ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ದಿ ಪಾವಗಡ ಸೌಹಾರ್ದ ಮಲ್ಟಿಪರ್ಪಸ್ ಕೋ ಆಪರೇಟಿವ್ ಸೊಸೈಟಿ ವಾರ್ಷಿಕ ಸಭೆ, ಶಿರಾ ಕಟ್ಟಡದ ಡಿಜಿಟಲ್ ಉದ್ಘಾಟನೆ

On: September 18, 2024 8:50 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:18-09-2024

ಬೆಂಗಳೂರು: ಬೆಂಗಳೂರಿನ ದಿ ಪಾವಗಡ ಸೌಹಾರ್ದಮಲ್ಟಿಪರ್ಪಸ್ ಕೋ ಆಪರೇಟಿವ್ ಸೊಸೈಟಿಯ 2023-24ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ ಮತ್ತು ನೂತನ ಶಿರಾ ಕಟ್ಟಡದ ಡಿಜಿಟಲ್ ಉದ್ಘಾಟನಾ ಸಮಾರಂಭ ನಡೆಯಿತು.

ದಿ ಪಾವಗಡ ಸೌಹಾರ್ದ ಮಲ್ಟಿಪರ್ಪಸ್ ಕೋ ಆಪರೇಟಿವ್ ಸೊಸೈಟಿ ಲಿ. ಸಂಸ್ಥೆಯು ಬದ್ಧತೆ, ವಿಧೇಯತೆ, ಪ್ರಾಮಾಣಿಕತೆ, ಪಾರದರ್ಶಕತೆ ಮತ್ತು ಭ್ರಷ್ಟಾಚಾರ ಮುಕ್ತ ಸಂಸ್ಥೆಯಾಗಿದ್ದು, ಈಗಾಗಲೇ ರಾಜ್ಯಾದ್ಯಂತ 33 ಶಾಖೆಗಳನ್ನು ಹೊಂದಿದೆ. ದಾವಣಗೆರೆಯಲ್ಲಿಯೂ ಶಾಖೆ ಹೊಂದಿದ್ದು, ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ಮಂಡಳಿ ನಿರ್ದೇಶಕರೂ ಆದ ವಕೀಲರಾದ ಶಾಮನೂರು ಪ್ರಕಾಶ್ ಅವರು ಪಾಲ್ಗೊಂಡಿದ್ದರು.

2023-24ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ ಮತ್ತು ನೂತನ ಶಿರಾ ಕಟ್ಟಡದ ಡಿಜಿಟಲ್ ಉದ್ಘಾಟನಾ ಕಾರ್ಯಕ್ರಮವು ಯಲಹಂಕದ ಡಾ. ಬಿ. ಆರ್. ಅಂಬೇಡ್ಕರ್ ಭವನದಲ್ಲಿ ನಡೆಯಿತು. ವಿಶೇಷ ಸಭೆ ಮತ್ತು ನೂತನ ಶಿರಾ ಕಟ್ಟಡದ ಡಿಜಿಟಲ್ ಉದ್ಘಾಟನೆಯನ್ನು ಜಿ. ನಂಜನಗೌಡ ಅವರು ನೆರವೇರಿಸಿದರು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಹಿರಿಯ ಪತ್ರಕರ್ತ ಅಜಿತ್ ಹನುಮಕ್ಕನವರ್ ವಿಶೇಷ ಉಪನ್ಯಾಸ ನೀಡಿದರು.

ಯಲಹಂಕ ಶಾಸಕ ಎಸ್. ಆರ್. ವಿಶ್ವನಾಥ್ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ದಿ ಪಾವಗಡ ಸೌಹಾರ್ದ ಮಲ್ಟಿಪರ್ಪಸ್ ಕೋ ಆಪರೇಟಿವ್ ಸೊಸೈಟಿ ಲಿ.ನ ಸಂಸ್ಥಾಪಕ ಅಧ್ಯಕ್ಷ ಬಿ. ಹೆಚ್. ಕೃಷ್ಣಾರೆಡ್ಡಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದ ರೂಪುರೇಷೆಯನ್ನು ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದವರು ಅಚ್ಚುಕಟ್ಟಾಗಿ ನಡೆಸಿಕೊಟ್ಟರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment