SUDDIKSHANA KANNADA NEWS/ DAVANAGERE/ DATE:23-10-2024
ಬೆಂಗಳೂರು: ಬಳ್ಳಾರಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನಗರದ ಹಳೇ ತಾಲ್ಲೂಕು ಕಚೇರಿ ಹಿಂಭಾಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಅ.24 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ನೇರ ಸಂದರ್ಶನ ಏರ್ಪಡಿಸಲಾಗಿದೆ.
ಸಂದರ್ಶನದಲ್ಲಿ ಎಲ್ ಮತ್ತು ಟಿ ಫೈನಾನ್ಸ್ ಪ್ರವೇಟ್ ಲಿಮಿಟೆಡ್ ಇವರು ತಮ್ಮಲ್ಲಿನ ಖಾಲಿ ಇರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳುವರು. ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ.
ನೇರ ಸಂದರ್ಶನದಲ್ಲಿ ಪುರುಷರಿಗೆ ಮಾತ್ರ ಅವಕಾಶ ಇದ್ದು, ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಆಧಾರ್ ಕಾರ್ಡ್ ಪ್ರತಿ ಮತ್ತು ಸ್ವ-ವಿವರಗಳೊಂದಿಗೆ ಅಂದು ನಡೆಯುವ ನೇರ ಸಂದರ್ಶನದಲ್ಲಿ ಆಸಕ್ತ ಅಭ್ಯರ್ಥಿಗಳು ಭಾಗವಹಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊ.9742718891, 9663263086, 9900827768, 6360408094 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪಿ. ಎಸ್. ಹಟ್ಟಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.