SUDDIKSHANA KANNADA NEWS/DAVANAGERE/DATE:14_12_2025
ದಾವಣಗೆರೆ: ಕಾಂಗ್ರೆಸ್ ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರಾಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು ವಿಧಿವಶರಾಗಿದ್ದಾರೆ.
ಬೆಂಗಳೂರಿನ ಸ್ಪರ್ಷ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಾಮನೂರು ಶಿವಶಂಕರಪ್ಪ ಅವರಿಗೆ 95 ವರ್ಷ ವಯಸ್ಸಾಗಿತ್ತು. ಉದ್ಯೋಗ ಅರಸಿ ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ನೆಲೆಸಿದ್ದ ಶಾಮನೂರು ಶಿವಶಂಕರಪ್ಪರು ನಂತರ ದಾವಣಗೆರೆಗೆ ಬಂದಿದ್ದರು. ಅಕ್ಕಿ ಮಾರಾಟದಿಂದ ಪ್ರಸಿದ್ದಿ ಪಡೆದಿದ್ದ ಶಾಮನೂರು ಶಿವಶಂಕರಪ್ಪರು ರಾಜಕೀಯದಲ್ಲಿ ಅಜಾತಶತ್ರುವಾಗಿದ್ದರು. ಎಲ್ಲಾ ಪಕ್ಷದವರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದರು.
ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಮತ್ತು ತೋಟಗಾರಿಕೆ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್, ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಶಾಮನೂರು ಶಿವಶಂಕರಪ್ಪರ ಆರೋಗ್ಯದ ತುಂಬಾನೇ ಕಾಳಜಿ ವಹಿಸಿದ್ದರು. ಬಕ್ಕೇಶ್, ಗಣೇಶ್, ಪುತ್ರಿಯರು, ಸೊಸೆಯರು, ಮೊಮ್ಮಕ್ಕಳು, ಮರಿಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಸದಸ್ಯರಾಗಿದ್ದ ಶಾಮನೂರು ಶಿವಶಂಕರಪ್ಪರು ಆರು ಬಾರಿ ಶಾಸಕರಾಗಿದ್ದರು. 2013ರಲ್ಲಿ ಸಿದ್ದರಾಮಯ್ಯರು ಮುಖ್ಯಮಂತ್ರಿಯಾಗಿದ್ದಾಗ ಮೊದಲ ಬಾರಿಗೆ ತೋಟಗಾರಿಕೆ ಇಲಾಖೆ ಸಚಿವರಾಗಿದ್ದರು.





Leave a comment