ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಡಿ.18ಕ್ಕೆ ಸಿರಿಧಾನ್ಯ ಮತ್ತು ಮರೆತುಹೋದ ಖಾದ್ಯಗಳ ಪಾಕ ಸ್ಪರ್ಧೆ: ಅರ್ಜಿ ಆಹ್ವಾನ

On: December 5, 2024 9:29 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:05-12-2024

ಬಳ್ಳಾರಿ: ಸಿರಿಧಾನ್ಯ ಮತ್ತು ಸಾವಯವ ಅಂತರಾಷ್ಟ್ರೀಯ ವಾಣಿಜ್ಯ ಮೇಳ-2025ರ ಅಂಗವಾಗಿ ಕೃಷಿ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತುಹೋದ ಖಾದ್ಯಗಳ ಪಾಕ ಸ್ಪರ್ಧೆಯನ್ನು ಡಿ.18 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರ ಕಚೇರಿ ಆವರಣದಲ್ಲಿ ಏರ್ಪಡಿಸಲಾಗಿದೆ.

ಜಿಲ್ಲೆಯ ಆಸಕ್ತ ಸಾರ್ವಜನಿಕರು ಭಾಗವಹಿಸಲು ಡಿ.5 ರಿಂದ 13 ರೊಳಗಾಗಿ ಸಂಬಂಧಿಸಿದ ತಾಲ್ಲೂಕು ಮತ್ತು ಜಿಲ್ಲಾ ಕಚೇರಿಯಿಂದ ನಿಗದಿತ ಅರ್ಜಿ ನಮೂನೆ ಪಡೆದು, ಭರ್ತಿಮಾಡಿ ತಮ್ಮ ಭಾವಚಿತ್ರದೊಂದಿಗೆ ಹೆಸರು, ವಿಳಾಸ ಮತ್ತು ತಯಾರಿಸುವ ಖಾದ್ಯ, ಬೇಕಾಗುವ ಸಾಮಗ್ರಿಗಳು, ತಯಾರಿಸಲು ಬೇಕಾಗುವ ಸಮಯ ಹಾಗೂ ವಿಧಾನದ ಸಂಕ್ಷಿಪ್ತ ಮಾಹಿತಿಯೊಂದಿಗೆ ಆಯ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಡಿ.13 ಮದ್ಯಾಹ್ನ 3 ಗಂಟೆಯವರೆಗೆ ಅವಕಾಶವಿದೆ ಅಥವಾ ಇ-ಮೇಲ್ ವಿಳಾಸ jdably@gmail.com ಗೆ ಮೇಲ್ ಮಾಡಬಹುದು.

ಪ್ರತಿ ಸ್ಪರ್ಧೆಗೆ ಒಂದೇ ತಿನಿಸು ಮಾಡಲು ಅವಕಾಶವಿದ್ದು, ಜಿಲ್ಲೆಯ ಎಲ್ಲಾ ಸಾರ್ವಜನಿಕರು ಭಾಗವಹಿಸಬಹುದು. ವಿದ್ಯಾರ್ಥಿಗಳು ಮತ್ತು ಕೃಷಿ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಲು ಅವಕಾಶವಿಲ್ಲ. ಹಿಂದಿನ ಸಾಲಿನಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನ ಪಡೆದವರು ಮರೆತುಹೋದ ಖಾದ್ಯಗಳ ಪಾಕಸ್ಪರ್ಧೆಯಲ್ಲಿ ಭಾಗವಹಿಸಬಹುದು.

ಮನೆಯಲ್ಲೇ ತಯಾರಿಸಿದ ಸಿರಿಧಾನ್ಯದ ಖಾದ್ಯ ಪ್ರದರ್ಶಿಸಲು ಬಳಸುವ ಸಾಮಗ್ರಿಗಳ ಮಾದರಿಗಳನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು. ಜಿಲ್ಲಾ ಮಟ್ಟದಲ್ಲಿ ಅತ್ಯುತ್ತಮ ಒಂದು ಸಿಹಿ, ಖಾರ (ಸಿರಿಧಾನ್ಯ ಖಾದ್ಯಗಳಿಗೆ ಮಾತ್ರ) ಮತ್ತು ಮರೆತುಹೋದ ಖಾದ್ಯದ ತಿನಿಸನ್ನು ಆಯ್ಕೆ ಮಾಡುವುದು.

ಜಿಲ್ಲಾ ಮಟ್ಟಕ್ಕೆ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನ ಸಿಹಿ, ಖಾರ (ಸಿರಿಧಾನ್ಯ ಖಾದ್ಯಗಳಿಗೆ ಮಾತ್ರ) ಮತ್ತು ಮರೆತುಹೋದ ಖಾದ್ಯದ ತಿನಿಸಿಗೆ ಕ್ರಮವಾಗಿ ತಲಾ ರೂ.5000/-, ರೂ.3000/- ಹಾಗೂ ರೂ.2000/- ನೀಡಲಾಗುವುದು.

ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿದೇಶಕರ ಕಚೇರಿ ಹಾಗೂ ಬಳ್ಳಾರಿ, ಸಿರುಗುಪ್ಪ, ಸಂಡೂರು ತಾಲ್ಲೂಕುಗಳ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ದೂ.08392-276224, ಮೊ.827792800, ಮೊ.8277927999 ಗೆ ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕ ಕೆ.ಎಂ.ಸೋಮಸುಂದರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment