಭಕ್ಷಿ ಜೊತೆ ಇತರರು ಭಯೋತ್ಪಾದಕರ ಜೊತೆ ನಿರಂತರ ಸಂಪರ್ಕದಲ್ಲಿರುವ ಸಾಧ್ಯತೆ ಹೆಚ್ಚಿದ್ದು, ವಿಚಾರಣೆ ನಡೆಸಿ ಉಳಿದವರ ಬಂಧನ ಆಗಲೇಬೇಕು ಎಂದು ಹೇಳಿದ್ದಾರೆ.

ಐಎಸ್ಐಎಸ್ ಗೆ ಫಂಡಿಂಗ್ ಮಾಡುತ್ತಿದ್ದ ಪಾಕಿಸ್ತಾನದ ಶಾಬಾಸ್ ಭುಟ್ಟಿ ಹಾಗೂ ರಾಣಾ ಉನೇನ್ ಎನ್ನುವರ ಜೊತೆ ನಿರಂತರ ಸಂಪರ್ಕದಲ್ಲಿದ್ದ ಈ ಯುವಕರಿಗೆ ಕಠಿಣ ಶಿಕ್ಷೆ ಆಗಬೇಕು. ವಾಟ್ಸಾಪ್, ಇನ್ಟಾಗ್ರಾಂ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ನಿರಂತರವಾಗಿ ಸಂಪರ್ಕದಲ್ಲಿ ಹಲವು ಮಂದಿ ಇದ್ದು, ಪತ್ತೆ ಹಚ್ಚಬೇಕಿದೆ. ದೇಶದಲ್ಲಿ ಸಂಚು ನಡೆಸಲು ಭಾರತದ ಮುಸ್ಲಿಂ ಯುವಕರನ್ನು ಐಎಸ್ಐಎಸ್ ಭಯೋತ್ಪಾದಕ ಸಂಘಟನೆ ಬಳಕೆ ಮಾಡಿಕೊಳ್ಳುತ್ತಿದ್ದು, ಕಾಂಗ್ರೆಸ್ ಸರ್ಕಾರದ ಹೆಚ್ಚಾದ ಮುಸ್ಲಿಂ ತುಷ್ಟೀಕರಣವೇ ಇಂಥವರು ಬಲವಾಗಿ ಬೇರೂರಲು ಸಾಧ್ಯವಾಗಿದೆ ಎಂದು ಆರೋಪಿಸಿದ್ದಾರೆ.

ದಾವಣಗೆರೆ ಜಿಲ್ಲೆಯಲ್ಲಿ ನಾಲ್ಕು ಸಾವಿರಕ್ಕೂ ಹೆಚ್ಚು ಅಕ್ರಮ ಬಾಂಗ್ಲಾ ವಲಸಿಗರಿದ್ದಾರೆ ಎಂಬ ಮಾಹಿತಿ ಇದೆ. ಈ ಹಿಂದೆ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ ಹಚ್ಚಿ ದೂರನ್ನು ಸಹ ದಾಖಲಿಸಲಾಗಿತ್ತು. ಈಗ ನೆಲೆಸಿರುವ ಅಕ್ರಮ ಬಾಂಗ್ಲಾ ವಲಸಿಗರಿಂದ ಆಂತರಿಕ ಭದ್ರತೆಗೆ ಧಕ್ಕೆ ಇದೆ. ಇಂಥವರನ್ನು ಗುರುತಿಸಿ ಜಿಲ್ಲೆಯಿಂದ ಮಾತ್ರವಲ್ಲ, ರಾಜ್ಯದಿಂದಲೇ ಗಡೀಪಾರು ಮಾಡಬೇಕಿದೆ. ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಅನಾಹುತ ಖಚಿತ. ಪೊಲೀಸ್ ಇಲಾಖೆಯು ಈ ಬಗ್ಗೆ ಗಂಭೀರ ಕ್ರಮ ತೆಗೆದುಕೊಂಡು ಮುಂದಾಗುವ ಅಪಾಯ ತಪ್ಪಿಸಬೇಕು ಎಂದು ರಾಜನಹಳ್ಳಿ ಶಿವಕುಮಾರ್ ಆಗ್ರಹಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Recent Posts

Recent Comments

No comments to show.
Related Articles