SUDDIKSHANA KANNADA NEWS/ DAVANAGERE/ DATE:17-03-2024
ದಾವಣಗೆರೆ: ಕುರುಬ ಸಮುದಾಯಕ್ಕೆ ಬಿಜೆಪಿಯು ಮೋಸ ಮಾಡಿದೆ. ಲೋಕಸಭೆ ಚುನಾವಣೆಗೆ ಸಮುದಾಯಕ್ಕೆ ಟಿಕೆಟ್ ನೀಡದೇ ವಂಚಿಸಿದೆ. ಕಾಂಗ್ರೆಸ್ ಪಕ್ಷವು ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಜಿ. ಬಿ. ವಿನಯ್ ಕುಮಾರ್ ಅವರಿಗೆ ಟಿಕೆಟ್ ನೀಡಬೇಕು ಎಂದು ಚನ್ನಗಿರಿಯ ಸಿದ್ದಪ್ಪ ಆಗ್ರಹಿಸಿದ್ದಾರೆ.
ಇಂದಿನ ರಾಜಕೀಯ ವಿದ್ಯಮಾನಗಳ ಬಗ್ಗೆ ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು ಗಮನಹರಿಸುತ್ತಿದ್ದಾರೆ. ಎರಡು ಪಕ್ಷಗಳ ಮುಖಂಡರು ಹಿಂದುಳಿದವರು ಮತ್ತು ಶೋಷಿತ ವರ್ಗಗಳ ಮತ ಮಾತ್ರ ಬೇಕು. ಹಿಂದುಳಿದ
ಜಾತಿಗಳಿಗೆ ಅಧಿಕಾರ ಬೇಡ ಎಂಬ ಮನೋಭಾವಮೆ ಹೊಂದಿದ್ದಾರೆ. ಈ ಬಗ್ಗೆ ಈಗಿನ ಪೀಳಿಗೆಗೆ ಇತಿಹಾಸ ತಿಳಿಸಿಕೊಡಬೇಕಾಗಿದೆ. ಕರ್ನಾಟಕದ ರಾಜ್ಯ ರಾಜಕೀಯದಲ್ಲಿ ಬಿಜೆಪಿ ಪಕ್ಷದಿಂದ ಲೋಕಸಭೆಗೆ ಒಂದೇ ಒಂದು
ಸ್ಥಾನ ನೀಡಿಲ್ಲ. ರಾಜ್ಯದ ಕುರುಬರ ಜನಾಂಗಕ್ಕೆ ನೀಡದೇ ಇರುವುದು ದುರದೃಷ್ಟಕರ ಸಂಗತಿ ಎಂದಿದ್ದಾರೆ.
ನಮ್ಮಲ್ಲಿನ ಒಡಕು, ಸಂಘಟನೆ ಇಲ್ಲದಿರುವುದೇ ಇದಕ್ಕೆ ಕಾರಣ. ಕಾಂಗ್ರೆಸ್ ಪಕ್ಷವು ದಾವಣಗೆರೆ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಅತಿ ಹೆಚ್ಚು ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು, ಕುರುಬರು, ಪರಿಶಿಷ್ಟ ಪಂಗಡಗಳು ಹಾಗೂ ಪರಿಶಿಷ್ಟ ಜಾತಿ ಹೊಂದಿರುವ ಜಿಲ್ಲೆ. ಈ ಹಿಂದೆ ಹಿಂದುಳಿದ ವರ್ಗಗಳ ಜಾತಿಗ ಸೇರಿ ಚೆನ್ನಯ್ಯ ಒಡೆಯರ್ ಅವರನ್ನು ಗೆಲ್ಲಿಸಿದ ಕೀರ್ತಿ ದಾವಣಗೆರೆ ಮತದಾರರಿಗೆ ಸಲ್ಲುತ್ತದೆ. ಹಾಗಾಗಿ ವಿನಯ್ ಕುಮಾರ್ ಅವರಿಗೆ ಟಿಕೆಟ್ ಕೊಡಿಸಲು ಸಿಎಂ ಸಿದ್ದರಾಮಯ್ಯ ಅವರು ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.
ಹಿಂದುಳಿದ ವರ್ಗದವರೆಗೆ ಸಾಮಾಜಿಕ ನ್ಯಾಯ ದೊರಕಿಸಿಕೊಡಲು ಸಿದ್ದರಾಮಯ್ಯರು ಶ್ರಮಿಸುವ ಜೊತೆಗೆ ಹಿಂದುಳಿದವರ ಪರ ಎಂಬುದನ್ನು ಸಾಬೀತುಪಡಿಸಬೇಕು ಎಂದು ಚನ್ನಗಿರಿಯ ಸಿದ್ಧಪ್ಪ ಅವರು ಒತ್ತಾಯಿಸಿದ್ದಾರೆ.