SUDDIKSHANA KANNADA NEWS/ DAVANAGERE/ DATE:11-01-2025
ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರಾಧ್ಯಕ್ಷ ಹಾಗಾ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರನ್ನು ಬೆಂಗಳೂರಿನಲ್ಲಿ ನಟ ರಾಕ್ಷಸ ಡಾಲಿ ಧನಂಜಯ್ ಭೇಟಿ ಮಾಡಿದರು.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾಮನೂರು ಶಿವಶಂಕರಪ್ಪ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಕನ್ನಡ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ ಅವರು ತಮ್ಮ ಮದುವೆಯ ಕರೆಯೋಲೆ ನೀಡಿ, ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪನವರನ್ನು ಆಹ್ವಾನಿಸಿದರು. ಈ ವೇಳೆ ಶಾಮನೂರು ಶಿವಶಂಕರಪ್ಪರ ಆಶೀರ್ವಾದ ಪಡೆದರು.
ಈ ವೇಳೆ ಮಾತನಾಡಿದ ಶಾಮನೂರು ಶಿವಶಂಕರಪ್ಪ ಅವರು, ಹೊಸ ಬದುಕಿಗೆ ಮುಂದಡಿಯಿಡುತ್ತಿರುವ ನವ ಜೋಡಿಗೆ ಶುಭವಾಗಲಿ ಎಂದು ಹಾರೈಸಿದರು.