• ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
Wednesday, June 18, 2025
Social icon element need JNews Essential plugin to be activated.
Kannada News-suddikshana
No Result
View All Result
  • Login
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
No Result
View All Result
Morning News
No Result
View All Result

ಹಾಳಾಗಿರುವ ರಸ್ತೆಗಳ ದುರಸ್ತಿ, ಸುಧಾರಣೆಗೆ ಡಿಸಿ ಕೊಟ್ಟ ಸೂಚನೆ ಏನು…?

Editor by Editor
November 15, 2024
in ದಾವಣಗೆರೆ
0
ಹಾಳಾಗಿರುವ ರಸ್ತೆಗಳ ದುರಸ್ತಿ, ಸುಧಾರಣೆಗೆ ಡಿಸಿ ಕೊಟ್ಟ ಸೂಚನೆ ಏನು…?

SUDDIKSHANA KANNADA NEWS/ DAVANAGERE/ DATE:15-11-2024

ದಾವಣಗೆರೆ: ಅಪಘಾತಗಳ ಪ್ರಮಾಣವನ್ನು ಗಣನೀಯ ಪ್ರಮಾಣದಲ್ಲಿ ತಗ್ಗಿಸಲು ಜಿಲ್ಲೆಯಲ್ಲಿನ ರಸ್ತೆಗಳ ದುರಸ್ತಿ, ಸುಧಾರಣೆಗೆ ಅವಶ್ಯಕ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಅವರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ. ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದಾವಣಗೆರೆ ಜಿಲ್ಲೆಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಗಳು, ರಾಜ್ಯ ಹೆದ್ದಾರಿ ಹಾಗೂ ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಅವೈಜ್ಞಾನಿಕವಾಗಿ ಅಳವಡಿಸಲಾಗಿರುವ ತಡೆಗಳಿಂದ ಅಪಘಾತಗಳು ಸಂಭವಿಸುತ್ತಿರುವ ಹಿನ್ನಲೆಯಲ್ಲಿ ಅಂತಹ ಸ್ಥಳಗಳನ್ನು ಗುರುತಿಸಿ ಕೂಡಲೆ ತೆರವುಗೊಳಿಸಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಗೂ ಆಯಾ ಪೊಲೀಸ್ ಠಾಣೆಯ ಅಧಿಕಾರಿಗಳೊಂದಿಗೆ ಜಂಟಿ ಪರಿವೀಕ್ಷಣೆಯನ್ನು ಮಾಡಿ ಅವಶ್ಯಕತೆ ಇದ್ದರೆ, ವೈಜ್ಞಾನಿಕ ವೇಗತಡೆಗಳನ್ನು ಅಳವಡಿಸಿ ಸೂಕ್ತ ರಸ್ತೆ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು ಎಂದರು.

ಜಿಲ್ಲಾ ವ್ಯಾಪ್ತಿಯಲ್ಲಿ ವೈಜ್ಞಾನಿಕ ವೇಗತಡೆಗಳಿಗೆ ಥರ್ಮೋಪ್ಲಾಸ್ಟಿಕ್ ಬಣ್ಣವನ್ನು ಅಳವಡಿಸುವುದರ ಜೊತೆಗೆ ವೇಗತಡೆ ಗೋಚರಿಸುವಂತೆ ರೋಡ್ ಸ್ಟಡ್‍ಗಳನ್ನು ಅಳವಡಿಸುವುದು ಮತ್ತು ಸೂಚನಾ ಫಲಕಗಳನ್ನು ಅಳವಡಿಸಬೇಕು ಎಂದು ತಿಳಿಸಿದರು.

