ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ದಾವಣಗೆರೆಯ ವಿಶ್ವಬಂಧು ಅಭಿವೃದ್ಧಿ ಪ್ರತಿಷ್ಠಾನದ ಕಾರ್ಯದರ್ಶಿ ಎಸ್. ಮರಳುಸಿದ್ದಯ್ಯ ವಿಧಿವಶ

On: October 15, 2025 11:33 AM
Follow Us:
ದಾವಣಗೆರೆ
---Advertisement---

SUDDIKSHANA KANNADA NEWS/DAVANAGERE/DATE:15_10_2025

ದಾವಣಗೆರೆ: ನಗರದ ಬನಶಂಕರಿ ಬಡಾವಣೆಯ ನಿವಾಸಿಯಾದ ಹಾಗೂ ವಿಶ್ವ ಬಂದು ಅಭಿವೃದ್ಧಿ ಪ್ರತಿಷ್ಠಾನದ ಕಾರ್ಯದರ್ಶಿಗಳಾದ ಎಸ್. ಮರಳುಸಿದ್ದಯ್ಯನವರು ವಿಧಿವಶರಾಗಿದ್ದಾರೆ.

READ ALSO THIS STORY: ಕಾಂಗ್ರೆಸ್ ಜೊತೆ ಶಾಮೀಲಾಗಿಲ್ಲವಾದರೆ ಬಿಜೆಪಿ ಕಚೇರಿಗೆ ಬಂದು ಧರ್ಮಸ್ಥಳದ ಮಂಜುನಾಥ ಸ್ವಾಮಿ ಮೇಲೆ ಆಣೆ ಮಾಡಿ: ಕೃಷ್ಣಮೂರ್ತಿ ಪವಾರ್ ಪಂಥಾಹ್ವಾನ

ಮಂಗಳವಾರ ಸಂಜೆ 7.45ಕ್ಕೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಮೃತರು ಪತ್ನಿ ಮತ್ತು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.

ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ದಾವಣಗೆರೆಯ ಮೃತರ ನಿವಾಸದಲ್ಲಿ ಬೆಳಗ್ಗೆ 10.30ರವರೆಗೆ ಇಡಲಾಗಿತ್ತು. ತದನಂತರ ಪಾರ್ಥಿವ ಶರೀರವನ್ನು ಅವರ ಸ್ವಗ್ರಾಮ ಚಿತ್ರದುರ್ಗ ತಾಲ್ಲೂಕು ಭರಮಸಾಗರ ಹೋಬಳಿ ಹುಲ್ಲೇಹಾಳು ಗ್ರಾಮಕ್ಕೆ ಕೊಂಡೊಯ್ಯಲಾಯಿತು.

ಜಿಲ್ಲಾ ಕಸಾಪ ಕಂಬನಿ:

ದಾವಣಗೆರೆಯ ಬನಶಂಕರಿ ಬಡಾವಣೆಯ ಎಸ್. ಮರಳಸಿದ್ದಯ್ಯ ಅವರ ನಿಧನವು ಅತ್ಯಂತ ದುರುದೃಷ್ಟಕರ. ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಹಿರಿಯ ಆಜೀವ ಸದಸ್ಯರಾಗಿದ್ದು ಸದಾ ಮಾರ್ಗದರ್ಶಕರಾಗಿ ನಮ್ಮೆಲ್ಲರಿಗೂ ಅತ್ಯಂತ ಪ್ರಿಯರಾಗಿದ್ದರು. ಅವರ ನಿಧನದಿಂದ ದಾವಣಗೆರೆಯ ಈ ಭಾಗದ ಒಬ್ಬ ಹಿರಿಯ ಶಿಕ್ಷಣ ಪ್ರೇಮಿ ಹಾಗೂ ಸಾಹಿತ್ಯ ಪ್ರೇಮಿಯನ್ನು ಕಳೆದುಕೊಂಡು ದುಃಖತಪ್ತರಾಗಿದ್ದೇವೆ ಎಂದು ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ. ವಾಮದೇವಪ್ಪ ಸಂತಾಪ ಸೂಚಿಸಿದ್ದಾರೆ.

