ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಮಾಸಾಶನ ಪಡೆಯುವ ವೃದ್ಧರು ಡಿಸಿ ಬಳಿ ಹೇಳಿಕೊಂಡಿರುವ ಅಳಲೇನು…? ಮಾಸಾಶನ ತಲುಪದಿದ್ದಲ್ಲಿ ಶಿಸ್ತು ಕ್ರಮದ ಎಚ್ಚರಿಕೆ ಕೊಟ್ಟ ಜಿಲ್ಲಾಧಿಕಾರಿ..!

On: March 4, 2024 10:24 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:05-03-2024

ದಾವಣೆಗೆರೆ: ಸಾಮಾಜಿಕ ಭದ್ರತಾ ಯೋಜನೆಗಳಾದ ಸಂಧ್ಯಾಸುರಕ್ಷಾ, ವೃದ್ದಾಪ್ಯ, ವಿಧವಾ, ಅಂಗವಿಕಲರ ಮಾಸಾಶನ ಸೇರಿದಂತೆ ಇನ್ನಿತರೆ ಮಾಸಾಶನಗಳನ್ನು ಅಂಚೆ ಇಲಾಖೆಯಿಂದ ನಿಗದಿತ ಸಮಯಕ್ಕೆ ತಲುಪಿಸಬೇಕೆಂದು ಜಿಲ್ಲಾಧಿಕಾರಿ ಡಾ. ಎಂ. ವಿ. ವೆಂಕಟೇಶ್ ಸೂಚನೆ ನೀಡಿದರು.

ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಅಂಚೆ ಇಲಾಖೆ ಅಧಿಕಾರಿಗಳು ಹಾಗೂ ಸಾಮಾಜಿಕ ಭದ್ರತಾ ಯೋಜನೆ ಅನುಷ್ಟಾನಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಪ್ರತಿ ತಿಂಗಳು ಸಾಮಾಜಿಕ ಭದ್ರತಾ ಯೋಜನೆ ಮಾಸಾಶನ ಸಕಾಲದಲ್ಲಿ ತಲುಪದ ಕಾರಣ ವಯೋವೃದ್ದರಿಗೆ ಜೀವನ ನಿರ್ವಹಣೆ ಹಾಗೂ ದಿನನಿತ್ಯದ ಖರ್ಚುವೆಚ್ಚಗಳಿಗೆ ಸಮಸ್ಯೆಯಾಗಿದೆ ಎಂದು ಹಲವು ಮಾಸಾಶನ
ಫಲಾನುಭವಿಗಳು ದೂರು ನೀಡಿದ್ದರು. ಅಂಚೆ ಇಲಾಖೆಯಿಂದ ಮಾಸಾಶನಗಳು ಸಕಾಲದಲ್ಲಿ ವಿತರಣೆಯಾಗಿದೆಯೇ ಇಲ್ಲವೋ ಎಂಬ ಬಗ್ಗೆ ಪರಿಶೀಲನೆ ನಡೆಸಬೇಕು. ಮಾಸಾಶನದ ಮಾಹಿತಿ ಕೇಳಲು ಬರುವವರಿಗೆ ಅಂಚೆ ಕಚೇರಿಯಲ್ಲಿ ಸೌಜನ್ಯತೆಯಿಂದ ವರ್ತನೆ ಮಾಡುವ ಜೊತೆಗೆ ಅವರ ಖಾತೆಯಲ್ಲಿ ಹಣ ಜಮಾ ಆಗಿರುವ ಬಗ್ಗೆ ನಿಖರ ಮಾಹಿತಿಯನ್ನು ನೀಡಬೇಕು ಎಂದು ಸೂಚಿಸಿದರು.

