Home ಕ್ರೈಂ ನ್ಯೂಸ್ ಪೊಲೀಸ್ ಠಾಣೆಯ ಮುಂದೆಯೇ ಸೆಕ್ಯೂರಿಟಿ ಗಾರ್ಡ್‌ಗೆ ಚಪ್ಪಲಿಯಿಂದ ಹೊಡೆದ ಮಹಿಳೆ! ಯಾಕೆ ಗೊತ್ತಾ?
ಕ್ರೈಂ ನ್ಯೂಸ್ದಾವಣಗೆರೆನವದೆಹಲಿಬೆಂಗಳೂರು

ಪೊಲೀಸ್ ಠಾಣೆಯ ಮುಂದೆಯೇ ಸೆಕ್ಯೂರಿಟಿ ಗಾರ್ಡ್‌ಗೆ ಚಪ್ಪಲಿಯಿಂದ ಹೊಡೆದ ಮಹಿಳೆ! ಯಾಕೆ ಗೊತ್ತಾ?

Share
ಪೊಲೀಸ್
Share

ನವದೆಹಲಿ: ರಾಷ್ಟ್ರ ರಾಜಧಾನಿಯ ಪಶ್ಚಿಮ ದೆಹಲಿಯ ಕೀರ್ತಿ ನಗರದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಬೀದಿ ನಾಯಿಗೆ ಹೊಡೆದ ಎಂಬ ಕಾರಣಕ್ಕೆ ಮಹಿಳೆಯೊಬ್ಬರು ಸೆಕ್ಯೂರಿಟಿ ಗಾರ್ಡ್ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿದ್ದಾರೆ.

ಏನಿದು ಘಟನೆ?:

ಕೀರ್ತಿ ನಗರ ಪೊಲೀಸ್ ಠಾಣೆಯ ಮುಂಭಾಗದಲ್ಲೇ ಈ ಘಟನೆ ಸಂಭವಿಸಿದೆ. ಲಭ್ಯವಿರುವ ಮಾಹಿತಿಯ ಪ್ರಕಾರ, ದಾರಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಬೀದಿ ನಾಯಿ ದಾಳಿ ಮಾಡಲು ಮುಂದಾದಾಗ, ಸೆಕ್ಯೂರಿಟಿ ಗಾರ್ಡ್ ಆ ವ್ಯಕ್ತಿಯನ್ನು ರಕ್ಷಿಸಲು ನಾಯಿಯನ್ನು ಓಡಿಸಲು ಪ್ರಯತ್ನಿಸಿದ್ದಾರೆ. ಈ ವೇಳೆ ನಾಯಿಗೆ ಪೆಟ್ಟಾಗಿದೆ ಎಂದು ಆರೋಪಿಸಿರುವ ಮಹಿಳೆ, ಗಾರ್ಡ್‌ನ ಕಾಲರ್ ಹಿಡಿದು ಮನಬಂದಂತೆ ಕೆನ್ನೆಗೆ ಬಾರಿಸಿದ್ದಾರೆ. ಅಷ್ಟಕ್ಕೇ ನಿಲ್ಲದೆ, ತನ್ನ ಕಾಲಿನಲ್ಲಿದ್ದ ಚಪ್ಪಲಿಯನ್ನು ತೆಗೆದು ಗಾರ್ಡ್‌ಗೆ ಹೊಡೆದಿದ್ದಾರೆ.

ಪೊಲೀಸರ ಸಮ್ಮುಖದಲ್ಲೇ ಹಲ್ಲೆ:

ವಿಶೇಷವೆಂದರೆ, ಈ ಘಟನೆ ಪೊಲೀಸ್ ಠಾಣೆಯ ಕೂಗಳತೆಯ ದೂರದಲ್ಲೇ ನಡೆದಿದ್ದು, ಪೊಲೀಸರು ಸ್ಥಳದಲ್ಲಿದ್ದರೂ ಮಹಿಳೆಯನ್ನು ತಡೆಯಲು ಮುಂದಾಗಲಿಲ್ಲ ಎಂಬ ಆರೋಪ ಕೇಳಿಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್ ಆಗಿದ್ದು, ಸಾರ್ವಜನಿಕರು ಮಹಿಳೆಯ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸದ್ಯದ ಪರಿಸ್ಥಿತಿ:

ಈ ಸಂಬಂಧ ಇದುವರೆಗೆ ಸೆಕ್ಯೂರಿಟಿ ಗಾರ್ಡ್ ಯಾವುದೇ ಅಧಿಕೃತ ದೂರು ನೀಡಿಲ್ಲ ಎಂದು ಪಶ್ಚಿಮ ದೆಹಲಿಯ ಡಿಸಿಪಿ ತಿಳಿಸಿದ್ದಾರೆ. ಗಾರ್ಡ್ ದೂರು ನೀಡದ ಕಾರಣ ಸದ್ಯಕ್ಕೆ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ.

Share

Leave a comment

Leave a Reply

Your email address will not be published. Required fields are marked *