ಮರಳಸಿದ್ದಯ್ಯ ಅವರ ಅಗಲಿಕೆಯಿಂದ ಉಂಟಾಗಿರುವ ದುಃಖವನ್ನು ಅವರ ಕುಟುಂಬಕ್ಕೆ, ಹಿತೈಷಿಗಳಿಗೆ ಹಾಗೂ ಬಂಧು ಮಿತ್ರರಿಗೆ ಸಹಿಸಿಕೊಳ್ಳುವ ಶಕ್ತಿಯನ್ನು ಶ್ರೀ ವಿಶ್ವಬಂಧು ಮರಳುಸಿದ್ದರು ಹಾಗೂ ತರಳಬಾಳು ಜಗದ್ಗುರು ಗುರು ಪರಂಪರೆಯು ಕರುಣಿಸಲಿ ಎಂದು ಪ್ರಾರ್ಥಿಸುವೆವು ಎಂದು ಹೇಳಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಶಸ್ತ್ರಚಿಕಿತ್ಸೆ

90 ವರ್ಷದ ತಾತನಿಗೆ ಹೊಸ ಜೀವ: ರೋಬೋಟಿಕ್ ಶಸ್ತ್ರಚಿಕಿತ್ಸೆ ತಂದ ಹೊಸ ಆಶಾಕಿರಣ

ಸಿವಿ ಷಣ್ಮುಗಂ

“ಫ್ರೀ ವೈಫ್” ನೀಡ್ತಾರೆಂಬ ಸಿವಿ ಷಣ್ಮುಗಂ ಹೇಳಿಕೆಗೆ ಮಹಿಳಾ ನಾಯಕಿಯರು ಕೆಂಡಾಮಂಡಲ!

ರಾಶಿ

ಬುಧವಾರದ ರಾಶಿ ಭವಿಷ್ಯ 15 ಅಕ್ಟೋಬರ್ 2025: ಈ ರಾಶಿಯವರ ಯಾವುದೇ ಕೆಲಸ ಪ್ರಯತ್ನಿಸಿದರೂ ಕೈಗೂಡುತ್ತಿಲ್ಲ ಯಾಕೆ?

ಯುವತಿ

ದುರ್ಗಾಪುರ ಯುವತಿ ಮೇಲೆ ಅ*ತ್ಯಾಚಾರಕ್ಕೆ ಸಾಥ್ ಕೊಟ್ಟಿದ್ದ ಸಹಪಾಠಿ ಸೆರೆ: ಬಂಧಿತರ ಸಂಖ್ಯೆ 6ಕ್ಕೇರಿಕೆ, ಸ್ಫೋಟಕ ಮಾಹಿತಿ ಬಯಲಿಗೆ!

ಚನ್ನಗಿರಿ

ಚನ್ನಗಿರಿ ಪಟ್ಟಣ ಸಮೀಪದ ಜೆ. ಹೆಚ್. ಪಟೇಲ್ ನಗರದಲ್ಲಿ ರಾತ್ರಿ ವೇಳೆ ಎಸ್ಪಿ ಭೇಟಿ: ಮನೆ ಗೋಡೆ ಮೇಲೆ ಉಮಾ ಪ್ರಶಾಂತ್ ಸ್ಟಿಕ್ಕರ್ ಅಂಟಿಸಿದ್ಯಾಕೆ?

ಧರ್ಮಸ್ಥಳ

ಕಾಂಗ್ರೆಸ್ ಜೊತೆ ಶಾಮೀಲಾಗಿಲ್ಲವಾದರೆ ಬಿಜೆಪಿ ಕಚೇರಿಗೆ ಬಂದು ಧರ್ಮಸ್ಥಳದ ಮಂಜುನಾಥ ಸ್ವಾಮಿ ಮೇಲೆ ಆಣೆ ಮಾಡಿ: ಕೃಷ್ಣಮೂರ್ತಿ ಪವಾರ್ ಪಂಥಾಹ್ವಾನ

Leave a Comment