SUDDIKSHANA KANNADA NEWS/DAVANAGERE/DATE:03_01_2026
ದಾವಣಗೆರೆ: ದಾವಣಗೆರೆ ನಗರದ ಇತಿಹಾಸ ಪ್ರಸಿದ್ಧ ಶ್ರೀ ದುರ್ಗಾಂಬಿಕಾ ದೇವಿ ಜಾತ್ರಾ ಮಹೋತ್ಸವವು ಫೆಬ್ರವರಿ 24 ಮತ್ತು 25 ರಂದು ಅದ್ಧೂರಿಯಾಗಿ ನಡೆಸಲು ನಿರ್ಧರಿಸಲಾಗಿದೆ.
READ ALSO THIS STORY: ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಪುತ್ರ ಸಮರ್ಥ್ ಅಭ್ಯರ್ಥಿಯಾಗ್ತಾರಾ: ಏನೇಳಿದ್ರು ಎಸ್. ಎಸ್. ಮಲ್ಲಿಕಾರ್ಜುನ್, ಪ್ರಭಾ ಮಲ್ಲಿಕಾರ್ಜುನ್?
ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವರೂ ಆದ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರ ಅಧ್ಯಕ್ಷತೆಯಲ್ಲಿ ನಗರದೇವತೆ ಶ್ರೀ ದುರ್ಗಾಂಬಿಕಾ ದೇವಿ ದೇವಸ್ಥಾನ ಟ್ರಸ್ಟ್ ವತಿಯಿಂದ ನಡೆದ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಶ್ರೀ ದುರ್ಗಾಂಬಿಕಾ ದೇವಿ ಪ್ರಸಾದ ನಿಲಯದಲ್ಲಿ ಟ್ರಸ್ಟ್ ನ ಕಾರ್ಯಾಧ್ಯಕ್ಷರಾಗಿರುವ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರು ಸಭೆ ಬಳಿಕ ಈ ವಿಷಯ ತಿಳಿಸಿದರು.
ಜನವರಿ 20ರಂದು ಹಂದರ ಕಂಭ ಪೂಜೆ ನೆರವೇರಲಿದೆ. ಫೆಬ್ರವರಿ 22ರಂದು ಕೋಣ, ಸಾರು ಹಾಕಲಾಗುತ್ತದೆ. ಈ ಹಿಂದಿನಿಂದಲೂ ನಡೆದುಕೊಂಡ ಬಂದ ರೀತಿಯಲ್ಲಿ ಈ ವರ್ಷವೂ ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸಲಾಗಿದ್ದು, ಮುಂದಿನ ದಿನಗಳಲ್ಲಿ ಯಾವ್ಯಾವ ಕಾರ್ಯಕ್ರಮಗಳು ನಡೆಯಲಿವೆ ಎಂಬ ಕುರಿತಂತೆ ಸಮಗ್ರ ಮಾಹಿತಿ ಕೊಡಲಾಗುತ್ತದೆ ಎಂದು ಹೇಳಿದರು.
ಸಭೆಯಲ್ಲಿ ಕಂಬಾರರು, ತಳವಾರರು, ಬಡಿಗೆಯವರು, ಮಡಿವಾಳರು, ಬಾಬುದಾರರು, ಕಾರ್ಯಕರ್ತರು, ಹಾಗೂ ಭಕ್ತರು ಸಭೆಯಲ್ಲಿ ಪಾಲ್ಗೊಂಡಿದ್ದರು.






Leave a comment