ದಾವಣಗೆರೆ ಜಿಲ್ಲಾ ವ್ಯಾಪ್ತಿಯ ತಾಲೂಕು ಕೇಂದ್ರಗಳಿಂದ ಜಿಲ್ಲಾ ಕೇಂದ್ರಗಳಿಗೆ ಸಂಪರ್ಕಿಸುವ ಎಲ್ಲಾ ರಾಜ್ಯ ಹೆದ್ದಾರಿಗಳು ಮತ್ತು ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಹೆಚ್ಚು ಮಳೆಯ ಆದ ಪರಿಣಾಮ ರಸ್ತೆಗಳು ಕಿತ್ತು ಹೋಗಿರುವುದು ಹಾಗೂ ಕೆಲವು ಸ್ಥಳಗಳಲ್ಲಿ ಗುಂಡಿಗಳು ಸಹ ನಿರ್ಮಾಣವಾಗಿದ್ದು. ಇದರಿಂದ ರಸ್ತೆ ಬಳಕೆದಾರರಾದ ಅದರಲ್ಲೂ ದ್ವಿಚಕ್ರ ವಾಹನ ಸವಾರರು ಹೆಚ್ಚಾಗಿ ಲಘು ಅಪಘಾತಗಳು, ಇಲ್ಲವೇ ಮಾರಣಾಂತಿಕ ಅಪಘಾತಗಳು ಅಗುವುದಕ್ಕೆ ಕಾರಣವಾಗಿರುತ್ತದೆ. ಆದ್ದರಿಂದ ಸಂಬಂಧಪಟ್ಟ ಆಯಾ ತಾಲೂಕು ಮಟ್ಟದ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ ಅಗತ್ಯ ರಸ್ತೆ ಸುರಕ್ಷತಾ ಕ್ರಮಗಳನ್ನು ಅನುಸರಿಸುವುದು ಎಂದು ತಿಳಿಸಿದರು.

ನಗರದಲ್ಲಿ ಸಂಚರಿಸುವ ಆಟೋರಿಕ್ಷಾ ವಾಹನಗಳಿಗೆ ಕಡ್ಡಾಯವಾಗಿ ಬಾಡಿಗೆ ದರ ಪಡೆಯಲು ಮೀಟರ್‍ನ್ನು ಅಳವಡಿಸಬೇಕು. ಅದೇ ರೀತಿ ಆಟೋರಿಕ್ಷಾ ಚಾಲಕನ ಸೀಟ್ ಹಿಂಭಾಗದಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ವಾಹನ ಮತ್ತು ಚಾಲನಾ ಹಾಗೂ ಮಾಲೀಕರ ಪೂರ್ಣ ಮಾಹಿತಿಯನ್ನು ಒಳಗೊಂಡ ಮಾಹಿತಿ ಫಲಕವನ್ನು ಕಡ್ಡಾಯವಾಗಿ ಅಳವಡಿಸಬೇಕು. ಒಂದು ವೇಳೆ ಕಾನೂನು, ನಿಯಮಗಳನ್ನು ಉಲ್ಲಂಘನೆ ಮಾಡಿದ್ದಲ್ಲಿ ಅವರ ಮೇಲೆ ಕಾನೂನು ರೀತಿ ಕ್ರಮಕೈಗೊಳ್ಳಲು ಸೂಚಿಸಿ ಅನಧಿಕೃತ ಆಟೋ ಸ್ಟಾಂಡ್‍ಗಳನ್ನು ತೆರವುಗೊಳಿಸಬೇಕು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಮಾತನಾಡಿ ಹರಿಹರ ನಗರದಲ್ಲಿ ಅಪಘಾತಗಳು ಸಂಭವಿಸುತ್ತಿರುವ ಹಿನ್ನಲೆಯಲ್ಲಿ ಹರಿಹರ ನಗರಸಭೆಯವತಿಯಿಂದ ಹಾಗೂ ಸುಗಮ ಸಂಚಾರಕ್ಕೆ ಬೇಕಾಗುವ ಸಿಗ್ನಲ್ ಲೈಟ್ಸ್, ಸಿಸಿ ಕ್ಯಾಮೆರಾ ಹಾಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕ ವಿಜಯ್‍ಕುಮಾರ್ ಎಂ.ಸಂತೋಷ್, ಸ್ಮಾರ್ಟ್ ಸಿಟಿ ವ್ಯವಸ್ಥಾಪಕರಾದ ವೀರೇಶ್, ಇಂಜಿನಿಯರ್ಸ್ , ಪೊಲೀಸ್ ಅಧಿಕಾರಿಗಳು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Next Post
ಭತ್ತ ಕ್ವಿಂಟಲ್ ಗೆ 2920 ರೂ. ನಿಗದಿಪಡಿಸಿ, ರೈತರ ಕಾಪಾಡಿ: ರೈತ ಒಕ್ಕೂಟದ ಆಗ್ರಹಕ್ಕೆ ಡಿಸಿ ಹೇಳಿದ್ದೇನು..?

