Site icon Kannada News-suddikshana

ಭಾರತದ ಮಾಜಿ ಕ್ರಿಕೆಟಿಗ ಕನ್ನಡಿಗ ಡೇವಿಡ್ ಜಾನ್ಸನ್ ನಿಧನ

ಬೆಂಗಳೂರು: ಭಾರತ ತಂಡದ ಮಾಜಿ ಕ್ರಿಕೆಟರ್ ಡೇವಿಡ್ ಜಾನ್ಸನ್​(52) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು (ಜೂನ್ 20) ಬೆಂಗಳೂರಿನ ಕೊತ್ತನೂರು ಬಳಿ ಇರುವ ಅಪಾರ್ಟ್​ಮೆಂಟ್​ ಮೇಲಿಂದ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಡೇವಿಡ್ ಜಾನ್ಸನ್ ಅವರು ಅನಾರೋಗ್ಯ ನಿಮಿತ್ತ ಖಿನ್ನತೆಗೊಳಗಾಗಿದ್ದರು. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. 1996ರಲ್ಲಿ ಭಾರತ​ ತಂಡದ ಪರ ಟೆಸ್ಟ್​ ಪಂದ್ಯ ಆಡಿದ್ದ ಡೇವಿಡ್ ಜಾನ್ಸನ್. ಕೆಪಿಎಲ್​ನಲ್ಲಿ ಬೆಳಗಾವಿ ಪ್ಯಾಂಥರ್ಸ್ ಪರ ಆಡಿದ್ದರು. ಸದ್ಯ ಸ್ಥಳಕ್ಕೆ ಕೊತ್ತನೂರು ಪೊಲೀಸರು ಭೇಟಿ ನೀಡಿ ಘಟನೆಯ ಸಂಬಂಧ ಹೆಚ್ಚಿನ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ. ಇನ್ನು ಡೇವಿಡ್ ಜಾನ್ಸನ್ ನಿಧನಕ್ಕೆ ಕ್ರಿಕೆಟ್ ವಲಯದಿಂದ ಸಂತಾಪಗಳು ವ್ಯಕ್ತವಾಗಿವೆ.

Exit mobile version