SUDDIKSHANA KANNADA NEWS/ DAVANAGERE/ DATE:02-04-2025
ದಾವಣಗೆರೆ: ಪ್ರವಾಸೋದ್ಯಮ ಇಲಾಖೆ ವತಿಯಿಂದ ದೇಖೋ ಅಪ್ನ ದೇಶ್ ಪೋಟೋ ಕಂಟೆಸ್ಟ್-2025 ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.
ಪ್ರವಾಸೋದ್ಯಮವನ್ನು ಇನ್ನಷ್ಟು ಮೇಲ್ದರ್ಜೆಗೇರಿಸಲು ಹಾಗೂ ಎಲ್ಲಾ ವರ್ಗಗಳ ಅಂದರೆ ಧಾರ್ಮಿಕ, ಸಾಂಸ್ಕೃತಿಕ, ಪಾರಂಪರಿಕ, ಕರಕುಶಲ, ನೈಸರ್ಗಿಕ ಹಾಗೂ ವನ್ಯಜೀವಿ ಮತ್ತು ಸಹಾಸ ಚಟುವಟಿಕೆಗಳು ಹಾಗೂ ಇತರೆ ಪ್ರವಾಸಿ ತಾಣಗಳನ್ನು ಗುರಿತಿಸಿ, ವಿಶ್ವ ದರ್ಜೆಯಲ್ಲಿ ಅಭಿವೃದ್ದಿ ಪಡಿಸಲು ಡಿಸ್ಕವರಿ ದಿ ಬ್ಯೂಟಿ ಆಫ್ ಇಂಡಿಯಾ ಶೀರ್ಷಿಕೆಯಡಿಯಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಜಿಲ್ಲೆಯ ಅತ್ಯುತ್ತಮ ಛಾಯಾಚಿತ್ರಗಳನ್ನು ಸೆರೆಹಿಡಿದು, ಪ್ರವಾಸಿ ತಾಣಗಳ ಕಿರು ವಿವರಣೆಗಳೊಂದಿಗೆ ಇಮೇಲ್ ಗೆ ಏಪ್ರಿಲ್ 7 ರೊಳಗಾಗಿ ಸಲ್ಲಿಸಬೇಕೆಂದು ಇಲಾಖೆಯ ಸಹಾಯಕ ನಿರ್ದೇಶಕರಾದ ಕಾವ್ಯ ತಿಳಿಸಿದ್ದಾರೆ.