ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಜುಲೈ 5 ಮತ್ತು 6ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಶುಕ್ರವಾರ ಬೆಳಗ್ಗೆ 8.15ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮನ, ಬಳಿಕ ಸರ್ಕ್ಯೂಟ್ ಹೌಸ್ ಆಗಮಿಸಲಿದ್ದಾರೆ. ಬಳಿಕ ಬೆಳಗ್ಗೆ 10.30ಕ್ಕೆ ಜಿ.ಪಂ. ಸಭಾಂಗಣದಲ್ಲಿ ತ್ರೈಮಾಸಿಕ ಕೆಡಿಪಿ ಸಭೆ ನಡೆಸಲಿದ್ದಾರೆ. ಸಂಜೆ 4ಗೆ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ದ.ಕ. ಮತ್ತು ಉಡುಪಿ ಜಿಲ್ಲೆಯ ಕಾಂಗ್ರೆಸ್ ಮುಖಂಡರೊಂದಿಗೆ ಸಭೆ ನಡೆಸಲಿದ್ದಾರೆ.
ಸಂಜೆ 6ಗಂಟೆಗೆ ಸರ್ಕ್ಯೂಟ್ ಹೌಸ್‌ನಿಂದ ಬಿಜೈ ಚರ್ಚ್ ಸರ್ಕಲ್ ವರೆಗಿನ ರಸ್ತೆಗೆ ಜಾರ್ಜ್ ಫೆರ್ನಾಂಡಿಸ್ ರಸ್ತೆ ನಾಮಕರಣ ಕಾರ್ಯಕ್ರಮದಲ್ಲಿ ಭಾಗಿ ರಾತ್ರಿ ನಗರದ ಸರ್ಕ್ಯೂಟ್ ಹೌಸ್ ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಜುಲೈ 6ರಂದು ಬೆಳಗ್ಗೆ 9.45ಕ್ಕೆ ಸುಳ್ಯ ಆಗಮನ, 10 ಗಂಟೆಗೆ ಸುಳ್ಯದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ. ಶಹೀದ್ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗಿ, ಮಧ್ಯಾಹ್ನ 2.30ಕ್ಕೆ ಕಡಬ ತಾಲೂಕು ಮಟ್ಟದ ಜನತಾದರ್ಶನ, ಬಳಿಕ ಮಂಗಳೂರಿಗೆ ಆಗಮಿಸಿ ರಾತ್ರಿ 11.10ರ ವಿಮಾನದಲ್ಲಿ ಬೆಂಗಳೂರಿಗೆ ತೆರಳಲಿದ್ದಾರೆ.