Home ದಾವಣಗೆರೆ ಬ್ರಾಹ್ಮಣ ಸಮಾಜ ಸೇವಾ ಸಂಘದಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ದಾವಣಗೆರೆ

ಬ್ರಾಹ್ಮಣ ಸಮಾಜ ಸೇವಾ ಸಂಘದಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

Share
ಬ್ರಾಹ್ಮಣ
Share

ದಾವಣಗೆರೆ: ಬ್ರಾಹ್ಮಣ ಸಮಾಜ ಸೇವಾ ಸಂಘದ ವತಿಯಿಂದ ವಿವಿಧ ದಾನಿಗಳ ನೆರವಿನಿಂದ ಸ್ಥಾಪಿಸಲಾಗಿರುವ ದತ್ತಿ ನಿಧಿಯಿಂದ ಆರ್ಥಿಕವಾಗಿ ಹಿಂದುಳಿದ ಹಾಗೂ ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡಿರುವ ದಾವಣಗೆರೆ ನಗರ ವ್ಯಾಪ್ತಿಯ ಶ್ರೀಮತಸ್ಥ ಬ್ರಾಹ್ಮಣ ಸಮಾಜದ ಸದಸ್ಯರ ಮಕ್ಕಳ ವ್ಯಾಸಂಗಕ್ಕೆ ಆರ್ಥಿಕ ಸಹಾಯ ಧನ (ವಿದ್ಯಾರ್ಥಿ ವೇತನ) ನೀಡಲು ಅರ್ಜಿ ಆಹ್ವಾನಿಸಲಾಗಿದೆ.  

2026-27ನೇ ಸಾಲಿಗೆ ಪಿಯುಸಿ, ಐಟಿಐ, ಡಿಪ್ಲೋಮಾ ಹಾಗೂ ಡಿಗ್ರಿ ಮಟ್ಟದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿದಾರರು ತಮ್ಮ ಆರ್ಥಿಕ ಪರಿಸ್ಥಿತಿ ಹಾಗೂ ಶೈಕ್ಷಣಿಕ ಪ್ರಗತಿಯ ಸೂಕ್ತ ದಾಖಲೆಗಳನ್ನು ಒದಗಿಸಬೇಕು. ಭರ್ತಿ ಮಾಡಿದ ಅರ್ಜಿಗಳನ್ನು ಬ್ರಾಹ್ಮಣ ಸಮಾಜ ಸೇವಾ ಸಂಘದ ಕಾರ್ಯಾಲಯದಲ್ಲಿ ಪಡೆದುಕೊಂಡು, ಅಕ್ಟೋಬರ್ 8 ರೊಳಗಾಗಿ ಸಲ್ಲಿಸಬೇಕಾಗಿದೆ. ಅರ್ಜಿಗಳು ರಜಾದಿನಗಳನ್ನು ಹೊರತುಪಡಿಸಿ ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1:00 ಗಂಟೆಯವರೆಗೆ ಹಾಗೂ ಸಂಜೆ 5:30 ರಿಂದ 7:30 ರವರೆಗೆ ದೊರೆಯಲಿವೆ.

ಹೆಚ್ಚಿನ ವಿವರಗಳಿಗಾಗಿ ಮೊ: 9483860040 ಹಾಗೂ 6360558560 ಸಂಪರ್ಕಿಸಬಹುದು ಎಂದು ಸಂಘದ ಅಧ್ಯಕ್ಷರಾದ ಡಾ. ಎಂ.ಸಿ. ಶಶಿಕಾಂತ್ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles