ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ದುಗ್ಗಮ್ಮ, ಚೌಡಮ್ಮ ಜಾತ್ರೆಗೆ ಲಕ್ಷಾಂತರ ಜನರು: ಹದ್ದಿನ ಕಣ್ಣಿಟ್ಟಿದೆ ಖಾಕಿ ಪಡೆ, ಹೇಗಿದೆ ಗೊತ್ತಾ ಹದ್ದಿನ ಕಣ್ಣು…?

On: March 17, 2024 11:48 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:18-03-2024

ದಾವಣಗೆರೆ: ದುರ್ಗಾಂಬಿಕೆ ದೇವಿ ಹಾಗೂ ವಿನೋಬನಗರದ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಸಿದ್ಧತೆ ಮಾಡಿಕೊಂಡಿದ್ದು, ಮಾರ್ಚ್ 19 ಹಾಗೂ 20 ರಂದು ವೈಭವೋಪೇತವಾಗಿ ನೆರವೇರಲಿದೆ. ಲಕ್ಷಾಂತರ ಜನರು ಆಗಮಿಸುವ ಹಿನ್ನೆಲೆಯಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.

ಪೊಲೀಸ್ ಬಂದೋಬಸ್ತ್:

ದಾವಣಗೆರೆ ನಗರ ದೇವತೆ ಶ್ರೀ ದುರ್ಗಾಂಭಿಕಾ ದೇವಿ ಜಾತ್ರೆ ಮತ್ತು ವಿನೋಬನಗರ ಶ್ರೀ ಚೌಡೇಶ್ವರಿ ದೇವಿಯ ಜಾತ್ರೆಯ ಸಂಬಂಧ ಈಗಾಗಲೇ ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆ ಮತ್ತು ಹೊರ ಜಿಲ್ಲೆಯಿಂದ ಪೊಲೀಸ್ ಅಧಿಕಾರಿ, ಸಿಬ್ಬಂದಿ ನಿಯೋಜಿಸಲಾಗಿದೆ.

4 ಕೆ ಎಸ್ ಆರ್ ಪಿ ತುಕಡಿಗಳು, 7 ಜಿಲ್ಲಾ ಸಶಸ್ತ್ರ ಮೀಸಲು ಪಡೆ ಹಾಗೂ ವಿಶೇಷ ಗಸ್ತು ವಾಹನಗಳನ್ನು ನಿಯೋಜಿಸಲಾಗಿದೆ.ಮತ್ತು ಪ್ರಾಣಿ ಬಲಿ ತಡೆಗೆ ಚೆಕ್‌ ಪೋಸ್ಟ್ ಗಳನ್ನು ತೆರೆದ ನಿಗಾವಣೆಗೆ ಸಿಸಿಟಿವಿ ಕ್ಯಾಮೆರಾಗಳನ್ನು ಸಹ ಅಳವಡಿಸಲಾಗಿದೆ. ನಗರದಾದ್ಯಂತ ಕಣ್ಗಾವಲು ಇರಿಸಲಾಗಿದೆ ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದ್ದಾರೆ.

ಜಾತ್ರಾ ಸಮಯದಲ್ಲಿ ನಗರದಲ್ಲಿ ಅಕ್ರಮ ಮದ್ಯ ಮಾರಾಟ, ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಕಂಡು ಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ರೌಡಿ ಮತೀಯ ಗೂಂಡ ಮತ್ತು ಎಂಬಿಗಳು ಜಾತ್ರೆ
ಸಮಯದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡಲು ಪ್ರಯತ್ನಿಸಿದಲ್ಲಿ ಕಟ್ಟು ನಿಟ್ಟಿನ ಕಾನೂನು ಕ್ರಮ ವಹಿಸಲಾಗುವುದು.

ಜಾತ್ರೆಗೆ ಆಗಮಿಸುವ ಮಹಿಳೆಯರಿಗೆ ಚುಡಾಯಿಸುವುದು, ಮಕ್ಕಳಿಗೆ ಕಿಚಾಯಿಸುವುದು ಮತ್ತು ಮದ್ಯ ಸೇವನೆ ಮಾಡಿ ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸುವುದು ಕಂಡು ಬಂದಲ್ಲಿ ಅಂತವರ ವಿರುದ್ಧ ಕಟ್ಟು ನಿಟ್ಟಿನ
ಕಾನೂನು ಕ್ರಮ ವಹಿಸಲಾಗುವುದು.

ಜಾತ್ರೆ ಸಂಬಂಧ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ಬರುವಂತಹ ಪ್ರಚೋದನಕಾರಿ ಪೋಸ್ಟರ್ ಗಳನ್ನು ಹಾಕುವುದಾಗಲೀ, ಸುಳ್ಳುಸುದ್ದಿ,ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಡುವುದಾಗಲಿ ಹಾಗೂ ಯಾವುದೇ ಧರ್ಮ, ವ್ಯಕ್ತಿಯ ವಿರುದ್ಧ ಅವಹೇಳನಕಾರಿ ಪೋಸ್ಟ್. ಸಂದೇಶಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕುವುದು, ರವಾನಿಸುವುದು ಕಂಡು ಬಂದಲ್ಲಿ ಅಂತವರ ವಿರುದ್ಧ ಕ್ರಮ. ಜಾತ್ರೆ ಸಂಬಂಧ ಸಾರ್ವಜನಿಕವಾಗಿ ಪ್ರಾಣಿ ಬಲಿ ಮಾಡಲು ಪ್ರಯತ್ನಿಸಿದ್ದಲ್ಲಿ ಅಂತವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ವಹಿಸಲಾಗುವುದು ಎಂದು ಎಸ್ಪಿ ಉಮಾ ಪ್ರಶಾಂತ್ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment