ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಮಹಿಳೆಯರ ಸುರಕ್ಷತೆ ಮತ್ತೆ ಪ್ರಶ್ನೆಯಾಗಿದ್ದು, ಸ್ಲೀಪರ್ ಬಸ್‌ನ ಚಾಲಕ ಮತ್ತು ನಿರ್ವಾಹಕ ಸೇರಿ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬೆಳಕಿಗೆ ಬಂದಿದೆ.
ಘಟನೆಯ ವಿವರ:
ಮೇ 12 ರಂದು ರಾತ್ರಿ ಈ ಕೃತ್ಯ ನಡೆದಿದೆ ಎಂದು ದೆಹಲಿ ಪೊಲೀಸ್ ಮೂಲಗಳು ತಿಳಿಸಿವೆ. ಸಂತ್ರಸ್ತೆ ಮಂಗೋಲಪುರಿಯ ಕಾರ್ಖಾನೆಯೊಂದರಲ್ಲಿ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದಾಗ ಬಸ್ ನಿಲ್ದಾಣದ ಬಳಿ ಈ ಘಟನೆ ಸಂಭವಿಸಿದೆ. ಆರೋಪಿಗಳು ಮಹಿಳೆಯನ್ನು ಬಲವಂತವಾಗಿ ಬಸ್‌ನೊಳಗೆ ಎಳೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.
ಬಳಿಕ ಮಹಿಳೆಯನ್ನು ನಂಗ್ಲೋಯ್ ಮೆಟ್ರೋ ನಿಲ್ದಾಣದ ಬಳಿ ಬಿಟ್ಟು ಆರೋಪಿಗಳು ಪರಾರಿಯಾಗಿದ್ದರು. ಮಹಿಳೆಯ ದೂರಿನ ಮೇರೆಗೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು, ಸದ್ಯ ಬಸ್ ಚಾಲಕ ಮತ್ತು ನಿರ್ವಾಹಕನನ್ನು ಬಂಧಿಸಿದ್ದಾರೆ. ಕೃತ್ಯಕ್ಕೆ ಬಳಸಲಾದ ಸ್ಲೀಪರ್ ಬಸ್ ಅನ್ನು ವಶಪಡಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರಿದಿದೆ.
- bus driver and conductor arrested
- crime against women
- Delhi Crime News
- Delhi gang rape news
- Delhi Police Investigation.
- Delhi sleeper bus rape case
- Nangloi rape case
- sleeper bus incident.
- women safety in Delhi
- ದೆಹಲಿ ಕ್ರೈಂ ನ್ಯೂಸ್
- ದೆಹಲಿ ಗ್ಯಾಂಗ್ ರೇಪ್
- ದೆಹಲಿ ಪೊಲೀಸ್ ತನಿಖೆ
- ನಂಗ್ಲೋಯ್ ಅತ್ಯಾಚಾರ ಪ್ರಕರಣ
- ಬಸ್ ಚಾಲಕ ಮತ್ತು ನಿರ್ವಾಹಕ ಅರೆಸ್ಟ್
- ಮಹಿಳೆಯರ ಮೇಲಿನ ದೌರ್ಜನ್ಯ
- ಸ್ಲೀಪರ್ ಬಸ್ ಅತ್ಯಾಚಾರ ಪ್ರಕರಣ





Leave a comment