ದಾವಣಗೆರೆ: ಪ್ರಸಕ್ತ ಸಾಲಿಗೆ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವತಿಯಿಂದ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ದಿ ಮಂಡಳಿ ಯೋಜನೆಯಡಿ ವಿಪ್ರಸ್ವ ಉದ್ಯಮ ಸ್ವಯಂ ಉದ್ಯೋಗ ಕೈಗೊಳ್ಳಲು ನೇರ ಸಾಲ ಅರ್ಜಿ ಆಹ್ವಾನಿಸಲಾಗಿದೆ.
READ ALSO THIS STORY: ವಿಶ್ವದ ದೊಡ್ಡಣ್ಣನ ಮತ್ತೊಂದು ಕಳ್ಳಾಟ: ವಿಶ್ವಸಂಸ್ಥೆಯಲ್ಲಿ ಬಲೂಚ್ ಲಿಬರೇಶನ್ ಆರ್ಮಿ ನಿರ್ಬಂಧಿಸುವ ಪಾಕ್-ಚೀನಾ ಪ್ರಯತ್ನಕ್ಕೆ ಅಮೆರಿಕ ತಡೆ!
ವೃತ್ತಿಗಳಾದ ಹಸು, ಸಾಕಾಣಿಕೆ, ಗುಡಿ ಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ, ಟ್ಯಾಕ್ಸಿ ಇತ್ಯಾದಿ ವ್ಯಾಪಾರ ವಹಿವಾಟುಗಳನ್ನು ಕೈಗೊಳ್ಳಲು ಕನಿಷ್ಠ ರೂ.1 ಲಕ್ಷ ಹಾಗೂ ಗರಿಷ್ಠ ರೂ.2 ಲಕ್ಷಗಳ ಆರ್ಥಿಕ ನೆರವು ಒದಗಿಸಲಾಗುವುದು.
ಸಾಮಾನ್ಯ ಅರ್ಹತೆಗಳು:
- ಬ್ರಾಹ್ಮಣ ಸಮುದಾಯದ ಸಾಮಾನ್ಯ ವರ್ಗಕ್ಕೆ ಸೇರಿದ ಅರ್ಜಿದಾರರು ಚಾಲ್ತಿಯಲ್ಲಿರುವ ಆರ್ಥಿಕವಾಗಿ ಹಿಂದುಳಿದ ಪ್ರಮಾಣಪತ್ರ ಹೊಂದಿರಬೇಕು.
- ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
- ವಯಸ್ಸು 18 ರಿಂದ 65 ವರ್ಷದ ಒಳಗಿನವರಾಗಿರಬೇಕು. ಒಂದು ಕುಟುಂಬದಿಂದ ಒಬ್ಬರು ಮಾತ್ರ ಅರ್ಜಿ ಸಲ್ಲಿಸಬಹುದು.
- ಮಹಿಳೆಯರಿಗೆ 33%, ವಿಶೇಷಚೇತನರಿಗೆ ಶೇ 5% ಮೀಸಲಾತಿಯನ್ನು ನೀಡಲಾಗುವುದು.
- ಆಧಾರ್ ಕಾರ್ಡ್ ಗೆ ಮೊಬೈಲ್ ಸಂಖ್ಯೆ ಲಿಂಕ್ ಆಗಿರಬೇಕು