Home ದಾವಣಗೆರೆ ಕುಡಿಯುವ ನೀರಿಗಾಗಿ ಹರಿದ ಭದ್ರಾ ಜಲಾಶಯದ ನೀರು, ನಾಲೆ ಅಂಚಿನಲ್ಲಿ ಮೋಟಾರ್ ಇಡುವಂತಿಲ್ಲ: ಜಿಲ್ಲಾಧಿಕಾರಿ ಖಡಕ್ ಆದೇಶ!
ದಾವಣಗೆರೆಬೆಂಗಳೂರು

ಕುಡಿಯುವ ನೀರಿಗಾಗಿ ಹರಿದ ಭದ್ರಾ ಜಲಾಶಯದ ನೀರು, ನಾಲೆ ಅಂಚಿನಲ್ಲಿ ಮೋಟಾರ್ ಇಡುವಂತಿಲ್ಲ: ಜಿಲ್ಲಾಧಿಕಾರಿ ಖಡಕ್ ಆದೇಶ!

Share
ಭದ್ರಾ ಜಲಾಶಯ
Share

ದಾವಣಗೆರೆ: ಜಿಲ್ಲೆಯಲ್ಲಿ ಎದುರಾಗಿರುವ ಕುಡಿಯುವ ನೀರಿನ ಅಭಾವವನ್ನು ನೀಗಿಸಲು ಭದ್ರಾ ಜಲಾಶಯದ ನಾಲೆಗಳ ಮೂಲಕ ನೀರು ಹರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕಾಲುವೆಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಜಿಲ್ಲಾಡಳಿತ ಕಟ್ಟುನಿಟ್ಟಿನ ನಿಷೇಧಾಜ್ಞೆ ಜಾರಿಗೊಳಿಸಿದೆ.

ಜನ-ಜಾನುವಾರುಗಳ ಕುಡಿಯುವ ನೀರು ಹಾಗೂ ಕೆರೆ-ಕಟ್ಟೆಗಳನ್ನು ತುಂಬಿಸುವ ಉದ್ದೇಶದಿಂದ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ರವರೆಗೆ ಭದ್ರಾ ಬಲದಂಡೆ, ಎಡದಂಡೆ ಹಾಗೂ ವಿವಿಧ ವಿತರಣಾ ನಾಲೆಗಳಿಗೆ ನೀರು ಹರಿಸಲಾಗುತ್ತಿದೆ. ಪ್ರಸ್ತುತ ಮಳೆಯ ಅಭಾವದಿಂದ ಅಂತರ್ಜಲ ಮಟ್ಟ ಕುಸಿದಿದ್ದು, ಡಿಸೆಂಬರ್ 2026ರ ವರೆಗೆ ಕುಡಿಯುವ ನೀರಿಗೆ ಕೊರತೆಯಾಗದಂತೆ ಜಾಗರೂಕತೆಯಿಂದ ಬಳಸಿಕೊಳ್ಳಲು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಆದೇಶಿಸಿದ್ದಾರೆ.

ಪ್ರಮುಖ ನಿರ್ಬಂಧಗಳು:

ಈ ನೀರನ್ನು ಕೇವಲ ಕುಡಿಯುವ ಹಾಗೂ ಅಂತರ್ಜಲ ವೃದ್ಧಿಯ ಉದ್ದೇಶಕ್ಕೆ ಮಾತ್ರ ಬಳಸಬೇಕು.

ರೈತರು ಈ ನೀರನ್ನು ಕೃಷಿ ಬೆಳೆಗಳಿಗೆ ಬಳಸುವಂತಿಲ್ಲ ಹಾಗೂ ಮೋಟಾರ್‌ಗಳ ಮೂಲಕ ಅನಧಿಕೃತವಾಗಿ ನೀರೆತ್ತುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) 2023ರ ಕಲಂ 163ರ ಅನ್ವಯ ಅಕ್ಟೋಬರ್ 2ರ ಮಧ್ಯರಾತ್ರಿ 12.00 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.

ಕಾಲುವೆ ಪಾತ್ರಗಳಲ್ಲಿ ಸಾರ್ವಜನಿಕರು ಸಂಚರಿಸುವುದು, ದನಕರುಗಳನ್ನು ತೊಳೆಯುವುದು ಮತ್ತು ದೈನಂದಿನ ಚಟುವಟಿಕೆಗಳನ್ನು ಮಾಡುವುದನ್ನು ನಿಷೇಧಿಸಲಾಗಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಪೋಲಿಸ್ ಇಲಾಖೆಗೆ ಸೂಚಿಸಲಾಗಿದೆ.

Share

Leave a comment

Leave a Reply

Your email address will not be published. Required fields are marked *