ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಧರ್ತಿ ಆಭಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನಕ್ಕೆ 44 ಗ್ರಾಮಗಳು ಅಭಿವೃದ್ಧಿಗಾಗಿ ಆಯ್ಕೆ, ಗ್ರಾಮಸಭೆ: ಡಿಸಿ

On: October 3, 2025 5:22 PM
Follow Us:
ಅಭಿವೃದ್ಧಿ
---Advertisement---

ದಾವಣಗೆರೆ: ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯದಿಂದ ಧರ್ತಿ ಆಭಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನಯಡಿ ದಾವಣಗೆರೆ ಜಿಲ್ಲೆಯ 44 ಗ್ರಾಮಗಳು ಅಭಿವೃದ್ಧಿಗೆ ಆಯ್ಕೆಯಾಗಿದ್ದು ಕ್ರಿಯಾ ಯೋಜನೆ ತಯಾರಿಕೆಗೆ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2ರವರೆಗೆ ವಿಶೇಷ ಗ್ರಾಮಸಭೆ ನಡೆಸಿ ಕ್ರಿಯಾ ಯೋಜನೆ ತಯಾರಿಕೆಗೆ ಚಾಲನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.

READ ALSO THIS STORY: ದೇವಸ್ಥಾನ ಸೇರಿ ಪ್ರೇಕ್ಷಣೀಯ ಸ್ಥಳಗಳಲ್ಲಿ ವೆಡ್ಡಿಂಗ್ ಫೋಟೋ, ವಿಡಿಯೋ ಶೂಟ್ ಗೆ ಅನುಮತಿ ಕೊಡಿ: ಡಿಸಿಗೆ ಸಲ್ಲಿಸಿದ ಮನವಿಯಲ್ಲೇನಿದೆ?

ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ ಹಾಗೂ ರಾಜ್ಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಇವರ ನಿರ್ದೇಶನದಂತೆ ಕರ್ನಾಟಕ ರಾಜ್ಯದ 14 ಜಿಲ್ಲೆಗಳಿಗೆ ಧರ್ತಿ ಆಭಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆ ಕೇಂದ್ರದ ಒಂದು ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾಗಿದ್ದು, 2047 ಕ್ಕೆ ವಿಕಸಿತ ಭಾರತ ದೃಷ್ಟಿಯನ್ನು ಇಟ್ಟುಕೊಂಡು ಮುಂದಿನ 5 ವರ್ಷ 2030ರ ವರೆಗೆ ಕ್ರಿಯಾ ಯೋಜನೆಗಳನ್ನು ತಯಾರಿಸಿ ಬುಡಕಟ್ಟು ಸಮುದಾಯಗಳ ಸಬಲೀಕರಣ ಮತ್ತು ಗ್ರಾಮ ಮಟ್ಟದಲ್ಲಿ ಸ್ಪಂದಿಸುವ ಆಡಳಿತ ವ್ಯವಸ್ಥೆಯನ್ನು ಅನುಷ್ಠಾನಗೊಳಿಸುವುದು ಇದರ ಉದ್ದೇಶವಾಗಿದೆ.

ಈ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಜಿಲ್ಲೆ , ತಾಲ್ಲೂಕು ಮತ್ತು ಗ್ರಾಮ ಮಟ್ಟದಲ್ಲಿ ಆದಿ ಕರ್ಮಯೋಗಿ ಅಭಿಯಾನವನ್ನು ರೂಪಿಸಿ ಅನುಷ್ಠಾನಾಧಿಕಾರಿಗಳು ಮತ್ತು ಭಾಗಿದಾರರಿಗೆ ತರಬೇತಿ ನೀಡಲಾಗಿದೆ. ಸರ್ಕಾರದ 17 ಇಲಾಖೆಗಳ ಸಹಯೋಗದಲ್ಲಿ 25 ಅಭಿವೃದ್ಧಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಲು ಕಾರ್ಯಕ್ರಮವನ್ನು ರೂಪಿಸಲಾಗಿದೆ.

ದಾವಣಗೆರೆ ಜಿಲ್ಲೆಯ ಗುರುಸಿದ್ದಾಪುರ, ಬಸವನಕೋಟೆ, ಹೊಸಕೆರೆ, ಕೆಚ್ಚೇನಹಳ್ಳಿ, ಕ್ಯಾಸೇನಹಳ್ಳಿ, ಹನುಮಂತಪುರ, ದೇವಿಕೆರೆ, ಪಲ್ಲಾಗಟ್ಟೆ, ಬಿಸ್ತುವಳ್ಳಿ, ಅಣಬೂರ್, ದೊಣ್ಣೆಹಳ್ಳಿ, ತೋರಣಗಟ್ಟೆ ಗ್ರಾಮ ಪಂಚಾಯಿತಿ, ಜಗಳೂರು ತಾಲ್ಲೂಕು, ಗುಡ್ಡದ ಕೊಮಾರನಹಳ್ಳಿ, ಕೆಂಪನಹಳ್ಳಿ, ಮೆದಿಕೆರೆ, ಕೋಗಲೂರು, ಹಿರೇಮಳಲಿ, ಹೊನ್ನೆಬಾಗಿ, ಗರಗ, ಕಂಚಿಗನಾಳ್, ಗ್ರಾಮ ಪಂಚಾಯಿತಿ, ಚನ್ನಗಿರಿ ತಾಲ್ಲೂಕು ಆಲೂರು, ಅಣಜಿ, ಹೊನ್ನೂರು, ಹೆಬ್ಬಾಳು, ಕುರ್ಕಿ, ಶ್ಯಾಗಲೆ, ಗ್ರಾಮ ಪಂಚಾಯಿತಿ, ದಾವಣಗೆರೆ ತಾಲ್ಲೂಕು, ಎಳೆಹೊಳೆ, ಕೊಂಡಜ್ಜಿ, ಗ್ರಾಮ ಪಂಚಾಯಿತಿ, ಹರಿಹರ ತಾಲ್ಲೂಕು, ಯರಗನಹಳ್ಳಿ, ಹಿರೇಗೋಣಿಗೆರೆ, ಗ್ರಾಮ ಪಂಚಾಯಿತಿ, ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳ ಗ್ರಾಮಗಳು ಸೇರಿದಂತೆ ಒಟ್ಟು 44 ಗ್ರಾಮಗಳು ಆಯ್ಕೆಯಾಗಿದ್ದು, ಆಯ್ಕೆಯಾಗಿರುವ ಗ್ರಾಮಗಳಲ್ಲಿ ಆದಿ ಸೇವಾ ಕೇಂದ್ರಗಳನ್ನು ಗುರುತಿಸಲಾಗಿದೆ.

ಈಗಾಗಲೇ ಜನಜಾತೀಯ ಗೌರವ ವರ್ಷ್ 2024 ರ ನವೆಂಬರ್ 15 ರಿಂದ 2025 ನವೆಂಬರ್ ವರೆಗೆ ಇದರ ಭಾಗವಾಗಿ ಆದಿ ಸೇವಾ ಪರ್ವ ಅಯೋಜಿಸಿ 2025ರ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ರವರೆಗೆ ಸದರಿ ಗ್ರಾಮಗಳಲ್ಲಿ ವಿವಿಧ ಚಟುವಟಿಗಳನ್ನು ಕೈಗೊಳ್ಳಲಾಗಿದೆ.

Participatory Rural Appraisal ವಿಧಾನದ ಮೂಲಕ Transect Village Walk ಮೂಲಕ ಗ್ರಾಮಸ್ಥರು ಮತ್ತು ಗ್ರಾಮದ ಜನಪ್ರತಿನಿಧಿಗಳು ಗ್ರಾಮ ಮಟ್ಟದ ವಿವಿಧ ಇಲಾಖೆಯ ಎಲ್ಲಾ ಅಧಿಕಾರಿಗಳು ಗ್ರಾಮದ ಪ್ರತಿ ಬೀದಿಗಳಲ್ಲಿ ಚಲನ-ವಲನಗಳ ಮೂಲಕ ಗ್ರಾಮಸ್ಥರ ಸಮ್ಮುಖದಲ್ಲಿಯೇ ಗ್ರಾಮದ ಅಭಿವೃದ್ಧಿಗೆ ಅವಶ್ಯವಿರುವ ಸೌಲಭ್ಯಗಳನ್ನು ಪಟ್ಟಿ ಮಾಡಿ ನಿಯಾಮನುಸಾರ ಅಂದಾಜು ವೆಚ್ಚಗಳ ಕ್ರಿಯಾ ಯೋಜನೆ ತಯಾರಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ನಿರ್ದೇಶನದಂತೆ ಮಹಾತ್ಮ ಗಾಂಧಿಜೀಯವರ ಜಯಂತಿ ಅಂಗವಾಗಿ ಆಯ್ಕೆಯಾದ ಗ್ರಾಮ, ಗ್ರಾಮ ಪಂಚಾಯಿತಿಗಳಲ್ಲಿ
ವಿಶೇಷ ಗ್ರಾಮ ಸಭೆಯನ್ನು ನಡೆಸಿ ತಯಾರಿಸಿದ ಕ್ರಿಯಾ ಯೋಜನೆ (Village Level Action Plan) ಗಳಿಗೆ ಅನುಮೋದನೆ ಪಡೆಯಲು ಕ್ರಮವಹಿಸಲಾಗಿದೆ.

