Site icon Kannada News-suddikshana

ಖಾಲಿ ನಿವೇಶನಗಳಲ್ಲಿ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಲು ಪಾಲಿಕೆಯಿಂದ ಸೂಚನೆ

SUDDIKSHANA KANNADA NEWS/ DAVANAGERE/ DATE:28-08-2024

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಖಾಲಿ ನಿವೇಶನಗಳ ಮಾಲೀಕರು ತಮ್ಮ ನಿವೇಶನಗಳಲ್ಲಿ ಹಾಗೂ ನಿರ್ಮಾಣ ಹಂತದಲ್ಲಿರುವ ಕಟ್ಟಡಗಳಲ್ಲಿ ನಿಂತ ನೀರಿನಲ್ಲಿ ಸೊಳ್ಳೆಗಳು ಅಭಿವೃದ್ಧಿಯಾಗುತ್ತಿದ್ದು, ಡೆಂಗ್ಯೂ ಪ್ರಕರಣಗಳ ಹೆಚ್ಚಳಕ್ಕೆ ಕಾರಣವಾಗಿರುತ್ತದೆ.

ನಿವೇಶನ ಮಾಲೀಕರು ತಮ್ಮ ಜವಾಬ್ದಾರಿ ಅರಿತು, ನೀರು ನಿಲ್ಲದಂತೆ ಮತ್ತು ಸೊಳ್ಳೆಗಳು ಅಭಿವೃದ್ಧಿಯಾಗದಂತೆ ನಿವೇಶನಗಳನ್ನು ಸ್ವಚ್ಛಗೊಳಿಸಿಕೊಳ್ಳಲು ಸೂಚಿಸಲಾಗಿದೆ. ಒಂದು ವೇಳೆ ಖಾಲಿ ನಿವೇಶನ, ಕಟ್ಟಡ ನಿರ್ಮಾಣ ಹಂತದಲ್ಲಿನ ನಿವೇಶನಗಳಲ್ಲಿ ನೀರು ನಿಂತು ಸೊಳ್ಳೆ ಲಾರ್ವಾಗಳು ಕಂಡುಬಂದಲ್ಲಿ ಮಹಾನಗರ ಪಾಲಿಕೆಯಿಂದ ದಂಡ ವಿಧಿಸುವುದರೊಂದಿಗೆ ನಿವೇಶನ ಸ್ವಚ್ಛಗೊಳಿಸಿ ಇದಕ್ಕೆ ತಗುಲುವ ವೆಚ್ಚವನ್ನು ಆಸ್ತಿತೆರಿಗೆ ಬಾಕಿ ರೂಪದಲ್ಲಿ ವಸೂಲು ಮಾಡಲು ಕ್ರಮ ವಹಿಸಲಾಗುವುದೆಂದು ಪಾಲಿಕೆ ಆಯುಕ್ತರಾದ ರೇಣುಕಾ ತಿಳಿಸಿದ್ದಾರೆ.

Exit mobile version