Site icon Kannada News-suddikshana

ಮೇಕೆ ತಪ್ಪಿಸಲು ಹೋಗಿ ಅಪಘಾತ: ಬೈಕ್ ನಿಂದ ಬಿದ್ದಿದ್ದ ಉಪನ್ಯಾಸಕ ಕವಿರಾಜ್ ಪತ್ನಿ ಸಾವು

SUDDIKSHANA KANNADA NEWS/ DAVANAGERE/ DATE:30-11-2024

ದಾವಣಗೆರೆ: ಮೋಟಾರ್ ಬೈಕ್‌ನಿಂದ ಬಿದ್ದು ಗಾಯಗೊಂಡಿದ್ದ ಮಹಿಳೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಹೂವಮ್ಮ (41) ಸಾವನ್ನಪ್ಪಿದ ಮಹಿಳೆ. ಕಳೆದ ಗುರುವಾರ ಹೊನ್ನಾಳಿ ತಾಲೂಕಿನ ಬೇಲಿಮಲ್ಲೂರು ಗ್ರಾಮದಿಂದ ನ್ಯಾಮತಿ ತಾಲೂಕಿನ ಮಲ್ಲಿಗೆನಹಳ್ಳಿ ಗ್ರಾಮಕ್ಕೆ ಪತಿ ರಾಜ್ಯಶಾಸ್ತ್ರ ಉಪನ್ಯಾಸಕ ಎಂ.ಜಿ.ಕವಿರಾಜ್‌ರೊಂದಿಗೆ ಮೋಟರ್ ಬೈಕ್‌ನಲ್ಲಿ ಬರುತ್ತಿರುವಾಗ ಹೊನ್ನಾಳಿ ತಾಲೂಕಿನ ತುಗ್ಗಲಹಳ್ಳಿ ಗ್ರಾಮದ ಹತ್ತಿರ ಬೈಕ್‌ಗೆ ಅಡ್ಡಬಂದ ಮೇಕೆಮರಿಯನ್ನು ತಪ್ಪಿಸಲು ಹೋಗಿ ಆಯತಪ್ಪಿ ಕೆಳಗೆ ಬಿದ್ದ ಪರಿಣಾಮ ಎಂ.ಜಿ.ಕವಿರಾಜ್‌ರ ಪತ್ನಿ ಹೂವಮ್ಮ (41)ರ ತಲೆಗೆ ಬಲವಾದ ಪೆಟ್ಟು ಬಿದ್ದು ರಕ್ತಸ್ರಾವವಾಗಿತ್ತು.

ಶಿವಮೊಗ್ಗದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪತಿ, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಮೃತ ಹೂವಮ್ಮ ಅಗಲಿದ್ದಾರೆ.

 

Exit mobile version