SUDDIKSHANA KANNADA NEWS/ DAVANAGERE/ DATE:08-01-2024
ದಾವಣಗೆರೆ: ವಚನ ಚಳವಳಿಯ ಅಣ್ಣ ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವಂತೆ ಒತ್ತಾಯಿಸಿ ತರಳಬಾಳು ಜಗದ್ಗುರುಗಳು ಮತ್ತು ಜಗದ್ಗುರು ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿ ನೇತೃತ್ವದ ಲಿಂಗಾಯತ ಸ್ವಾಮೀಜಿಗಳು, ಪ್ರಗತಿಪರ ಸ್ವಾಮೀಜಿಗಳು, ಪ್ರಗತಿಪರ ಚಿಂತಕರು ಮತ್ತು ದಲಿತ, ರೈತ, ಕಾರ್ಮಿಕ ಮುಖಂಡರುಗಳ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿ ಮನವಿ ಅರ್ಪಿಸಿದರು.
ನಿಯೋಗದಲ್ಲಿ ಶ್ರೀಶೈಲ ಜಗದ್ಗುರುಗಳು, ಫಕೀರ ದಿಂಗಾಲೇಶ್ವರ ಸ್ವಾಮೀಜಿ, ಡಾ.ರಾಜಶೇಖರ ಶಿವಾಚಾರ್ಯರು, ಡಾ.ಜಗದ್ಗುರು ಚನ್ನಬಸವಾನಂದ ಸ್ವಾಮೀಜಿ, ಶ್ರೀ ವೀರಭದ್ರ ಶಿವಾ ಕಡಕಂಚಿ, ಅಕ್ಕ ಅನ್ನಪೂರ್ಣತಾಯಿ, ಜ್ಞಾನ ಪ್ರಕಾಶ ಸ್ವಾಮೀಜಿ, ಡಾ.ಗಂಗಾಬಿಕೆ ಅಕ್ಕ, ಮಾದಾರ ಚನ್ನಯ್ಯ ಸ್ವಾಮೀಜಿ ಸೇರಿ 48 ಮಂದಿ ಸ್ವಾಮೀಜಿಗಳು, ಶರಣರು ನಿಯೋಗದಲ್ಲಿದ್ದ ಪ್ರಮುಖರು.
ಸಚಿವರಾದ ಎಂ. ಬಿ.ಪಾಟೀಲ್, ಈಶ್ವರ ಖಂಡ್ರೆ ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹಮದ್ ಹಾಗೂ ಕ್ರೈಸ್ತ ಧರ್ಮ ಗುರುಗಳು ನಿಯೋಗದ ಜತೆಗಿದ್ದರು.
ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ವಲಯದಿಂದ ಎಸ್.ಜಿ. ಸಿದ್ದರಾಮಯ್ಯ, ಬಂಜಗೆರೆ ಜಯಪ್ರಕಾಶ್, ಎಚ್.ಎಲ್.ಪುಷ್ಪ, ಮಾವಳ್ಳಿ ಶಂಕರ್, ವಸುಂಧರ ಭೂಪತಿ, ಕೆ.ಷರೀಫಾ, ಎಲ್.ಮುಕುಂದರಾಜು, ಜಾಗೃತ ಕರ್ನಾಟಕದ ಬಿ.ಸಿ.ಬಸವರಾಜು ಮತ್ತಿತರರು ಹಾಜರಿದ್ದರು.