ಭತ್ತ ಕ್ವಿಂಟಲ್ ಗೆ 2920 ರೂ. ನಿಗದಿಪಡಿಸಿ, ರೈತರ ಕಾಪಾಡಿ: ರೈತ ಒಕ್ಕೂಟದ ಆಗ್ರಹಕ್ಕೆ ಡಿಸಿ ಹೇಳಿದ್ದೇನು..?

Leave a Reply Cancel reply

Your email address will not be published. Required fields are marked *

Recent Posts

  • ಬುಧವಾರದ ರಾಶಿ ಭವಿಷ್ಯ 18 ಜೂನ್ 2025 
  • ನಿಜವಾದ ಅಂತ್ಯ ಕದನ ವಿರಾಮವಲ್ಲ: ಇರಾನ್-ಇಸ್ರೇಲ್ ಸಂಘರ್ಷದ ಬಗ್ಗೆ ಟ್ರಂಪ್ ಅಂತಿಮ ನಿರ್ಧಾರ!
  • ಪ್ರೇಮಿ ಜೊತೆ ಓಡಿ ಹೋದ್ಳು ನವವಿವಾಹಿತೆ: ರಾಜಾ ರಘುವಂಶಿಯಂತೆ ನಾನು ಸಾಯೋದು ತಪ್ತು ಎಂದನು ಗಂಡ!
  • ಕಾಂಗ್ರೆಸ್ ಮತ್ತಷ್ಟು ಬಲಿಷ್ಠಗೊಳಿಸಿ ಕೇಂದ್ರದಲ್ಲಿ ಅಧಿಕಾರಕ್ಕೆ ತರಲು ಶ್ರಮಿಸೋಣ: ಸೈಯದ್ ಖಾಲಿದ್ ಅಹ್ಮದ್ ಕರೆ
  • ಮಹಾರಾಷ್ಟ್ರದಲ್ಲಿ ರಾಹುಲ್ vs ದೇವೇಂದ್ರ: ವಿಪಕ್ಷ ನಾಯಕರ ಹೇಳಿಕೆ ನಗು ತರಿಸುತ್ತೆ ಎಂದ ಫಡ್ನವೀಸ್!

Recent Comments

No comments to show.

Archives

  • June 2025
  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023

Categories

  • Chitradurga
  • CINEMA
  • DHARAVADA
  • DINA BHAVISHYA
  • Home
  • Hubli
  • JOB NEWS
  • KALABURAGI
  • Mangalore
  • MYSORE
  • SHIVAMOGGA
  • STATE
  • Stock market (ಷೇರು ಮಾರುಕಟ್ಟೆ)
  • UDUPI
  • ಅಡಿಕೆ ಧಾರಣೆ ಮತ್ತು ಅಡಿಕೆ ಮಾಹಿತಿ
  • ಕನ್ನಡ ರಾಜ್ಯೋತ್ಸವ
  • ಕ್ರಿಕೆಟ್
  • ಕ್ರೀಡೆ
  • ಕ್ರೈಂ ನ್ಯೂಸ್
  • ದಾವಣಗೆರೆ
  • ನವದೆಹಲಿ
  • ಬೆಂಗಳೂರು
  • ವಾಣಿಜ್ಯ
  • ವಿದೇಶ
  • ಸಾಹಿತ್ಯ
  • ಹಾರ್ಟ್ ಬೀಟ್ಸ್- ಬದುಕು ಬೆಳಕು
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ

© 2023 Newbie Techy -Suddi Kshana by Newbie Techy.

No Result
View All Result

© 2023 Newbie Techy -Suddi Kshana by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In