Home ದಾವಣಗೆರೆ ಸಿಇಸಿ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ನಿಟುವಳ್ಳಿ ಪ್ರವೀಣ್ ಆಗ್ರಹ
ದಾವಣಗೆರೆಬೆಂಗಳೂರು

ಸಿಇಸಿ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ನಿಟುವಳ್ಳಿ ಪ್ರವೀಣ್ ಆಗ್ರಹ

Share
ಜ್ಞಾನೇಶ್ ಕುಮಾರ್
Share

ದಾವಣಗೆರೆ: ಭಾರತೀಯ ಚುನಾವಣಾ ಆಯೋಗದ ಸ್ವಾಯತ್ತತೆ ಹಾಗೂ ಮತದಾರರ ಪಟ್ಟಿಯ ಸಮಗ್ರತೆಗೆ ಧಕ್ಕೆಯಾಗಿದ್ದು, ಕೂಡಲೇ ಮುಖ್ಯ ಚುನಾವಣಾ ಆಯುಕ್ತಜ್ಞಾನೇಶ್ ಕುಮಾರ್ ಅವರು ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಯುವ ಮುಖಂಡ ನಿಟುವಳ್ಳಿ ಪ್ರವೀಣ್ ಆಗ್ರಹಿಸಿದ್ದಾರೆ.

ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗವು ವೋಟ್ ಚೋರಿ ನಡೆಸಿದೆ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಆಡಳಿತಾರೂಢ ಬಿಜೆಪಿ ಮತ್ತು ಆರ್‌ಎಸ್‌ಎಸ್ ವಶಕ್ಕೆ ಪಡೆಯಲು ಪ್ರಯತ್ನಿಸುತ್ತಿವೆ. ಇದು ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸ್ವಾಯತ್ತ ಸಂಸ್ಥೆಯಲ್ಲಿ ಏಕಪಕ್ಷೀಯ ಮತ್ತು ಸರ್ವಾಧಿಕಾರಿ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದ್ದು, ಸಿಇಸಿ ಜ್ಞಾನೇಶ್ ಕುಮಾರ್ ತಮ್ಮ ಹುದ್ದೆಯಲ್ಲಿ ಮುಂದುವರಿಯಲು ಅರ್ಹರಲ್ಲ. ಪ್ರಸ್ತುತ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ
ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕೊರತೆಯಿದ್ದು, ಅದನ್ನು ತಕ್ಷಣವೇ ತಡೆಹಿಡಿಯಬೇಕು ಎಂದು ಒತ್ತಾಯಿಸಿದ್ದಾರೆ.

13 ಕೋಟಿ 30 ಲಕ್ಷ ಹೆಸರುಗಳನ್ನು ದೇಶಾದ್ಯಂತ ಕೈಬಿಡಲಾಗಿದ್ದು, ತಕ್ಷಣವೇ ಪಟ್ಟಿಗೆ ಮರುಸೇರಿಸಬೇಕು. ಚುನಾವಣಾ ವ್ಯವಸ್ಥೆಯನ್ನು ದುರ್ಬಳಕೆ ಮಾಡಿಕೊಂಡು ‘ವೋಟ್ ಚೋರಿ’ ನಡೆಸಿದ ಆರೋಪ ಕೇಳಿ ಬರುತ್ತಿರುವುದರಿಂದ ನೈತಿಕ ಹೊಣೆ ಹೊತ್ತು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles