Home ದಾವಣಗೆರೆ ನವಿಲೇಹಾಳದಲ್ಲಿ ಅರ್ಥಪೂರ್ಣ 80ನೇ ಸ್ವಾತಂತ್ರ್ಯ ದಿನಾಚರಣೆ: ಸಾರ್ವಜನಿಕರಿಗೆ ಸಿಹಿ ವಿತರಿಸಿ, ಗ್ರಾಮ ವಿಕಾಸಕ್ಕೆ ಕರೆ
ದಾವಣಗೆರೆಬೆಂಗಳೂರು

ನವಿಲೇಹಾಳದಲ್ಲಿ ಅರ್ಥಪೂರ್ಣ 80ನೇ ಸ್ವಾತಂತ್ರ್ಯ ದಿನಾಚರಣೆ: ಸಾರ್ವಜನಿಕರಿಗೆ ಸಿಹಿ ವಿತರಿಸಿ, ಗ್ರಾಮ ವಿಕಾಸಕ್ಕೆ ಕರೆ

Share
ಸ್ವಾತಂತ್ರ್ಯ
Share

ದಾವಣಗೆರೆ: ಚನ್ನಗಿರಿ ತಾಲೂಕಿನ ನವಿಲೇಹಾಳ ಗ್ರಾಮದಲ್ಲಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ದಿನಾಚರಣೆಯ ಅಂಗವಾಗಿ ಗ್ರಾಮಸ್ಥರು ಹಾಗೂ ಸಾರ್ವಜನಿಕರಿಗೆ ಸಿಹಿ ವಿತರಿಸಿ ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ-ಬಲಿದಾನ ನೀಡಿದ ಮಹನೀಯರನ್ನು ಶ್ರದ್ಧಾಭಕ್ತಿಯಿಂದ ಸ್ಮರಿಸಲಾಯಿತು.

ಈ ವೇಳೆ ಮಾತನಾಡಿದ ಸಮಿತಿಯ ಜಿಲ್ಲಾಧ್ಯಕ್ಷ ಜಾಫರ್, “ಸ್ವಾತಂತ್ರ್ಯ ಎಂಬುದು ಕೇವಲ ಒಂದು ದಿನದ ಆಚರಣೆಗೆ ಸೀಮಿತವಾಗಬಾರದು. ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕು, ನ್ಯಾಯ ಹಾಗೂ ಅಭಿವೃದ್ಧಿಯ ಅವಕಾಶಗಳು ತಲುಪಿದಾಗ ಮಾತ್ರ ಸ್ವಾತಂತ್ರ್ಯಕ್ಕೆ ನೈಜ ಅರ್ಥ ಸಿಗುತ್ತದೆ. ಗ್ರಾಮೀಣ ಪ್ರದೇಶಗಳ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಗ್ರಾಮಸ್ಥರು ಹಾಗೂ ಯುವಜನತೆ ಒಗ್ಗಟ್ಟಿನಿಂದ ಶ್ರಮಿಸಬೇಕು” ಎಂದು ಆಶಯ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ದೇಶದ ಏಕತೆ, ಸಾಮಾಜಿಕ ಸಾಮರಸ್ಯ ಮತ್ತು ಗ್ರಾಮಗಳ ಸೌಹಾರ್ದತೆಯ ಕುರಿತು ಜಾಗೃತಿ ಮೂಡಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು, ಯುವಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.

Share

Leave a comment

Leave a Reply

Your email address will not be published. Required fields are marked *

Recent Posts

Recent Comments

No comments to show.
Related Articles