SUDDIKSHANA KANNADA NEWS/ DAVANAGERE/ DATE:09-01-2025
ದಾವಣಗೆರೆ: ದಾವಣಗೆರೆ ತಾಲ್ಲೂಕು ಅತ್ತಿಗೆರೆ ಗ್ರಾಮದ ಕುರುವತ್ತಪ್ಪರ ಶ್ರೀ ನಂದಿಬಸಪ್ಪ ಕೆ.ಎಂ. (61) ಅವರು ಗುರುವಾರ ಬೆಳಗ್ಗೆ ಬೆಂಗಳೂರಿನ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಬೆಂಗಳೂರು ನಗರದಲ್ಲಿ ಕನ್ಸಲ್ಟೆಂಟ್ ಇಂಜಿನಿಯರ್ ಹಾಗೂ ಬಿಲ್ಡರ್ ಆಗಿದ್ದ ಅವರು ತಾಯಿ, ಪತ್ನಿ, ಇಬ್ಬರು ಪುತ್ರಿಯರು ಹಾಗೂ ನಾಲ್ವರು ಸಹೋದರರು, ಮೂವರು ಸಹೋದರಿಯರನ್ನು ಅಗಲಿದ್ದಾರೆ.
ಅಂತ್ಯಕ್ರಿಯೆ ಜನವರಿ 10ರಂದು ಮಧ್ಯಾಹ್ನ 1ಗಂಟೆಗೆ ದಾವಣಗೆರೆ ತಾಲ್ಲೂಕು ಅತ್ತಿಗೆರೆ ಗ್ರಾಮದ ಮೃತರ ಜಮೀನಿನಲ್ಲಿ ನಡೆಯಲಿದೆ ಎಂದು ಸಂಬಂಧಿಕರು ತಿಳಿಸಿದ್ದಾರೆ.