ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ರಾಜ್ಯದ ರೈತರ ಮಕ್ಕಳಿಗೆ ಮುಖ್ಯ ಮಾಹಿತಿ: ಕೃಷಿ ಡಿಪ್ಲೊಮಾ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನ

On: September 3, 2024 2:25 PM
Follow Us:
---Advertisement---

(Diploma Course) 2024-25 ನೇ ಸಾಲಿನ ಉಡುಪಿ ಜಿಲ್ಲೆಯ ಬ್ರಹ್ಮಾವರದ ಕೃಷಿ ಡಿಪ್ಲೊಮಾ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಿದ್ದು, ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ. ಈ ಕೋರ್ಸ್ ಗೆ ಅರ್ಜಿ ಸಲ್ಲಿಸಲು ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ಈ ಕೋರ್ಸ್ ಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?
ಕೃಷಿ ಡಿಪ್ಲೊಮಾ ಕೋರ್ಸ್ ಗೆ ಪ್ರವೇಶಾತಿ ಪಡೆಯಲು ಕೊನೆಯ ದಿನಾಂಕ ಸೆಪ್ಟೆಂಬರ್ 14 ರ ವರೆಗೆ ಕಾಲಾವಕಾಶ ಕಲ್ಪಿಸಲಾಗಿದೆ. ಈ ದಿನಾಂಕದೊಳಗೆ ಕೋರ್ಸ್ ಗೆ ಅರ್ಜಿ ಸಲ್ಲಿಸಬಹುದಾಗಿದೆ.

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?;
* ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪಾಸ್ ಆದ ಕನಿಷ್ಠ ಶೇ.45 (ಕನಿಷ್ಠ ಶೇ. 40 ಪ.ಜಾ ಮತ್ತು ಪ.ಪಂ/ಪ್ರವರ್ಗ-1) ಅಂಕಗಳೊಂದಿಗೆ ಪಾಸ್ ಆಗಿರಬೇಕು.
* 19 ವರ್ಷ ವಯೋಮಿತಿ ಮೀರದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ.50 ರಷ್ಟು ಮೀಸಲಾತಿ ಇರುತ್ತದೆ ಈ ಎರಡು ವರ್ಷದ ಡಿಪ್ಲೊಮಾ ಕೋರ್ಸ್ ನಲ್ಲಿ ಕೃಷಿ ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ, ಹೊನು ವಿಜ್ಞಾನ, ಕೃಷಿ ಜೇನುಕೃಷಿ ಹೀಗೆ ಕೃಷಿಗೆ ಸಂಬಂಧಿಸಿದ ಹಲವು ವಿಷಯಗಳ ಬಗ್ಗೆ, ನುರಿತ ವಿಜ್ಞಾನಿಗಳಿಂದ ಬೋಧನೆ ಇರುತ್ತದೆ.

ಹಾಗೆಯೇ ಕೃಷಿ ರಂಗದ ಪ್ರಾಯೋಗಿಕ ಪರಿಚಯ/ ಅನುಭವ ಆಧಾರಿತ ಕಲಿಕೆಗೆ ಹೆಚ್ಚಿನ ಮಹತ್ವ ನೀಡಲಾಗಿದೆ ಎಂದು ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಕುಲಸಚಿವರು ತಿಳಿಸಿದ್ದಾರೆ.

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

Leave a Comment