ದಾವಣಗೆರೆ: ಕಡಿಮೆ ವೆಚ್ಚದಲ್ಲಿ ಅತ್ಯುತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ದಾವಣಗೆರೆ ವಿಶ್ವವಿದ್ಯಾನಿಲಯವು ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಾಗಿದೆ. ಪ್ರಸಕ್ತ ಶೈಕ್ಷಣಿಕ ವರ್ಷದ ಸ್ನಾತಕೋತ್ತರ ಪದವಿಗಾಗಿ ಪ್ರವೇಶ ಪ್ರಕ್ರಿಯೆ ಆರಂಭವಾಗಿದ್ದು, ಆಗಸ್ಟ್ 10ರವರೆಗೆ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕುಲಪತಿ ಪ್ರೊ.ಬಿ.ಇ.ರಂಗಸ್ವಾಮಿ ತಿಳಿಸಿದರು.
ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಎಂಎ., ಎಂಕಾಂ, ಎಂಎಸ್ಸಿ, ಎಂಇಡಿ, ಎಂಎಫ್‌ಎ, ಎಂಎಸ್‌ಡಬ್ಲ್ಯೂ, ಎಂಸಿಎ ಪದವಿಗಳಿಗಾಗಿ ಪ್ರವೇಶ ನೀಡಲಾಗುತ್ತಿದೆ. ಅರ್ಹ, ಆಸಕ್ತ ಸ್ನಾತಕ ಪದವಿ ಪಡೆದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ 31ರವರೆಗೆ ಅವಕಾಶ ನೀಡಲಾಗಿತ್ತು, ವಿದ್ಯಾರ್ಥಿಗಳ ಬೇಡಿಕೆ ಮತ್ತು ಕಾಲೇಜು ಪ್ರಾಂಶುಪಾಲರ ಮನವಿ ಮೇರೆಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಆಗಸ್ಟ್ 10ರವರೆಗೆ ವಿಸ್ತರಿಸಲಾಗಿದೆ. ರಾಜ್ಯದ ಯಾವುದೇ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳೂ ಇದರ ಪ್ರಯೋಜನ ಪಡೆಯಬಹುದಾಗಿದೆ ಎಂದರು.
ವಿಶ್ವವಿದ್ಯಾನಿಲಯದಲ್ಲಿ 129 ಪೂರ್ಣಾವಧಿ ನುರಿತ, ತಜ್ಞ, ಅನುಭವಿ ಅಧ್ಯಾಪಕರಿದ್ದಾರೆ. ಸುಸಜ್ಜಿತ ಪ್ರಯೋಗಾಲಯಗಳಿದ್ದು, ಪ್ರಾಯೋಗಿಕ ಶಿಕ್ಷಣಕ್ಕೆ ಆದ್ಯತೆ ನೀಡಲಾಗುತ್ತಿದೆ. ಸ್ನಾತಕೋತ್ತರ ಪದವಿಯ 30 ಕೋರ್ಸ್ಗಳಲ್ಲಿ ವಿದ್ಯಾರ್ಥಿಗಳು ಅಧ್ಯಯನ ಮಾಡಲು ಅವಕಾಶವಿದ್ದು, ದಾವಣಗೆರೆಯ ಶಿವಗಂಗೋತ್ರಿ ಆವರಣ ಮತ್ತು ಚಿತ್ರದುರ್ಗದ ಗುಡ್ಡದ ರಂಗವ್ವನಹಳ್ಳಿ ಸ್ನಾತಕೋತ್ತರ ಕೇಂದ್ರದಲ್ಲಿಯೂ ಅಧ್ಯಯನಕ್ಕೆ ಅವಕಾಶವಿದೆ. ವಿದ್ಯಾರ್ಥಿಗಳ ಅಧ್ಯಯನಕ್ಕೆ ಅಗತ್ಯವಿರುವ ಹಾಸ್ಟೆಲ್, ಡಿಜಿಟಲ್ ಗ್ರಂಥಾಲಯ, ವೃತ್ತಿ ಮಾರ್ಗದರ್ಶನ ವ್ಯವಸ್ಥೆ ಒದಗಿಸಲಾಗಿದೆ ಎಂದು ಹೇಳಿದರು.
ವಿಶ್ವವಿದ್ಯಾನಿಲಯದ ವ್ಯಾಪ್ತಿಯ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಒಟ್ಟು 128 ಸಂಯೋಜಿತ ಕಾಲೇಜುಗಳಿವೆ. ವಿವಿಧ ವಿಭಾಗಗಳಲ್ಲಿ 30 ಕೋರ್ಸ್ಗಳಲ್ಲಿ ವಿದ್ಯಾರ್ಥಿಗಳು ಅಧ್ಯಯನ ಮಾಡಬಹುದಾಗಿದೆ. ಸದ್ಯ ವಿವಿಧ ಪದವಿ ಕೋರ್ಸ್ಗಳಲ್ಲಿ ಸುಮಾರು 2200 ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ.
- Davangere News
- Davangere University
- Davangere University PG Application
- Karnataka University News
- Last Date Extended
- MA MCom MSc Admissions
- PG Admission
- Prof BE Rangaswamy
- Shivagangotri Davangere
- ಅರ್ಜಿ ದಿನಾಂಕ ವಿಸ್ತರಣೆ
- ಎಂಎ ಎಂಕಾಂ ಎಂಎಸ್ಸಿ ಪ್ರವೇಶ
- ಕರ್ನಾಟಕ ಉನ್ನತ ಶಿಕ್ಷಣ
- ಚಿತ್ರದುರ್ಗ ಪಿಜಿ ಸೆಂಟರ್
- ದಾವಣಗೆರೆ ನ್ಯೂಸ್
- ದಾವಣಗೆರೆ ವಿಶ್ವವಿದ್ಯಾನಿಲಯ
- ಪಿಜಿ ಪ್ರವೇಶಾತಿ
- ಪ್ರೊ ಬಿ ಇ ರಂಗಸ್ವಾಮಿ
- ಶಿವಗಂಗೋತ್ರಿ ದಾವಣಗೆರೆ





Leave a comment