SUDDIKSHANA KANNADA NEWS/ DAVANAGERE/ DATE:30-11-2024
ಬೆಂಗಳೂರು: ರೈತರಿಗೆ ಗುಡ್ ನ್ಯೂಸ್. ವಾರದೊಳಗೆ ಬೆಳೆ ಹಾನಿಯಾದ ರೈತರ ಬ್ಯಾಂಕ್ ಖಾತೆಗೆ ಹಣ ಜಮೆಯಾಗಲಿದೆ.
ರಾಜ್ಯದಲ್ಲಿ ಹಿಂಗಾರು ಮಳೆ ಅವಧಿಯಲ್ಲಿ 1.58 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ₹120 ಕೋಟಿವರೆಗೆ ನಷ್ಟ ಆಗಿರಬಹುದು ಎಂದು ಅಂದಾಜಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.
ಬೆಳೆ ಹಾನಿಯಾದ ರೈತರ ಬ್ಯಾಂಕ್ ಖಾತೆಗಳಿಗೆ ವಾರದೊಳಗೆ ಪರಿಹಾರ ಹಣ ಜಮೆಯಾಗಲಿದೆ. ರೈತರು ವಾರದ ಬಳಿಕ ಬ್ಯಾಂಕ್ ಗೆ ಹೋಗಿ ಚೆಕ್ ಮಾಡಿಕೊಳ್ಳಬಹುದು. ಭಾರೀ ಮಳೆಯಿಂದಾಗಿ ಭಾರೀ ಹಾನಿಯಾಗಿದ್ದು, ಜಮೀನುಗಳಿಗೆ ನೀರು ನುಗ್ಗಿತ್ತು. ಕೆಲವೆಡೆ ಬೆಳೆಯೇ ಬಂದಿಲ್ಲ. ನೀರಿನಲ್ಲಿ ಕೊಚ್ಚಿ ಹೋಗಿದೆ. ಹಾಗಾಗಿ, ರೈತರ ಖಾತೆಗೆ ನೇರವಾಗಿ ಹಣ ಜಮೆ ಮಾಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.