ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭೆ ಮತಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಜ.11 ಹಾಗೂ 18ರಂದು ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಈ ಸುದ್ದಿಯನ್ನೂ ಓದಿ: BIG BREAKING: ‘ಕೊರಳಪಟ್ಟಿ ಹಿಡಿದು ಕೇಳ್ತೇನೆಂದಿದ್ದ” ಹೆಚ್. ಬಿ. ಮಂಜಪ್ಪ ವಿರುದ್ಧ ಪೊಲೀಸ್ ಮಹಾನಿರ್ದೇಶಕರಿಗೆ ಎಂ. ಪಿ. ರೇಣುಕಾಚಾರ್ಯ ದೂರು!
ಅರ್ಹರು ತಮ್ಮ ವ್ಯಾಪ್ತಿಯ ಮತಗಟ್ಟೆ ಮಟ್ಟದ ಅಧಿಕಾರಿಯನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.
ಹೆಸರು ತಿದ್ದುಪಡಿ, ವರ್ಗಾವಣೆ ಹಾಗೂ ಹೆಸರು ತೆಗೆದು ಹಾಕಲು ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಹ ಮತದಾರರು ತಮ್ಮ ಮೊಬೈಲ್‌ನಲ್ಲಿ ‘ವೋಟರ್ ಹೆಲ್ಪ್ ಲೈನ್’ ಆ್ಯಪ್ ಡೌನ್‌ಲೋಡ್ ಮಾಡಿಕೊಂಡು ಅಥವಾ https://voters.eci.gov.in/ ಮೂಲಕ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.
ಸಾರ್ವಜನಿಕರು ದಾವಣಗೆರೆ ದಕ್ಷಿಣ ವಿಧಾನಸಭೆ ಮತಕ್ಷೇತ್ರಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸುವ ಕುರಿತು ವಿಶೇಷ ಅಭಿಯಾನದ ಸದುಪಯೋಗ ಪಡಿಸಿಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





Leave a comment