ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

Davanagere: ದಾವಣಗೆರೆಯಲ್ಲಿ ಅ.16 ರಂದು ಬೃಹತ್ ಉದ್ಯೋಗ ಮೇಳ, 150 ಕ್ಕಿಂತ ಹೆಚ್ಚು ಕಂಪನಿಗಳು ಭಾಗಿ, ಸಾವಿರ ಉದ್ಯೋಗ ನಿರೀಕ್ಷೆ: ಡಿಸಿ

On: October 12, 2023 12:37 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:12-10-2023

ದಾವಣಗೆರೆ (Davanagere): ಜಿಲ್ಲೆಯ ನಿರುದ್ಯೋಗ ಯುವಕ, ಯುವತಿಯರು ಹಾಗೂ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಉಜ್ವಲವಾಗಿಸಲು ಅಕ್ಟೋಬರ್ 16 ರಂದು ದಾವಣಗೆರೆ ನಗರದ ಹೈಸ್ಕೂಲ್ ಮೈದಾನದಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ತಿಳಿಸಿದರು.

READ ALSO THIS STORY:

ಸುರಕ್ಷಿತವಾಗಿದ್ದಾರೆ, ಏನೂ ತೊಂದರೆ ಇಲ್ಲ, ಯುದ್ಧಪೀಡಿತ ಇಸ್ರೇಲ್ (Israel)ನಲ್ಲಿ ಸಿಲುಕಿರುವ ದಾವಣಗೆರೆಯ ಹಿಲ್ಡಾ ಮೊಂತೇರೋ: ಇನ್ನು 2 ವರ್ಷ ಯಾಕೆ ಬರೋಲ್ಲ ದಾವಣಗೆರೆಗೆ….?

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಕ್ಟೋಬರ್ 16 ರಂದು ಹಮ್ಮಿಕೊಳ್ಳಲಾಗಿರುವ ಬೃಹತ್ ಉದ್ಯೋಗ ಮೇಳದ ಕುರಿತು ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿನ ಗ್ರಾಮಾಂತರ ಪ್ರದೇಶದ ಯುವ ಜನಾಂಗಕ್ಕೆ ಉದ್ಯೋಗಾವಕಾಶ ಕಲ್ಪಿಸಿಕೊಡಲು ಮತ್ತು ಉದ್ಯೋಗಕ್ಕಾಗಿ ವೇದಿಕೆಯನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಪ್ರತಿ ಎರಡು ತಿಂಗಳಿಗೊಮ್ಮೆ ಉದ್ಯೋಗ ಮೇಳವನ್ನು ಆಯೋಜಿಸಲು ಜಿಲ್ಲಾ ಆಡಳಿತ ಗುರಿ ಹೊಂದಿದೆ. ಇಲ್ಲಿ ಕನಿಷ್ಠ ಎಸ್.ಎಸ್.ಎಲ್.ಸಿ ಯಿಂದ ಐಟಿಐ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿ, ವೃತ್ತಿಪರ ಕೋರ್ಸ್‍ಗಳಲ್ಲಿ ಉತ್ತೀರ್ಣರಾದವರು ಭಾಗವಹಿಸಬಹುದಾಗಿದೆ. ಉದ್ಯೋಗ ನೀಡಲು 150 ಕ್ಕಿಂತಲೂ ಹೆಚ್ಚಿನ ಕಂಪನಿಗಳಲ್ಲಿ ಇಲ್ಲಿಗೆ ಆಹ್ವಾನಿಸಲಾಗುತ್ತಿದೆ. ಅದರಲ್ಲಿ ಐಟಿ, ಆಟೋಮೊಬೈಲ್, ಖಾಸಗಿ ಬ್ಯಾಂಕಿಂಗ್, ಟೆಕ್ಸ್‍ಟೈಲ್, ಫೈನಾನ್ಸ್, ಆರೋಗ್ಯ ಮತ್ತು ಫಾರ್ಮಸಿ, ಜ್ಯೂಯಲರಿ, ವಿಮಾ ಕಂಪನಿ, ಫರ್ಟಿಲೈಸರ್ ಕ್ಷೇತ್ರದಲ್ಲಿನ ವಿವಿಧ ಉದ್ಯೋಗದಾತರು ಭಾಗವಹಿಸುವರು.

ಮೇಳವು ಅ.16 ರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2.30 ರ ವರೆಗೆ ನಡೆಯಲಿದ್ದು ಅಭ್ಯರ್ಥಿಗಳು ತಮ್ಮ ಸ್ವವಿವರ ಹಾಗೂ ಮೂಲ ದಾಖಲಾತಿಗಳೊಂದಿಗೆ ಭಾಗವಹಿಸಬೇಕು. ಕಂಪನಿಯವರು ಪರಿಶೀಲನೆ ಮತ್ತು ನೇರ ಸಂದರ್ಶನ ನಡೆಸಿ ಸ್ಥಳದಲ್ಲಿಯೇ ನೇಮಕಾತಿ ಆದೇಶ ನೀಡುವರು, ಜಿಲ್ಲೆಯ ಯುವ ಜನರು ಮೇಳದ ಉಪಯೋಗ ಮಾಡಿಕೊಳ್ಳಬೇಕೆಂದರು.

ನಿರುದ್ಯೋಗಿಗಳು, ವಿದ್ಯಾರ್ಥಿಗಳು ಕ್ಯೂ.ಆರ್ ಕೋಡ್ ಮೂಲಕ ಹೆಸರು ನೋಂದಾಯಿಸಿಕೊಳ್ಳುವ ಪ್ರಾತ್ಯಕ್ಷಿಕೆಯನ್ನು ಪ್ರಸ್ತುತ ಪಡಿಸಿದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment