ದಾವಣಗೆರೆ: ಜನಸಾಮಾನ್ಯರಲ್ಲಿ ತೀವ್ರ ಆತಂಕ ಹಾಗೂ ಭೀತಿ ಮೂಡಿಸಿದ್ದ ಬೀದಿನಾಯಿಗಳ ಹಾವಳಿಯನ್ನು ನಿಯಂತ್ರಿಸಲು ಕೊನೆಗೂ ಮಹತ್ವದ ಕ್ರಮ ಕೈಗೊಳ್ಳಲಾಗಿದೆ.
ಇಲ್ಲಿನ ದೇವರಾಜ್ ಅರಸು ಬಡಾವಣೆಯಲ್ಲಿ ಬೀದಿನಾಯಿಗಳನ್ನು ಹಿಡಿದು ಅವುಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ಹಾಗೂ ರೇಬಿಸ್ ನಿರೋಧಕ ಲಸಿಕೆ ನೀಡುವ ವಿಶೇಷ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಗಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಸಮರ್ಥ್ ಮಲ್ಲಿಕಾರ್ಜುನ್ ಶಾಮನೂರು ಅವರು ಈ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.
ಸ್ಥಳೀಯ ನಿವಾಸಿಗಳು ಮತ್ತು ಪಾದಚಾರಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಪಾಲಿಕೆ ಹಾಗೂ ಪಶುಪಾಲನಾ ಇಲಾಖೆಯ ಸಹಯೋಗದೊಂದಿಗೆ ಈ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿದೆ.
ನುರಿತ ತಂಡವು ಬಡಾವಣೆಯ ವಿವಿಧೆಡೆ ಸಂಚರಿಸಿ ನಾಯಿಗಳನ್ನು ಹಿಡಿಯುತ್ತಿದ್ದು, ಶಸ್ತ್ರಚಿಕಿತ್ಸೆ ಮುಗಿದ ನಂತರ ಸುರಕ್ಷಿತವಾಗಿ ಮರಳಿ ಅದೇ ಜಾಗಕ್ಕೆ ಬಿಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಕ್ರಮದಿಂದ ಮುಂದಿನ ದಿನಗಳಲ್ಲಿ ನಾಯಿಗಳ ಸಂಖ್ಯೆ ಹಾಗೂ ಅವುಗಳ ಆಕ್ರಮಣಕಾರಿ ಸ್ವಭಾವ ನಿಯಂತ್ರಣಕ್ಕೆ ಬರಲಿದೆ ಎಂದು ನಿವಾಸಿಗಳು ನಿರಾಳರಾಗಿದ್ದಾರೆ.





Leave a comment