Site icon Kannada News-suddikshana

ಅಬಕಾರಿ ನೀತಿ ಹಗರಣ: ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನಿರಾಕರಿಸಿದ ಸುಪ್ರೀಂ

ದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ಸೆರೆವಾಸ ಅನುಭವಿಸುತ್ತಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ.

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ಸಿಬಿಐಗೆ ನೋಟಿಸ್ ಜಾರಿ ಮಾಡಿತು, ಅಲ್ಲಿ ಕೇಜ್ರಿವಾಲ್ ಅವರು ತಮ್ಮ ಬಂಧನವನ್ನು ಪ್ರಶ್ನಿಸಿ ಜಾಮೀನು ಮಂಜೂರು ಮಾಡುವಂತೆ ಕೋರಿದ್ದರು. ಆದರೆ ನ್ಯಾಯಾಲಯವು ಸದ್ಯಕ್ಕೆ ಮಧ್ಯಂತರ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದೆ. ಹಾಗು ವಿಚಾರಣೆಯನ್ನು ಆಗಸ್ಟ್ 23ಕ್ಕೆ ಮುಂದುಡಿದೆ.

ನ್ಯಾ. ಸೂರ್ಯ ಕಾಂತ್ ಅವರು ನೋಟಿಸ್ ಜಾರಿ ಮಾಡುವಂತೆ ಸೂಚಿಸಿದ್ದರಿಂದ ಆರೋಗ್ಯ ಸಮಸ್ಯೆಗಳಿಂದಾಗಿ ನಾವು ಮಧ್ಯಂತರ ಜಾಮೀನಿಗೆ ಅರ್ಜಿ ಸಲ್ಲಿಸಿದ್ದೇವೆ ಎಂದು ಕೇಜ್ರಿವಾಲ್ ಪರ ವಾದ ಮಂಡಿಸಿದ ವಕೀಲರು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳು ಮಧ್ಯಂತರ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಹೇಳಿದರು.

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಅರವಿಂದ್ ಕೇಜ್ರಿವಾಲ್, ಬಿಆರ್‌ಎಸ್ ನಾಯಕಿ ಕೆ ಕವಿತಾ ಮತ್ತು ಇತರರ ನ್ಯಾಯಾಂಗ ಬಂಧನದ ಅವಧಿಯನ್ನು ನ್ಯಾಯಾಲಯ ಮಂಗಳವಾರ ಸೆಪ್ಟೆಂಬರ್ 2 ರವರೆಗೆ ವಿಸ್ತರಿಸಿದೆ.

Exit mobile version