ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನ: ಜೂ.23 ರಂದು ಮಿನಿ ಉದ್ಯೋಗ ಮೇಳ

On: June 20, 2025 10:00 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE-20-06-2025

ಬಳ್ಳಾರಿ: ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜೂ.23 ರಂದು ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನೇರ ಸಂದರ್ಶನ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಹಟ್ಟಪ್ಪ ಅವರು ತಿಳಿಸಿದ್ದಾರೆ.

ಮೇಳದಲ್ಲಿ 3 ರಿಂದ 4 ಕಂಪನಿಗಳು ಭಾಗವಹಿಸಲಿದ್ದು, ಇವರು ತಮ್ಮಲ್ಲಿರುವ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳುವರು. ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ.

ವಿದ್ಯಾರ್ಹತೆ:

ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ ವಿದ್ಯಾರ್ಹತೆ ಹೊಂದಿರಬೇಕು. ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಿ, ಇದರ ಸದುಪಯೋಗ ಪಡೆದುಕೊಳ್ಳಬೇಕು. ಪುರುಷರು ಮತ್ತು ಮಹಿಳೆಯರು ಭಾಗವಹಿಸಬಹುದು.

ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್ ಪ್ರತಿ ಮತ್ತು ಸ್ವ-ವಿವರ (ಬಯೋಡೇಟಾ) ಗಳೊಂದಿಗೆ ಅಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊ.9742718891, 9663263086, 9900827768, 6360408094 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment