Home ದಾವಣಗೆರೆ ರಾಹುಲ್ ಗಾಂಧಿ ದೋಷಮುಕ್ತ ಸತ್ಯಕ್ಕೆ ಸಂದ ಜಯ: ಸೈಯದ್ ಖಾಲಿದ್ ಅಹ್ಮದ್
ದಾವಣಗೆರೆನವದೆಹಲಿಬೆಂಗಳೂರು

ರಾಹುಲ್ ಗಾಂಧಿ ದೋಷಮುಕ್ತ ಸತ್ಯಕ್ಕೆ ಸಂದ ಜಯ: ಸೈಯದ್ ಖಾಲಿದ್ ಅಹ್ಮದ್

Share
ರಾಹುಲ್ ಗಾಂಧಿ
Share

ದಾವಣಗೆರೆ: ಬೆಂಗಳೂರಿನಲ್ಲಿ 2018ರ ಕರ್ನಾಟಕ ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಉತ್ತರ ಪ್ರದೇಶದ ಸುಲ್ತಾನ್ಪುರ ವಿಶೇಷ ಎಂಪಿ,ಎಂಎಲ್ಎ ನ್ಯಾಯಾಲಯವು ದೋಷಮುಕ್ತಗೊಳಿಸಿರುವುದು ಸತ್ಯಕ್ಕೆ ಸಂದ ಜಯ ಎಂದು ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಹೇಳಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಅಮಿತ್ ಶಾ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ್ದರು ಎಂದು ಆರೋಪಿಸಿ ರಾಹುಲ್ ಗಾಂಧಿ ಅವರ ವಿರುದ್ಧ ಬಿಜೆಪಿ ಮುಖಂಡ ವಿಜಯ್ ಮಿಶ್ರಾ ದಾಖಲಿಸಿದ್ದ ಪ್ರಕರಣದಲ್ಲಿ ದೋಷಮುಕ್ತರಾಗಿರುವುದು ಸಂತಸದ ವಿಚಾರ. ಸುಮಾರು ಎಂಟು ವರ್ಷಗಳ ಕಾಲ ನಡೆದ ವಿಚಾರಣೆಯಲ್ಲಿ ರಾಹುಲ್ ಗಾಂಧಿ ಅವರನ್ನು ಸಾಕ್ಷ್ಯಾಧಾರಗಳು ಇಲ್ಲದೇ ವಿಮುಕ್ತಿಗೊಳಿಸಲಾಗಿದ್ದು ಕೇಂದ್ರ ಸರ್ಕಾರದ ವಿರುದ್ಧದ ಹೋರಾಟಕ್ಕೆ ಮತ್ತಷ್ಟು ಶಕ್ತಿ ತಂದಿದೆ ಎಂದು ತಿಳಿಸಿದ್ದಾರೆ.

ರಾಹುಲ್ ಗಾಂಧಿ ಪರ ವಕೀಲರು ಈ ಹೇಳಿಕೆಗಳನ್ನು ಯಾವುದೇ ಅವಮಾನಿಸುವ ಉದ್ದೇಶದಿಂದ ನೀಡಿಲ್ಲ ಮತ್ತು ಸದುದ್ದೇಶದಿಂದ ನೀಡಲಾಗಿದೆ ಎಂದು ವಾದಿಸಿದ್ದರು. ನ್ಯಾಯಾಲಯದ ಈ ತೀರ್ಪನ್ನು ಸ್ವಾಗಸುತ್ತೇವೆ ಎಂದಿರುವ ಅವರು, ಇದು “ಸತ್ಯಮೇವ ಜಯತೆ” ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಯಲ್ಲಿ ಕೇಂದ್ರ ಸರ್ಕಾರವು ಕೋಟ್ಯಂತರ ಮತದಾರರ ಹೆಸರು ಡಿಲೀಟ್ ಮಾಡಲಾಗಿದೆ. 13 ಕೋಟಿಗೂ ಹೆಚ್ಚು ಮಂದಿ ಮತದಾನದಿಂದ ವಂಚಿತರಾಗಿದ್ದಾರೆ. ಬೆಲೆ ಏರಿಕೆ, ನಿರುದ್ಯೋಗ, ಭ್ರಷ್ಟಾಚಾರ, ಹಿಟ್ಲರ್ ಮಾದರಿ ಆಡಳಿತಕ್ಕೆ ದೇಶದ ಜನರು ರೋಸಿ ಹೋಗಿದ್ದು, ಮುಂಬರುವ ದಿನಗಳಲ್ಲಿ ಬಿಜೆಪಿ ಸೇರಿ ಎನ್ ಡಿಎ ಮಿತ್ರ ಪಕ್ಷಗಳಿಗೆ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಸೈಯದ್ ಖಾಲಿದ್ ಅಹ್ಮದ್ ಅವರು ಹೇಳಿದ್ದಾರೆ.

Share

Leave a comment

Leave a Reply

Your email address will not be published. Required fields are marked *