ಕೆಲವೊಂದು ವೇಳೆ ಅಂಚೆ ಇಲಾಖೆ ನೌಕರರು ವಿತರಣೆಯ ವೇಳೆ ವಿಳಂಬ ಮಾಡುವ ಸಂಭವವಿದ್ದು ಇದನ್ನು ಪೋಸ್ಟ್ ಮಾಸ್ಟರ್ ಪ್ರತಿನಿತ್ಯ ಪರಿಶೀಲನೆ ಮಾಡಿಕೊಳ್ಳಬೇಕೆಂದು ತಿಳಿಸಿ ಮುಂದಿನ ದಿನಗಳಲ್ಲಿ ಸರ್ಕಾರದಿಂದ
ಜಮಾ ಮಾಡಿದ್ದರೂ ಮಾಸಾಶನ ತಲುಪದಿದ್ದಲ್ಲಿ ಅಂತಹ ಸಿಬ್ಬಂದಿಯ ಮೇಲೆ ಶಿಸ್ತುಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದರು.

ಮಾಸಾಶನ ಪಾವತಿಯ ಹಂತಗಳು; ಅಂಚೆ ಮೂಲಕ ಪಡೆಯುತ್ತಿರುವ ಸಾಮಾಜಿಕ ಭದ್ರತಾ ಮಾಸಾಶನವು ಆಧಾರ್ ಬೇಸ್ಡ್ ಡಿಬಿಟಿ ಮೂಲಕ ನೇರವಾಗಿ ಅವರ ಖಾತೆಗೆ ಜಮಾ ಮಾಡಲಾಗುತ್ತದೆ. ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ಮತ್ತು ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಖಾತೆ ಇರುತ್ತದೆ. ಅಂಚೆ ಎಸ್.ಬಿ. ಖಾತೆಯಿಂದ ಮಾಸಾಶನ ಪಾವತಿಗೆ ಅವರ ಮನೆ ಬಾಗಿಲಲ್ಲಿ ಪಾವತಿಸಲು ಹಿಂಪಡೆಯುವ ನಮೂನೆಗೆ ಸಹಿ ಮತ್ತು ಇದಕ್ಕೆ ಗೆಜಿಟೆಡ್ ಅಧಿಕಾರಿಗಳ ಸಹಿ, ಸಾಕ್ಷಿಗಳ ಸಹಿ ಪಡೆದು ಮನೆ ಬಾಗಿಲಲ್ಲಿ ವಿತರಣೆ ಮಾಡಲಾಗುತ್ತದೆ ಎಂದು ಹೇಳಿದರು.

ಇಂಡಿಯಾ ಪೋಸ್ಟ್ ಪೇಮೆಂಟ್ ವ್ಯವಸ್ಥೆಯಡಿ ಅಂಚೆ ಕಚೇರಿಯಲ್ಲಿ ಹಾಗೂ ಮನೆ ಬಾಗಿಲಲ್ಲಿ ಬಯೋಮೆಟ್ರಿಕ್ ಮೂಲಕ ಅಂಚೆಯಣ್ಣ ಪಾವತಿಸುವರು. ಮಾಸಾಶನ ಸರ್ಕಾರದಿಂದ ಅವರ ಖಾತೆಗೆ ಜಮೆಯಾದ ಬಗ್ಗೆ ಅವರು ನೀಡಿರುವ ಮೊಬೈಲ್‍ಗೆ ಮೆಸೇಜ್ ಹೋಗುತ್ತದೆ. ಫಲಾನುಭವಿಗಳು ಬಯೋಮೆಟ್ರಿಕ್ ನೀಡುವಾಗ ಮತ್ತು ವಿತ್‍ಡ್ರಾ ನಮೂನೆಗೆ ಸಹಿ ಮಾಡುವಾಗ ಖಾತರಿ ಮಾಡಿಕೊಳ್ಳಬೇಕಾಗುತ್ತದೆ ಎಂದು ಹೇಳಿದರು.

ಸಭೆಯಲ್ಲಿ ಅಂಚೆ ಅಧೀಕ್ಷಕ ಚಂದ್ರಶೇಖರ್, ಸಾಮಾಜಿಕ ಭದ್ರತಾ ಯೋಜನೆ ಸಹಾಯಕ ನಿರ್ದೇಶಕರಾದ ಪುಷ್ಪಾ ಹಾಗೂ ಅಂಚೆ ಇಲಾಖೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment