Site icon Kannada News-suddikshana

‘ಜೆಟ್ ಏರ್ವೇಸ್’ ಸಂಸ್ಥಾಪಕ ನರೇಶ್ ಗೋಯಲ್ ಪತ್ನಿ ನಿಧನ

ಮುಂಬೈ:  ಜೆಟ್ ಏರ್ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರ ಪತ್ನಿ ಅನಿತಾ ಗೋಯಲ್ ಇಂದು ಬೆಳಗ್ಗೆ ಮುಂಬೈನ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ದೀರ್ಘ ಕಾಲದಿಂದ ಕ್ಯಾನ್ಸರ್ನಿಂದ ಬಳಲುತ್ತಿದ್ದ ಅವರು, ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಪತ್ನಿಯ ಆರೋಗ್ಯ ಸ್ಥಿತಿ ಬಿಗಡಾಯಿಸಿದ ಹಿನ್ನೆಲೆಯಲ್ಲಿ ಬಂಧನದಲ್ಲಿದ್ದ ನರೇಶ್ ಗೋಯಲ್ ಅವರಿಗೆ ಮಧ್ಯಂತರ ಜಾಮೀನು ನೀಡಲಾಗಿತ್ತು. ಅನಿತಾ ಗೋಯಲ್ ಅವರ ಅಂತಿಮ ಸಂಸ್ಕಾರ ಇಂದು ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Exit mobile version