ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ಏರಿಕೆ ಹಿನ್ನೆಲೆ ಶಾಲೆಗಳಲ್ಲಿ ಮುಂಜಾಗ್ರತೆ ಕ್ರಮ ವಹಿಸಲು ಸರ್ಕಾರ ಆದೇಶ

On: August 16, 2024 2:14 PM
Follow Us:
---Advertisement---

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ಏರಿಕೆಯಾಗುತ್ತಿರುವ ಬೆನ್ನಲ್ಲೆ ಶಾಲೆಗಳಲ್ಲಿ ಮುಂಜಾಗ್ರತೆ ಕ್ರಮ ವಹಿಸುವಂತೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊಡಿಸಿದೆ.

ಈ ಕುರಿತು ಆದೇಶ ಹೊರಡಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು, ಕಡ್ಡಾಯವಾಗಿ ಡಿಡಿಪಿಐಗಳು, ಬಿಇಓಗಳು ಶಾಲೆಗಳಲ್ಲಿ ಮಾರ್ಗಸೂಚಿ ಪಾಲನೆಗೆ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ. ಇದರಂತೆ ವಿದ್ಯಾರ್ಥಿಗಳು ಕೈ ಕಾಲು ಮುಚ್ಚುವಂತಹ ಸಮವಸ್ತ್ರ, ಬಟ್ಟೆಗಳನ್ನ ಧರಿಸುವುದು. ಶಾಲೆಗೆ ಬರುವ ಮುನ್ನ Mosquito Repellent ಗಳನ್ನು ಕೈಕಾಲುಗಳಿಗೆ ಹಚ್ಚಿಕೊಳ್ಳುವುದು.ಡೆಂಗ್ಯೂ ನಿಯಂತ್ರಣ ಕ್ರಮದ ಕುರಿತು Do’s & Don’t’s ಶಾಲೆಯ ಶಾಲಾ ಕೊಠಡಿಯ ನೋಟಿಸ್ ಬೋರ್ಡ್ ಗಳಲ್ಲಿ ಪ್ರದರ್ಶಿಸುವುದು. ಶುದ್ಧ ನೀರಿನ ಸಂಗ್ರಹಣ ಪರಿಕರಗಳನ್ನು ಭದ್ರವಾಗಿ ಮುಚ್ಚುವುದು ಹಾಗೂ ಕಡ್ಡಾಯವಾಗಿ ವಾರಕ್ಕೊಮ್ಮೆ ಗುದ್ದಿ ತುಳಿದು ಸ್ವಚ್ಛಗೊಳಿಸಿ ನಂತರ ನೀರನ್ನು ತುಂಬಿಸಬೇಕು.

ಘನತ್ಯಜ್ಯ ವಸ್ತುಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಕಡ್ಡಾಯವಾಗಿ ಶೀಘ್ರ ವಿಲೇವಾರಿ ಮಾಡುವುದು. ಶಾಲಾ ಆವರಣದ ಕಟ್ಟಡಗಳ ಟೆರೇಸ್ ನ ಮೇಲೆ ಬೀಳುವ ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ಕ್ರಮವಹಿಸುವುದು.ಡೆಂಗ್ಯೂ ಜ್ವರ ನಿಯಂತ್ರಣ ಕುರಿತು ಮಾಹಿತಿಯನ್ನು ಬೆಳಗಿನ ಪ್ರಾರ್ಥನಾ ಸಮಯದಲ್ಲಿ ಪ್ರಚಾರ ಪಡಿಸಬೇಕು ಎಂದು ಸೂಚಿಸಲಾಗಿದೆ.

ಪೋಷಕರ ಸಭೆಗಳಲ್ಲಿ ಡೆಂಗ್ಯೂ ಜ್ವರ ನಿಯಂತ್ರಣ ಕುರಿತು ಅರಿವು ಮೂಡಿಸುವುದರೊಂದಿಗೆ ಪೋಷಕರ ವಾಟ್ಸಪ್ ಗ್ರೂಪ್ ಗಳಲ್ಲಿ ಮಾಹಿತಿ ಹಂಚುವುದು. ಸ್ಥಳೀಯ ಸಂಪನ್ಮೂಲಗಳನ್ನು ಬಳಸಿಕೊಂಡು ಎಸ್ಡಿಎಂಸಿ ಸಹಕಾರದೊಂದಿಗೆ ಸೊಳ್ಳೆ ನಿರೋಧಕಗಳನ್ನ ವಿದ್ಯಾರ್ಥಿಗಳಿಗೆ ಆದ್ಯತೆ ಮೇಲೆ ಪೂರೈಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದು. ಶಾಲೆಯ ಅಕ್ಕಪಕ್ಕದಲ್ಲಿರುವ ಖಾಲಿ ನಿವೇಶನಗಳಲ್ಲಿ ಘನ ತ್ಯಾಜ್ಯ ವಸ್ತುಗಳು ಸಂಗ್ರಹವಾಗದಂತೆ ಕ್ರಮವಹಿಸುವುದು ಅಗತ್ಯವಿದ್ದಲ್ಲಿ ಪಂಚಾಯಿತಿ ವತಿಯಿಂದ ಅಗತ್ಯ ಸಹಕಾರ ಪಡೆಯುವಂತೆ ಆದೇಶಿಸಲಾಗಿದೆ.

Join WhatsApp

Join Now

Join Telegram

Join Now

Leave a Comment