ಅನುಮೋದನೆಗೊಂಡ ಕ್ರಿಯಾ ಯೋಜನೆಗಳನ್ನು ಸಂಬಂಧಿಸಿದ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಮೂಲಕ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಕೇಂದ್ರ ಕಛೇರಿಗೆ ಸಲ್ಲಿಸಲು ಮತ್ತು ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ, ಭಾರತ ಸರ್ಕಾರ, ನವದೆಹಲಿ ರವರ ಆದಿ ಪ್ರಸರಣಾ ಪೋರ್ಟಲ್‌ನಲ್ಲಿ ಜಿಲ್ಲೆಯ ಎಲ್ಲಾ ಕಾರ್ಯಕ್ರಮಗಳ ವಿವರಗಳನ್ನು ಅಪ್‌ಲೋಡ್ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಪ್ರಿಯಾಂಕ್ ಖರ್ಗೆ

ನಿಮ್ಮ ತಂದೆ, ನೀವು ಬೆಂಬಲಿಸುವ ನಕಲಿ ಗಾಂಧಿ ಕುಟುಂಬದಿಂದ ಆರ್ ಎಸ್ ಎಸ್ ನಿಷೇಧ ಸಾಧ್ಯವಿಲ್ಲ: ಪ್ರಿಯಾಂಕ್ ಖರ್ಗೆಗೆ ಸಾಲು ಸಾಲು ಪ್ರಶ್ನೆ ಕೇಳಿದ ಬಿಜೆಪಿ!

ರಾಶಿ

ಮಂಗಳವಾರದ ರಾಶಿ ಭವಿಷ್ಯ 14 ಅಕ್ಟೋಬರ್ 2025: ಈ ರಾಶಿಯವರಿಗೆ ಧನ ಲಾಭ 

ಸಿದ್ದರಾಮಯ್ಯ

ಜಸ್ಟ್ ಡಿನ್ನರ್ ಅಷ್ಟೇ, ರಾಜಕೀಯ ಚರ್ಚೆ ಇಲ್ಲ: ಸಚಿವ ಸಂಪುಟ ಪುನರ್ರಚನೆ ನಿರಾಕರಿಸಿದ ಸಿಎಂ ಸಿದ್ದರಾಮಯ್ಯ!

ದಾವಣಗೆರೆ

ದಾವಣಗೆರೆ ಪೊಲೀಸರ ಭರ್ಜರಿ ಬೇಟೆ: ಅಮಲು ಬರುವ ಸಿರಫ್ ಅಕ್ರಮವಾಗಿ ಮಾರಾಟ ಮಾಡ್ತಿದ್ದ ಐವರು ಆರೋಪಿಗಳ ಬಂಧನ!

ದಾವಣಗೆರೆ

ದಾವಣಗೆರೆ ವಿವಿ ಅಂತರಕಾಲೇಜು ಭಾರ ಎತ್ತುವ ಸ್ಪರ್ಧೆ: ಹೊನ್ನೂರು ಗೊಲ್ಲರಹಟ್ಟಿ ವಿದ್ಯಾರ್ಥಿಗಳ ಅತ್ಯುನ್ನತ ಸಾಧನೆ

ಪ್ರಭಾ ಮಲ್ಲಿಕಾರ್ಜುನ್

ಅರಣ್ಯ ಇಲಾಖೆ ಹುದ್ದೆಗಳ ನೇರ ನೇಮಕಾತಿಗೆ ಬಿಎಸ್ಸಿ ಅರಣ್ಯ ಶಾಸ್ತ್ರ ಪದವಿ ವಿದ್ಯಾರ್ಹತೆಯನ್ನಾಗಿ ಪರಿಗಣಿಸಿ: ಡಾ. ಪ್ರಭಾ ಮಲ್ಲಿಕಾರ್ಜುನ್ ಗೆ ವಿದ್ಯಾರ್ಥಿಗಳ ಮನವಿ

Leave a Comment