SUDDIKSHANA KANNADA NEWS/ DAVANAGERE/ DATE:01-04-2025
ಬಳ್ಳಾರಿ: ಪ್ರವಾಸೋದ್ಯಮ ಇಲಾಖೆ ವತಿಯಿಂದ ‘ಡಿಸ್ಕವರ್ ದಿ ಬ್ಯೂಟಿ ಆಫ್ ಇಂಡಿಯಾ’ ಶೀರ್ಷಿಕೆಯಡಿ ‘ದೆಖೋ ಅಪ್ನ ದೇಶ್ ಫೋಟೋ ಕಾಂಟೆಸ್ಟ್-2025’ ಸ್ಪರ್ಧೆ ಏರ್ಪಡಿಸಲಾಗಿದೆ.
ಬಳ್ಳಾರಿ ಜಿಲ್ಲೆಯ ಪ್ರಮುಖ ಧಾರ್ಮಿಕ, ಸಾಂಸ್ಕೃತಿಕ, ಪಾರಂಪರಿಕ, ಕರಕುಶಲ, ನೈಸರ್ಗಿಕ ಹಾಗೂ ವನ್ಯಜೀವಿ ಮತ್ತು ಸಾಹಸ ಚಟುವಟಿಕೆಗಳು ಹಾಗೂ ಇತರೆ ಪ್ರವಾಸಿತಾಣಗಳ ಅತ್ಯಾಕರ್ಷಕ ಛಾಯಾಚಿತ್ರಗಳನ್ನು ಸೆರೆಹಿಡಿದು ಪ್ರವಾಸಿ ತಾಣಗಳ ಕಿರು ವಿವರಣೆಯೊಂದಿಗೆ Dekhoapnadeshphotos@gmail.com ಇ-ಮೇಲ್ ಗೆ ನೇರವಾಗಿ ಕಳುಹಿಸಿಕೊಡಬಹುದಾಗಿದೆ.
ಪ್ರವಾಸೋದ್ಯಮವನ್ನು ಇನ್ನಷ್ಟು ಮೇಲ್ದರ್ಜೆಗೇರಿಸಲು ಹಾಗೂ ಎಲ್ಲಾ ವರ್ಗಗಳ ಧಾರ್ಮಿಕ, ಸಾಂಸ್ಕೃತಿಕ, ಪಾರಂಪರಿಕ, ಕರಕುಶಲ, ನೈಸರ್ಗಿಕ ಹಾಗೂ ವನ್ಯಜೀವಿ ಮತ್ತು ಸಾಹಸ ಚಟುವಟಿಕೆಗಳು ಹಾಗೂ ಇತರೆ
ಪ್ರವಾಸಿತಾಣಗಳಲ್ಲಿ ಪ್ರವಾಸಿಗರ ದೃಷ್ಟಿಕೋನದಲ್ಲಿ ಪ್ರಮುಖ ಪ್ರವಾಸಿತಾಣಗಳನ್ನು ಗುರುತಿಸಿ, ವಿಶ್ವದರ್ಜೆಯಲ್ಲಿ ಅಭಿವೃದ್ಧಿಪಡಿಸಲು ಕೇಂದ್ರ ಪ್ರವಾಸೋದ್ಯಮದಿಂದ ‘ಡಿಸ್ಕವರ್ ದಿ ಬ್ಯೂಟಿ ಆಫ್ ಇಂಡಿಯಾ’ ಶೀರ್ಷಿಕೆಯಡಿ ‘ದೆಖೋ ಅಪ್ನ ದೇಶ್ ಫೋಟೋ ಕಾಂಟೆಸ್ಟ್-2025’ ಸ್ಪರ್ಧೆ ಏರ್ಪಡಿಸಲಾಗಿದ್ದು, ಈ ಸಂಬಂಧ ರಾಜ್ಯದ ಎಲ್ಲಾ ಜಿಲ್ಲೆಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿನ ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ
ಛಾಯಾಚಿತ್ರಗಳನ್ನು ಸೆರೆಹಿಡಿದು ಇ-ಮೇಲ್ ಗೆ ನೇರವಾಗಿ ಕಳುಹಿಸಲು ಏ.07 ರ ವರೆಗೆ ಅವಕಾಶ ಕಲ್ಪಿಸಲಾಗಿದೆ.
ವರ್ಗ:
ಸ್ಮಾರಕ, ವನ್ಯಜೀವಿ, ಜಿಐ ಟ್ಯಾಗ್ ಕರಕುಶಲ ವಸ್ತುಗಳು ಮತ್ತು ಕೈಮಗ್ಗಗಳು, ಭೂದೃಶ್ಯ(ಲ್ಯಾಂಡ್ ಸ್ಕೇಪ್) ಮತ್ತು ಸಾಹಸ. ಈ ವರ್ಗಗಳಡಿ ಫೋಟೋ ಕಳುಹಿಸಿಕೊಡಬಹುದಾಗಿದೆ.
ಬಳ್ಳಾರಿ ಜಿಲ್ಲೆಯ ಪ್ರವಾಸಿತಾಣಗಳಿಗೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿನ ಪ್ರಚಾರವನ್ನು ನೀಡಲು ಜಿಲ್ಲೆಯ ಎಲ್ಲಾ ಛಾಯಾಗ್ರಾಹಕರು, ಸಾರ್ವಜನಿಕರು ಹಾಗೂ ಪ್ರವಾಸಿಗರು
ಸಹಕರಿಸುವಂತೆ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಪ್ರಭುಲಿಂಗ ತಳಕೇರಿ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.