SUDDIKSHANA KANNADA NEWS/ DAVANAGERE/ DATE_13_07_2025
ದಾವಣಗೆರೆ: ದಾವಣಗೆರೆಯಲ್ಲಿ ವಾಕಿಂಗ್ ಗೆ ಹೋಗಿದ್ದಾಗ ಉದ್ಯಮಿಯೊಬ್ಬರಿಗೆ ಹೃದಯಾಘಾತವಾಗಿ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದ್ದು, ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಈ ಸುದ್ದಿಯನ್ನೂ ಓದಿ: ಬಿಜೆಪಿ ಶಿಸ್ತಿನ “ಸಿಪಾಯಿ”, ಸಂಘಟನಾ “ಚತುರ” ಆವರಗೆರೆ ರುದ್ರೇಶ್
ನಗರದ ಶಕ್ತಿ ನಗರ ನಿವಾಸಿ ಕೆ. ಬಿ. ಅನಿಲ್ ಕುಮಾರ್ (40) ಕುಸಿದು ಬಿದ್ದು ಮೃತಪಟ್ಟ ಉದ್ಯಮಿ. ವಾಯು ವಿಹಾರಕ್ಕೆ ಹೋಗಿದ್ದಾಗ ಅನಿಲ್ ಕುಮಾರ್ ಅವರಿಗೆ ಹೃದಯಸ್ತಂಭನವಾಗಿದೆ. ಕೂಡಲೇ ಕುಸಿದು ಬಿದ್ದಿದ್ದಾರೆ. ಈ ದೃಶ್ಯ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಕುಟುಂಬಸ್ಥರು, ಸ್ನೇಹಿತರು, ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.
ಕುಸಿದು ಬಿದ್ದು ಸಾವನ್ನಪ್ಪಿದ ವಿಡಿಯೋ!
ಶ್ರೀ ಗೌರಿ ಎಂಟರ್ ಪ್ರೈಸಸ್ ನಡೆಸುತ್ತಿದ್ದ ಅನಿಲ್ ಕುಮಾರ್ ಅವರ ಸಾವು ಬರಸಿಡಿಲು ಬಡಿದಂತಾಗಿದೆ. ಎಸ್ ಎಸ್ ರಸ್ತೆ ಪಕ್ಕದ ಡಿಆರ್ ಸರ್ಕಲ್ ದಾರಿಯಲ್ಲಿ ವಾಕ್ ಮಾಡುವಾಗ ಕುಸಿದು ಬಿದ್ದಿದ್ದಾರೆ.
ಅಕ್ಕಪಕ್ಕದಲ್ಲಿ ಯಾರೂ ಇಲ್ಲದ ಕಾರಣ ತಕ್ಷಣವೇ ಆಸ್ಪತ್ರೆಗೆ ದಾಖಲಿಸಲು ಆಗಿಲ್ಲ. ಜಿಲ್ಲೆಯಲ್ಲಿ ಕಳೆದ ಮೂರು ತಿಂಗಳ ಅಂತರದಲ್ಲಿ ಹೃದಯಾಘಾತ ಪ್ರಕರಣಗಳು 80ರ ಗಡಿ ದಾಟಿದ್ದು, ಮೃತರ ಸಂಖ್ಯೆ ಏಳಕ್ಕೆ ಏರಿಕೆಯಾದಂತಾಗಿದೆ.